AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬೆನ್ನಲ್ಲೇ ಪಿಂಚಣಿ ಫಲಾನುಭವಿಗಳ ಸರ್ಜರಿಗೆ ಮುಂದಾದ ರಾಜ್ಯ ಸರ್ಕಾರ

Pension Scheme Verification: ರಾಜ್ಯ ಸರ್ಕಾರವು ಅನರ್ಹ ಪಿಂಚಣಿದಾರರಿಗೆ ಬ್ರೇಕ್ ಹಾಕಲು ಮುಂದಾಗಿದ್ದು, 'ಸಂಯೋಜನೆ ಆ್ಯಪ್' ಮೂಲಕ ಪರಿಶೀಲನೆ ನಡೆಸಿ ಸೂಕ್ತ ದಾಖಲೆ ಸಲ್ಲಿಸದ 16.42 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಪಿಂಚಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಸಂಬಂಧಪಟ್ಟ ತಹಶೀಲ್ದಾರ್ ಮೂಲಕ ಫಲಾನುಭವಿಗಳಿಗೆ ನೋಟಿಸ್ ಸಿಗಲಿದ್ದು, ಅಂತವರು 30 ದಿನದೊಳಗೆ ಅರ್ಹತಾ ದಾಖಲೆ ಸಲ್ಲಿಸಬೇಕು ಎಂದು ಕಂದಾಯ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬೆನ್ನಲ್ಲೇ ಪಿಂಚಣಿ ಫಲಾನುಭವಿಗಳ ಸರ್ಜರಿಗೆ ಮುಂದಾದ ರಾಜ್ಯ ಸರ್ಕಾರ
ಸಾಂದರ್ಭಿಕ ಚಿತ್ರImage Credit source: Getty Images
ಪ್ರಸನ್ನ ಗಾಂವ್ಕರ್​
| Edited By: |

Updated on:Jun 25, 2026 | 7:36 PM

Share

ಮುಖ್ಯಾಂಶಗಳು

  • ಗ್ಯಾರಂಟಿಗಳ ಬೆನ್ನಲ್ಲೇ ಪಿಂಚಣಿ ಫಲಾನುಭವಿಗಳ ಪರಿಷ್ಕರಣೆ
  • ಸಂಯೋಜನೆ ಆ್ಯಪ್ ಮೂಲಕ ಸಂದೇಹಾಸ್ಪದ ಖಾತೆಗಳ ಪರಿಶೀಲನೆ
  • 16.42 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಖಾತೆ ತಾತ್ಕಾಲಿಕ ಸ್ಥಗಿತ

ಬೆಂಗಳೂರು, ಜೂನ್​​ 25: ಅನರ್ಹರೂ ಪ್ರಯೋಜನ ಪಡೆಯುತ್ತಿರುವ ಹಿನ್ನೆಲೆ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಪರಿಷ್ಕರಣೆಗೆ ಮುಂದಾಗಿದ್ದ ರಾಜ್ಯ ಸರ್ಕಾರವೀಗ ಪಿಂಚಣಿ ಫಲಾನುಭವಿಗಳ ಪರಿಶೀಲನೆಗೂ ಮುಂದಾಗಿದೆ. ಸಂಯೋಜನೆ ಆ್ಯಪ್ ಮೂಲಕ ಸಂದೇಹಾಸ್ಪದ ಖಾತೆಗಳ ಪರಿಶೀಲನೆ ನಡೆಸುವ ಮೂಲಕ ಪಾರದರ್ಶಕತೆ, ಅರ್ಹತೆ ಖಚಿತಪಡಿಸಿಕೊಳ್ಳಲು ನಿರ್ಧರಿಸಿದೆ. ಜೊತೆಗೆ ಅನರ್ಹರ ಪಿಂಚಣಿ ಸ್ಥಗಿತಕ್ಕೆ ಕ್ರಮಕ್ಕೆ ಸೂಚಿಸಿದೆ.

