MLC Election: ವಿಧಾನ ಪರಿಷತ್ ಚುನಾವಣೆಗೆ ಕೌಂಟ್‌ಡೌನ್, 20 ಕ್ಷೇತ್ರಗಳ 25 ಸ್ಥಾನಗಳಿಗೆ ಇಂದು ಮತದಾನ

ಉಪಚುನಾವಣೆ ಬಳಿಕ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಮತ್ತೊಂದು ಸವಾಲು ಎದುರಾಗಿದೆ. ಅದೇ ವಿಧಾನ ಪರಿಷತ್ ಚುನಾವಣೆ. ಈಗಾಗಲೇ ಮೂರು ಪಕ್ಷಗಳು ಭರ್ಜರಿ ಪ್ರಚಾರ ಮಾಡಿದ್ದು, ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಆಯಾ ಪಕ್ಷಗಳ ಹಿರಿಯ ನಾಯಕರು ಸಹ ಶ್ರಮ ಹಾಕಿದ್ದಾರೆ.

MLC Election: ವಿಧಾನ ಪರಿಷತ್ ಚುನಾವಣೆಗೆ ಕೌಂಟ್‌ಡೌನ್, 20 ಕ್ಷೇತ್ರಗಳ 25 ಸ್ಥಾನಗಳಿಗೆ ಇಂದು ಮತದಾನ
ಚುನಾವಣೆ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on:Dec 10, 2021 | 7:48 AM

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ಸ್ಥಾನಗಳಿಗೆ ಮೂರು ಪಕ್ಷಗಳು ಸಕಲ ತಯಾರಿ ಮಾಡಿಕೊಂಡಿವೆ. ಪರಿಷತ್ ಫೈಟ್ ಸರ್ಕಾರಕ್ಕೆ ಸವಾಲಾಗಿದ್ದು ಗೆಲುವಿನ ವಿಶ್ವಾಸದಲ್ಲಿದೆ.

ವಿಧಾನ ಪರಿಷತ್ ಚುನಾವಣೆಗೆ ಕೌಂಟ್‌ಡೌನ್ ಉಪಚುನಾವಣೆ ಬಳಿಕ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಮತ್ತೊಂದು ಸವಾಲು ಎದುರಾಗಿದೆ. ಅದೇ ವಿಧಾನ ಪರಿಷತ್ ಚುನಾವಣೆ. ಈಗಾಗಲೇ ಮೂರು ಪಕ್ಷಗಳು ಭರ್ಜರಿ ಪ್ರಚಾರ ಮಾಡಿದ್ದು, ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಆಯಾ ಪಕ್ಷಗಳ ಹಿರಿಯ ನಾಯಕರು ಸಹ ಶ್ರಮ ಹಾಕಿದ್ದಾರೆ. ಇಂದು 6,072 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು ಕ್ಷಣಗಣನೆ ಶುರುವಾಗಿದೆ.

20 ಕ್ಷೇತ್ರಗಳ 25 ಸ್ಥಾನಗಳಿಗೆ ಚುನಾವಣೆ ದಕ್ಷಿಣ ಕನ್ನಡ, ಧಾರವಾಡ, ವಿಜಯಪುರ, ಬೆಳಗಾವಿ, ಬಳ್ಳಾರಿ, ಮೈಸೂರಿನ ತಲಾ 2 ಕ್ಷೇತ್ರ, ಚಿಕ್ಕಮಗಳೂರು, ಕಲಬುರಗಿ, ಉತ್ತರ ಕನ್ನಡ, ಬೀದರ್, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಕೋಲಾರ, ತುಮಕೂರು ಸೇರಿದಂತೆ ಒಟ್ಟು 20 ಕ್ಷೇತ್ರಗಳಲ್ಲಿ 25 ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದ್ದು, ಪುರುಷ ಮತದಾರರು 48,368 ಮಹಿಳಾ ಮತದಾರರು 51,474ರಷ್ಟಿದೆ. ಒಟ್ಟು 6072 ಮತಗಟ್ಟೆಗಳಿದ್ದು, ಬೆಳಗ್ಗೆ 8 ರಿಂದ ಸಂಜೆ 4 ರವರೆಗೂ ಮತದಾನ ನಡೆಯಲಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ 20 ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಿದ್ದು. ಜೆಡಿಎಸ್ 6 ಕ್ಷೇತ್ರದಲ್ಲಿ ಮಾತ್ರ ಸ್ಪರ್ಧೆ ಮಾಡಿದೆ. ಚುನಾವಣೆ ಫಲಿತಾಂಶ ಡಿಸೆಂಬರ್ 14 ರಂದು ಹೊರಬೀಳಲಿದೆ.

