AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಒಂದೇ ಕರೆಯಲ್ಲಿ ಸಿಗುತ್ತೆ ಪೊಲೀಸ್-ಆರೋಗ್ಯ-ಅಗ್ನಿಶಾಮಕ ಸೇವೆ; ರಾಜ್ಯದಲ್ಲಿ ಹೈಟೆಕ್ ‘ಹೆಲ್ತ್ ಎಮರ್ಜೆನ್ಸಿ ಸೆಂಟರ್’ ಲೋಕಾರ್ಪಣೆ!

ರಾಜ್ಯದಲ್ಲಿ ತುರ್ತು ಸೇವೆಗಳನ್ನು ಸುಲಭಗೊಳಿಸಲು ‘ಹೆಲ್ತ್ ಎಮರ್ಜೆನ್ಸಿ ಆಪರೇಷನ್ ಸೆಂಟರ್’ ಆರಂಭಿಸಲಾಗಿದೆ. ಆರೋಗ್ಯ, ಪೊಲೀಸ್ ಮತ್ತು ಅಗ್ನಿಶಾಮಕ ದಳದಂತಹ ಸೇವೆಗಳನ್ನು ಒಂದೇ ಸೂರಿನಡಿ ಲಭ್ಯವಿದ್ದು, ಈ ಕೇಂದ್ರವು 24 ಘಂಟೆ ಕಾರ್ಯ ನಿರ್ವಹಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇನ್ಮುಂದೆ ಒಂದೇ ಕರೆಯಲ್ಲಿ ಸಿಗುತ್ತೆ ಪೊಲೀಸ್-ಆರೋಗ್ಯ-ಅಗ್ನಿಶಾಮಕ ಸೇವೆ; ರಾಜ್ಯದಲ್ಲಿ ಹೈಟೆಕ್ 'ಹೆಲ್ತ್ ಎಮರ್ಜೆನ್ಸಿ ಸೆಂಟರ್' ಲೋಕಾರ್ಪಣೆ!
ರಾಜ್ಯದಲ್ಲಿ ಹೈಟೆಕ್ 'ಹೆಲ್ತ್ ಎಮರ್ಜೆನ್ಸಿ ಸೆಂಟರ್' ಲೋಕಾರ್ಪಣೆ
ವಿನಯ್​ ಕಾಶಪ್ಪನವರ್​
| Edited By: |

Updated on: May 08, 2026 | 8:06 AM

Share

ಬೆಂಗಳೂರು, ಮೇ 08: ಜನರಿಗೆ ತುರ್ತು ಸಂದರ್ಭಗಳಲ್ಲಿ ಆರೋಗ್ಯ ಸೇವೆ ಪಡೆಯಲು ಸುಲಭ ದಾರಿ ಸಿಕ್ಕಿದ್ದು, ಆರೋಗ್ಯ ಇಲಾಖೆಯು ಅತ್ಯಾಧುನಿಕ ತಂತ್ರಜ್ಞಾನದಡಿ ‘ಹೆಲ್ತ್ ಎಮರ್ಜೆನ್ಸಿ ಆಪರೇಷನ್ ಸೆಂಟರ್’ (HEOC) ಆರಂಭಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಈ ನೂತನ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ. ಈ ಕೇಂದ್ರವು ಕೇವಲ ಒಂದು ಸಹಾಯವಾಣಿಯಾಗಿರದೆ, ವಿವಿಧ ಇಲಾಖೆಗಳ ಸಮನ್ವಯದ ಕೊಂಡಿಯಾಗಿ ಕಾರ್ಯನಿರ್ವಹಿಸಲಿದೆ.

ಮುಖ್ಯಾಂಶಗಳು

  • ತುರ್ತು ಸೇವೆಗಳಿಗಾಗಿ ರಾಜ್ಯದಲ್ಲಿ ಅತ್ಯಾಧುನಿಕ ಹೆಲ್ತ್ ಎಮರ್ಜೆನ್ಸಿ ಆಪರೇಷನ್ ಸೆಂಟರ್ ಆರಂಭ.
  •  ಆರೋಗ್ಯ, ಪೊಲೀಸ್ ಮತ್ತು ಅಗ್ನಿಶಾಮಕ ಸೇವೆಗಳು ಇನ್ಮುಂದೆ ಒಂದೇ ಸೂರಿನಡಿ ಲಭ್ಯ.
  • ಈ ಕೇಂದ್ರವು ದಿನದ ಇಪ್ಪತ್ನಾಲ್ಕು ಗಂಟೆಯೂ ಸಾರ್ವಜನಿಕರ ತುರ್ತು ಸೇವೆಗೆ ಲಭ್ಯವಿರುತ್ತದೆ.

ಏನಿದರ ವಿಶೇಷತೆ?