23,13,664 ಫಲಾನುಭವಿಗಳ ವಿವರದ ಬಗ್ಗೆ ಸಂಶಯ

ಎಲ್ಲ ಬಗೆಯ ಪಿಂಚಣಿಗಳು ಸೇರಿ ರಾಜ್ಯದಲ್ಲಿ ಒಟ್ಟು 83,11,493 ಫಲಾನುಭವಿಗಳು ಇದ್ದಾರೆ. ಪ್ರಾಥಮಿಕ ತಪಾಸಣೆಯಲ್ಲಿ ಈ ಪೈಕಿ 23,13,664 ಫಲಾನುಭವಿಗಳ ವಿವರದ ಬಗ್ಗೆ ಸಂಶಯ ಮೂಡಿದೆ ಎ್ನಲಾಗಿದೆ. ಹೀಗಾಗಿ ಸಂದೇಹಾಸ್ಪದ ಖಾತೆಗಳನ್ನು ಸಂಯೋಜನೆ ಌಪ್ ಮೂಲಕ ಪರಿಶೀಲನೆ ನಡೆಸಿ ಅರ್ಹ ಫಲಾನುಭವಿಗಳಿಗೆ ಮಾತ್ರ ಪಿಂಚಣಿ ಪಾವತಿಗೆ ಸರ್ಕಾರ ಮುಂದಾಗಿದೆ. 23,13,664 ಸಂಶಯಾಸ್ಪದ ಫಲಾನುಭವಿಗಳ ಪೈಕಿ 3,35,610 ಫಲಾನುಭವಿಗಳು ಪಿಂಚಣಿಗೆ ಅರ್ಹರೆಂದು ಪರಿಶೀಲನೆ ಬಳಿಕ ಗ್ರಾಮ ಆಡಳಿತಾಧಿಕಾರಿಗಳು ವರದಿ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಡಿಕೆಶಿ ಕನಸಿನ ಭೂ ಗ್ಯಾರಂಟಿಗೆ ಭರ್ಜರಿ ರೆಸ್ಪಾನ್ಸ್; 6ನೇ ಸುತ್ತಿನ ನನ್ನ ಖಾತೆ ನನ್ನ ಹಕ್ಕು ಅಭಿಯಾನ ಯಶಸ್ವಿ

ಮೇ ತಿಂಗಳಲ್ಲಿ ಒಟ್ಟು 63,04,554 ಫಲಾನುಭವಿಗಳಿಗೆ ಪಿಂಚಣಿ ಪಾವತಿ ಮಾಡಲಾಗಿದ್ದು, ಅನರ್ಹರು ಮತ್ತು ತಪ್ಪು ದಾಖಲೆ ನೀಡಿದವರಿಗೆ ಪಿಂಚಣಿ ರದ್ದಾಗಿದೆ. ಪಿಂಚಣಿ ಮಂಜೂರಾತಿ ಸಮಯದಲ್ಲಿ ವಯಸ್ಸಿನ ದೃಢೀಕರಣದ ಬಗ್ಗೆ ತಪ್ಪು ಮಾಹಿತಿ, ನಕಲಿ ದಾಖಲೆ ಸಲ್ಲಿಸಿದ್ದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಗ್ರಾಮ ಆಡಳಿತ ಅಧಿಕಾರಿ ಪರಿಶೀಲನೆ ವೇಳೆ ಯಾವುದೇ ದಾಖಲೆ ಸಲ್ಲಿಸದ, ವಿಳಾಸದಲ್ಲಿ ವಾಸವಿಲ್ಲದ, ಆದಾಯ ಪ್ರಮಾಣಪತ್ರ ಸಲ್ಲಿಸದ 16,42,303 ಫಲಾನುಭವಿಗಳ ಪಿಂಚಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಈ ಸಂಬಂಧ ಸೂಕ್ತ ತಿಳಿವಳಿಕೆ ಪತ್ರವನ್ನು ನೀಡಲು ಕಂದಾಯ ಇಲಾಖೆಗೆ ಆದೇಶಿಸಲಾಗಿದೆ. ಸಂಬಂಧಪಟ್ಟ ತಹಶೀಲ್ದಾರ್ ಮೂಲಕ ಫಲಾನುಭವಿಗಳಿಗೆ ನೋಟಿಸ್ ಸಿಗಲಿದ್ದು, ಅಂತವರು 30 ದಿನದೊಳಗೆ ಅರ್ಹತಾ ದಾಖಲೆ ಸಲ್ಲಿಸಬೇಕು ಎಂದು ಕಂದಾಯ ಇಲಾಖೆ ಜಂಟಿ ನಿರ್ದೇಶಕರು ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:34 pm, Thu, 25 June 26

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು