ವಿಧಾನಸಭೆಯಲ್ಲಿ ಕಿಷ್ಕಿಂದ, ಸಪ್ತಗಿರಿ ಸೇರಿ ಆರು ಖಾಸಗಿ ವಿವಿಗಳ ವಿಧೇಯಕ ಅಂಗೀಕಾರ

ಬೆಳಗಾವಿ ಅಧಿವೇಶನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ವಾಪಸ್‌ ಪಡೆದಿದ್ದ ಆರು ಖಾಸಗಿ ವಿಶ್ವವಿದ್ಯಾಲಯಗಳ ಮಸೂದೆಗಳು ವಿಧಾನಸಭೆಯಲ್ಲಿ ಇಂದು ಅಂಗೀಕಾರ ಪಡೆದುಕೊಂಡಿತು.

ವಿಧಾನಸಭೆಯಲ್ಲಿ ಕಿಷ್ಕಿಂದ, ಸಪ್ತಗಿರಿ ಸೇರಿ ಆರು ಖಾಸಗಿ ವಿವಿಗಳ ವಿಧೇಯಕ ಅಂಗೀಕಾರ
ವಿಧಾನಮಂಡಲ ಅಧಿವೇಶನ
Follow us
Rakesh Nayak Manchi
|

Updated on:Feb 21, 2023 | 8:37 PM

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ (Belagavi Session) ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ವಾಪಸ್‌ ಪಡೆದಿದ್ದ ಆರು ಖಾಸಗಿ ವಿಶ್ವವಿದ್ಯಾಲಯಗಳ ಮಸೂದೆಗಳು (Six Private Universities Bills) ಇಂದು ವಿಧಾನಸಭೆಯಲ್ಲಿ (Karnataka Legislative Assembly) ಅಂಗೀಕಾರ ಪಡೆದುಕೊಂಡಿತು. ಕಿಷ್ಕಿಂದ ಖಾಸಗಿ ವಿಶ್ವವಿದ್ಯಾಲಯ, ಆಚಾರ್ಯ ಖಾಸಗಿ ವಿಶ್ವವಿದ್ಯಾಲಯ, ಸಪ್ತಗಿರಿ ಖಾಸಗಿ ವಿಶ್ವವಿದ್ಯಾಲಯ, ರಾಜ್ಯ ಒಕ್ಕಲಿಗರ ಸಂಘದ ಖಾಸಗಿ ವಿಶ್ವವಿದ್ಯಾಲಯ, ಜಿ.ಎಂ ಖಾಸಗಿ ವಿಶ್ವವಿದ್ಯಾಲಯ, ಟಿ.ಜಾನ್ ವಿಶ್ವವಿದ್ಯಾಲಯ ಮಸೂದೆ ಅಂಗೀಕಾರ ಪಡೆಯಿತು.

ಬೆಳಗಾವಿ ಅಧಿವೇಶನದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಆರು ಖಾಸಗಿ ವಿವಿಗಳ ಮಸೂದೆಯನ್ನು ಮಂಡಿಸಿದ್ದರು. ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ವಾಪಸ್ ಪಡೆಯಲಾಗಿತ್ತು. ಅದಾಗ್ಯೂ, ಫೆಬ್ರವರಿ 16ರಂದು ನಡೆದ ಬಜೆಟ್ ಅಧಿವೇಶನದಲ್ಲಿ ಈ ಮಸೂದೆಗಳನ್ನು ಮಂಡಿಸಲಾಗಿತ್ತು. ಈ ವೇಳೆ ಸದನದಲ್ಲಿ ಸದಸ್ಯ ಬಲ ಕೇವಲ 13 ಇದ್ದಿದ್ದರಿಂದ ಅಂಗೀಕಾರ ಪಡೆಯಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: ಧಮ್​ ಇದ್ದರೆ, ತಾಕತ್ತಿದ್ದರೆ ನನ್ನನ್ನು ಹೊಡೆದು ಹಾಕಿ ನೋಡೋಣ: ಸದನದಲ್ಲಿ ಗುಡುಗಿದಲ್ಲಿ ಸಿದ್ದರಾಮಯ್ಯ

ವಿಶ್ವವಿದ್ಯಾಲಯದ ಸ್ಥಾಪನೆಯ ಅಗತ್ಯದ ಬಗ್ಗೆ ವಿವರಿಸಿದ ಅಶ್ವತ್ಥನಾರಾಯಣ ಅವರು ಮಸೂದೆಗಳನ್ನು ಪರ್ಯಾಲೋಚಿಸಿ ಅಂಗೀಕರಿಸಬೇಕು ಎಂದು ಕೋರಿದ್ದರು. ಈ ವೇಳೆ ವಿಧಾನಸಭೆ ಪ್ರತಿಪಕ್ಷ ಉಪನಾಯಕ ಯು.ಟಿ. ಖಾದರ್‌, ಪ್ರಿಯಾಂಕ್‌ ಖರ್ಗೆ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್‌ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಸದನದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಸದಸ್ಯರು ಇಲ್ಲದೇ ಇದ್ದಾಗ ಮಸೂದೆಗಳನ್ನು ಪರ್ಯಾಲೋಚಿಸುವುದು ಸರಿಯಲ್ಲ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದರು.

ಈ ಕಾರಣಕ್ಕಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸದಸ್ಯ ಬಲ ಇಲ್ಲದಿರುವುದರಿಂದ ಮಸೂದೆ ಅಂಗೀಕರಿಸುವುದು ಸರಿಯಲ್ಲ ಎಂದು ಹೇಳಿ ಚರ್ಚೆಯನ್ನು ಮುಂದೂಡಿದ್ದರು. ಆದರೆ ಇಂದು ಸುಮಾರು 30ಕ್ಕೂ ಹೆಚ್ಚು ಸದಸ್ಯರು ಇದ್ದ ವೇಳೆ ಮಸೂದೆಗಳನ್ನು ಧ್ವನಿಮತಕ್ಕೆ ಹಾಕಿ ಅಂಗೀಕಾರ ಪಡೆಯಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:32 pm, Tue, 21 February 23

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್