ಈ ಕೇಂದ್ರವು WHO ಮಾರ್ಗದರ್ಶನದಂತೆ ಮತ್ತು ‘ಪ್ರಧಾನಮಂತ್ರಿ ಆಯುಷ್ಮಾನ್ ಭಾರತ ಆರೋಗ್ಯ ಮೂಲಸೌಕರ್ಯ ಮಿಷನ್’ ಅಡಿಯಲ್ಲಿ ಸ್ಥಾಪಿತವಾಗಿದೆ. ಇಲ್ಲಿ ಕೇವಲ ಆರೋಗ್ಯ ಇಲಾಖೆಯಷ್ಟೇ ಅಲ್ಲದೆ, ತುರ್ತು ಸಂದರ್ಭಗಳಲ್ಲಿ ಕಂದಾಯ, ವಿಪತ್ತು ನಿರ್ವಹಣಾ ಪ್ರಾಧಿಕಾರ, ಪೊಲೀಸ್ ಮತ್ತು ಅಗ್ನಿಶಾಮಕ ದಳದಂತಹ ಪ್ರಮುಖ ಸೇವೆಗಳು ಒಂದೇ ಸೂರಿನಡಿ ಸಿಗಲಿವೆ.

ಈ ಕೇಂದ್ರವು ದಿನದ 24 ಗಂಟೆಯೂ ಸಕ್ರಿಯವಾಗಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಕೇಂದ್ರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುತ್ತದೆ. ಸಾಂಕ್ರಾಮಿಕ ರೋಗಗಳ ಉಲ್ಬಣ, ಬೆಂಕಿ ಅವಘಡ ಅಥವಾ ಪ್ರಕೃತಿ ವಿಕೋಪದಂತಹ ಕ್ಲಿಷ್ಟಕರ ಪರಿಸ್ಥಿತಿಗಳಲ್ಲಿ ತಕ್ಷಣ ಮಾಹಿತಿ ವಿನಿಮಯ ಮಾಡಿ, ಸ್ಥಳೀಯ ಮಟ್ಟದಲ್ಲಿ ಸೂಕ್ತ ನಿರ್ದೇಶನ ನೀಡಲು ಇದು ಸಹಕಾರಿಯಾಗಿದೆ. ಹಲವಾರು ಸಹಾಯವಾಣಿಗಳಿಗೆ ಕರೆ ಮಾಡಿ ಕಾಯುವ ಬದಲು, ಈಗ ಒಂದೇ ಕೇಂದ್ರದ ಮೂಲಕ ಎಲ್ಲಾ ತುರ್ತು ಸೇವೆಗಳನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ ಪೀಣ್ಯ ಕೈಗಾರಿಕೆಗಳಿಗೆ ಯುದ್ಧದ ಬಿಸಿ: ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ, ಸಾವಿರಾರು ಕಾರ್ಮಿಕರಿಗೆ ಕೆಲಸ ಕಳೆದುಕೊಳ್ಳುವ ಭೀತಿ

ಆರೋಗ್ಯ ಸಚಿವ ಏನಂದ್ರು?

ಈ ವೇಳೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೊವಿಡ್ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ನಿರ್ವಹಣೆ ಕೊರತೆ ಇತ್ತು. ಮುಂದೆ ಈ ರೀತಿಯ ಪರಿಸ್ಥಿತಿ ಬಂದಾಗ ಸ್ಪಷ್ಟ ನಿರ್ವಹಣೆಗೆ ಸರಿಯಾದ ವ್ಯವಸ್ಥೆ ಬೇಕು. WHO ಮತ್ತು ವಿಶ್ವ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ಆಗಿದೆ. ದೇಶದ ಎಲ್ಲಾ ಕಡೆ ಈ ಕಾರ್ಯಕ್ರಮ ನಡೆಯುತ್ತಿದೆ. ನಮ್ಮ ರಾಜ್ಯದಲ್ಲಿ ಇದನ್ನು ಸ್ಥಾಪನೆ ಮಾಡಿದ್ದೇವೆ. ಆಧುನಿಕ ತಂತ್ರಜ್ಞಾನ ಬಳಕೆ ಮಾಡಿ ಈ ಕೇಂದ್ರ ನಿರ್ಮಾಣ ಮಾಡಿದ್ದೇವೆ.ಇಲಾಖೆ ಅಧಿಕಾರಿಗಳು ಇತರೆ ಅಧಿಕಾರಿಗಳು ಎಲ್ಲರು ಸಹ ಕನೆಕ್ಟ್ ಮಾಡೋಕೆ ಸಹಾಯಕವಾಗಲಿದೆ. ಆ್ಯಂಬುಲೆನ್ಸ್ ಕೂಡ ಇದರ ಜೊತೆ ಸಹಯೋಗದಲ್ಲಿ ಇರುತ್ತದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