ಅಧಿವೇಶನಕ್ಕೆ ಯಾರೂ ಗೈರಾಗುವಂತಿಲ್ಲ; ಕೊನೆಯಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಕೊಡಲಾಗುತ್ತದೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಅಧಿವೇಶನದ ಕೊನೆಯ ಭಾಗದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಕೊಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ನೀತಿ ನಿರೂಪಣಾ ಸಮಿತಿಯ ವಿಚಾರಗಳನ್ನು ಅಧಿವೇಶನದ ವೇಳೆ ಅಂತಿಮಗೊಳಿಸುತ್ತೇವೆ. ಕಾನ್ಸ್ಟಿಟ್ಯೂಷನಲ್ ಕ್ಲಬ್ ವಿಚಾರವನ್ನು ಕೂಡಾ ಚರ್ಚೆ ಮಾಡುತ್ತೇವೆ. ಈ ಬಾರಿ ಅಧಿವೇಶನದಲ್ಲಿ ಸಾರ್ವಜನಿಕರಿಗೆ ವೀಕ್ಷಿಸಲು ಅವಕಾಶ ಇದೆ.

ಅಧಿವೇಶನಕ್ಕೆ ಯಾರೂ ಗೈರಾಗುವಂತಿಲ್ಲ; ಕೊನೆಯಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಕೊಡಲಾಗುತ್ತದೆ: ವಿಶ್ವೇಶ್ವರ ಹೆಗಡೆ ಕಾಗೇರಿ
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
Follow us
TV9 Web
| Updated By: Skanda

Updated on: Sep 08, 2021 | 12:17 PM

ಬೆಂಗಳೂರು: ಸೆಪ್ಟೆಂಬರ್ 13 ರಿಂದ ವಿಧಾನಸಭೆ ಅಧಿವೇಶನ ಹಿನ್ನೆಲೆ ವಿಧಾನಸೌಧದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗೋಷ್ಠಿ ನಡೆಸಿದ್ದಾರೆ. ರಾಜ್ಯ ಸರ್ಕಾರದಿಂದ ನಮಗೆ 18 ಬಿಲ್‌ಗಳು ಬಂದಿವೆ. ಮೊದಲೇ‌ ಬಿಲ್ ಬರಬೇಕೆಂದು ಸರ್ಕಾರಕ್ಕೆ ತಿಳಿಸಿದ್ದೆ. ಅಧಿವೇಶನದ ವೇಳೆ ರಜೆ ಕೇಳದಂತೆ ತಿಳಿಸಲಾಗಿದ್ದು, ಮುಖ್ಯಮಂತ್ರಿ ಹಾಗೂ ಎಲ್ಲಾ ಸಚಿವರ ಗಮನಕ್ಕೆ ಈ ವಿಷಯ ತರಲಾಗಿದೆ. ಸೆ.24ರಂದು ವಿಶೇಷ ಜಂಟಿ ಅಧಿವೇಶನ ಕರೆಯಲಾಗುತ್ತದೆ. ಅಲ್ಲಿ ಸಂಸದೀಯ ಮೌಲ್ಯಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ. ಬಹುಮುಖ್ಯವಾಗಿ ಅಧಿವೇಶನದ ಕೊನೆಯ ಭಾಗದಲ್ಲಿ ಪ್ರಶಸ್ತಿ ಕೊಡುವ ಬಗ್ಗೆ ಮಾತನಾಡಿದ್ದು, ಅತ್ಯುತ್ತಮ ಶಾಸಕ ಪ್ರಶಸ್ತಿ ಕೊಡುವ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಅಧಿವೇಶನದ ಅವಧಿಯಲ್ಲಿ ಯಾವುದೇ ಸಚಿವರು ರಜೆ ಕೇಳದಂತೆ ಮನವಿ ಮಾಡಲಾಗಿದೆ. ಅಲ್ಲದೇ ವಿಶೇಷ ಜಂಟಿ ಅಧಿವೇಶನಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನೂ ಆಹ್ವಾನಿಸುತ್ತೇವೆ. ಸೆ.24 ರ ಮಧ್ಯಾಹ್ನದ ನಂತರ ಜಂಟಿ ಅಧಿವೇಶನ ನಡೆಯುತ್ತದೆ. ಈ ಸಂಬಂಧ ಸಿಎಂ ಮತ್ತು ವಿಧಾನ ಪರಿಷತ್ ಸಭಾಪತಿ ಜತೆ ಚರ್ಚೆ ಮಾಡಿದ್ದೇನೆ ಎಂದು ವಿಧಾನಸೌಧದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ ನೀಡಿದ್ದಾರೆ.

ಸೆಪ್ಟೆಂಬರ್ 24 ರಂದು ಊಟದ ಸಮಯ ಮುಗಿದ ಬಳಿಕ ವಿಶೇಷ ಜಂಟಿ‌ ಅಧಿವೇಶನ ಕರೆಯಲಾಗುತ್ತದೆ. ಜಂಟಿ ಅಧಿವೇಶನದಲ್ಲಿ ಸಂಸದೀಯ ಮೌಲ್ಯಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಈ ಜಂಟಿ ಅಧಿವೇಶನಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಆಹ್ವಾನಿಸುತ್ತೇವೆ. ಇನ್ನಷ್ಟು ವಿಚಾರಗಳನ್ನು ಸದನ ಕಲಾಪ ಸಲಹಾ ಸಮಿತಿಯಲ್ಲಿ ಚರ್ಚೆ ಮಾಡುತ್ತೇವೆ. 24 ರಂದು ಶುಕ್ರವಾರ ಮಧ್ಯಾಹ್ನ ನಂತರ ಮಾತ್ರ ಈ ಜಂಟಿ ಅಧಿವೇಶನ ನಡೆಯುತ್ತದೆ. ಅಧಿವೇಶನದ ಕೊನೆಯ ಭಾಗದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಕೊಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ನೀತಿ ನಿರೂಪಣಾ ಸಮಿತಿಯ ವಿಚಾರಗಳನ್ನು ಅಧಿವೇಶನದ ವೇಳೆ ಅಂತಿಮಗೊಳಿಸುತ್ತೇವೆ. ಕಾನ್ಸ್ಟಿಟ್ಯೂಷನಲ್ ಕ್ಲಬ್ ವಿಚಾರವನ್ನು ಕೂಡಾ ಚರ್ಚೆ ಮಾಡುತ್ತೇವೆ. ಈ ಬಾರಿ ಅಧಿವೇಶನದಲ್ಲಿ ಸಾರ್ವಜನಿಕರಿಗೆ ವೀಕ್ಷಿಸಲು ಅವಕಾಶ ಇದೆ. ಆದರೆ, ಹಾಗೆಂದ ಮಾತ್ರಕ್ಕೆ ಅಧಿವೇಶನದ ವೇಳೆ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಬರುವುದು ಬೇಡ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಧಿವೇಶನಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಿ, ರಜೆ ಕೇಳಬೇಡಿ; ಶಾಸಕರು, ಸಚಿವರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ 

ಸಭಾಧ್ಯಕ್ಷನಾಗಿ ಮುಂದಿನ 2 ವರ್ಷ ಕಾಲ ಕೆಲಸ ಮಾಡುವ ಬಗ್ಗೆ ಹೇಳಿದ್ದೇನೆ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

(Karnataka Legislative Assembly Speaker Vishweshwar Hegde Kageri Press Meet)

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