Karnataka Legislative council election Results: ವಿಧಾನ ಪರಿಷತ್ ಏಳು ಸ್ಥಾನಗಳಿಗೆ ಅವಿರೋಧ ಆಯ್ಕೆ -ಬಿಜೆಪಿ 4, ಕಾಂಗ್ರೆಸ್ 2, ಜೆಡಿಎಸ್ 1

| Updated By: ಸಾಧು ಶ್ರೀನಾಥ್​

Updated on: May 27, 2022 | 5:23 PM

ಇಂದು ನಾಮಪತ್ರ ಹಿಂಪಡೆಯುವ ಸಮಯ ಮೀರಿದ ನಂತರ ನಾಮಪತ್ರ ಸಲ್ಲಿಸಿದ್ದ 7 ಅಭ್ಯರ್ಥಿಗಳಿಗೆ ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿಗಳೂ ಆದ ಶ್ರೀಮತಿ ವಿಶಾಲಾಕ್ಷಿ ಅವರು ಅವಿರೋಧ ಆಯ್ಕೆಯ ಪ್ರಮಾಣ ಪತ್ರಗಳನ್ನು ವಿತರಿಸದರು.

Karnataka Legislative council election Results: ವಿಧಾನ ಪರಿಷತ್ ಏಳು ಸ್ಥಾನಗಳಿಗೆ ಅವಿರೋಧ ಆಯ್ಕೆ -ಬಿಜೆಪಿ 4, ಕಾಂಗ್ರೆಸ್ 2, ಜೆಡಿಎಸ್ 1
ವಿಧಾನಪರಿಷತ್ ಏಳು ಸ್ಥಾನಗಳಿಗೆ ಅವಿರೋಧ ಆಯ್ಕೆ -ಬಿಜೆಪಿ 4, ಕಾಂಗ್ರೆಸ್ 2, ಜೆಡಿಎಸ್ 1
Follow us on

ಬೆಂಗಳೂರು: ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ದಿನಾಂಕ 03-06-2022 ರಂದು ನಿಗಧಿಯಾಗಿದ್ದ ಚುನಾವಣೆಗೆ ಸ್ಪರ್ಧಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿಗಳೂ ಆದ ವಿಶಾಲಾಕ್ಷಿ ಅವರು ಇಂದು ಘೋಷಿಸಿದರು.

ಮೇ 24 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು, ಮೇ 25 ರಂದು ಪರಿಶೀಲನೆ ಹಾಗೂ ಮೇ 27 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿತ್ತು. ಏಳು ಸ್ಥಾನಗಳಿಗೆ ಏಳು ಅಭ್ಯರ್ಥಿಗಳು ಮಾತ್ರ ಅಂತಿಮ ಕಣದಲ್ಲಿ ಉಳಿದಿದ್ದ ಕಾರಣಕ್ಕೆ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ( Karnataka Legislative council election Results).

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ 4, ಕಾಂಗ್ರೆಸ್ 2, ಜೆಡಿಎಸ್ 1:
ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಸವದಿ ಲಕ್ಷ್ಮಣ, ಟಿ. ನಾರಾಯಣ ಸ್ವಾಮಿ, ಶ್ರೀಮತಿ ಹೇಮಾಲತಾ ನಾಯಕ ಹಾಗೂ ಎಸ್. ಕೇಶವ ಪ್ರಸಾದ, ಭಾರತೀಯ ಕಾಂಗ್ರೆಸ್ ಪಕ್ಷದಿಂದ ಕೆ.ಅಬ್ದುಲ್ ಜಬ್ಬಾರ್ ಹಾಗೂ ಎಂ. ನಾಗರಾಜು. ಜೆಡಿಎಸ್ ಪಕ್ಷದಿಂದ ಶರವಣನ್. ಟಿ ಅವರು ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳಾಗಿದ್ದಾರೆ.

ಇಂದು ನಾಮಪತ್ರ ಹಿಂಪಡೆಯುವ ಸಮಯ ಮೀರಿದ ನಂತರ ನಾಮಪತ್ರ ಸಲ್ಲಿಸಿದ್ದ 7 ಅಭ್ಯರ್ಥಿಗಳಿಗೆ ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿಗಳೂ ಆದ ಶ್ರೀಮತಿ ವಿಶಾಲಾಕ್ಷಿ ಅವರು ಅವಿರೋಧ ಆಯ್ಕೆಯ ಪ್ರಮಾಣ ಪತ್ರಗಳನ್ನು ವಿತರಿಸದರು.

ಅತ್ಯುತ್ತಮ ವಿಧಾನಸಭೆ, ಪರಿಷತ್ ಪ್ರಶಸ್ತಿ ಆಯ್ಕೆಗೆ ಸಮಿತಿ ರಚನೆ:

ಅತ್ಯುತ್ತಮ ವಿಧಾನಸಭೆ, ಪರಿಷತ್ ಪ್ರಶಸ್ತಿ ಆಯ್ಕೆ ಮಾಡುವ ಸಲುವಾಗಿ ಆಯ್ಕೆ ಸಮಿತಿ ರಚನೆ ಮಾಡಿ ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ವಿಧಾನಸಭೆ ಸ್ಪೀಕರ್ ಕಾಗೇರಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿದ್ದಾರೆ. 6 ಸದಸ್ಯರನ್ನೊಳಗೊಂಡ ಸಮಿತಿಯಿಂದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅತ್ಯುತ್ತಮ ವಿಧಾನಸಭೆ ಪ್ರಶಸ್ತಿಗೆ ಆಯ್ಕೆ ಪ್ರಕ್ರಿಯೆ

Also Read:

ಸಖೇದಾಶ್ಚರ್ಯದ ಸಂಗತಿ: ನಿಮಿಷಾಂಭ ದೇಗುಲ ಬಳಿ ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ ಬೆಂಗಳೂರಿನ ಬಿಎಂಡಬ್ಲ್ಯೂ ಕಾರು ಪತ್ತೆ!

ಅಲ್ಲಾವುದ್ದೀನನ ಅದ್ಭುತ ದೀಪದಿಂದ ಎದ್ದುಬಂದಂತೆ ಮತ್ತೆ ಹಿಜಾಬ್​ vs ಸಮವಸ್ತ್ರ ವಿವಾದ ಎದ್ದಿದೆ -ಮುಂದೇನು? -ಟಿವಿ 9 ಕನ್ನಡ ಡಿಜಿಟಲ್​ ಲೈವ್​ ಚರ್ಚೆ

 

Published On - 5:16 pm, Fri, 27 May 22