ಗ್ರಾಮ ಪಂಚಾಯತ್ ಹಾಗೂ ಕೆಲವು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಮತದಾನದ ಹಕ್ಕು ಚಲಾಯಿಸಲಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ಒಟ್ಟು 25 ಮಂದಿ ಅಭ್ಯರ್ಥಿಗಳು ಆಯ್ಕೆಯಾಗಲಿದ್ದು ಮೂರು ಪಕ್ಷಗಳಿಗೂ ಪ್ರತಿಷ್ಟೆಯ ಪ್ರಶ್ನೆಯಾಗಿದೆ. ಸರ್ಕಾರದಿಂದ ನಾಮ ನಿರ್ದೇಶನಗೊಂಡ ಸದಸ್ಯರಿಗೆ ಮತದಾನದ ಹಕ್ಕು ನೀಡಬಾರದು ಅಂತ ಕಾಂಗ್ರೆಸ್ ಕೋರ್ಟ್ ಮೆಟ್ಟಿಲು ಹತ್ತಿತ್ತು. ಇದಕ್ಕೆ ಪುರಸ್ಕಾರ ನೀಡಿರುವ ಕೋರ್ಟ್ ನಾಮ ನಿರ್ದೇಶಿತ ಸದಸ್ಯರ ಓಟನ್ನು ಸೀಲ್ಡ್ ಕವರ್ ನಲ್ಲಿ ಇರಿಸಬೇಕು, ಮತ ಎಣಿಕೆಗೆ ಪರಿಗಣಿಸಬಾರದು ಅಂತ ಮಧ್ಯಂತರ ಆದೇಶ ನೀಡಿದೆ.

ಜೆಡಿಎಸ್ ಕೇವಲ ಆರೇ ಕ್ಷೇತ್ರಗಳಲ್ಲಿ ಅಭ್ಯರ್ಥಿ ಕಣಕ್ಕಿಳಿಸಿದ್ದು ಉಳಿದ ಕ್ಷೇತ್ರಗಳಲ್ಲಿ ಪರೋಕ್ಷವಾಗಿ ಬಿಜೆಪಿಯನ್ನು ಬೆಂಬಲಿಸಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಮತದಾನದಲ್ಲಿ ಭಾಗಿಯಾಗಲಿದ್ದು ಹುಬ್ಬಳ್ಳಿಗೆ ತೆರಳಲಿದ್ದಾರೆ.

ಬಿಜೆಪಿ ಆಡಳಿತ ಪಕ್ಷ ಎಂಬ ಕಾರಣಕ್ಕೆ ಹೆಚ್ಚು ಪ್ರಾಬಲ್ಯ ಮೆರೆಯುವ ವಿಶ್ವಾಸದಲ್ಲಿದ್ದರೆ, ಕಾಂಗ್ರೆಸ್ ತನ್ನದೇ ಸ್ವಂತ ಬಲದ ಮೇಲೆ ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸದಲ್ಲಿದೆ. ಜೆಡಿಎಸ್ ತನ್ನ ಇತಿಮಿತಿಯೊಳಗೆ ಲೆಕ್ಕಾಚಾರ ಹಾಕಿಕೊಂಡಿದ್ದು ಅಭ್ಯರ್ಥಿಗಳ ಭವಿಷ್ಯ ಬ್ಯಾಲೆಟ್ ಪೇಪರ್ ನಲ್ಲಿ ಸೀಲ್ ಆಗಲಿದೆ.

ವರದಿ: ಪ್ರಸನ್ನ ಗಾಂವ್ಕರ್, ಟಿರ್ವಿ ಬೆಂಗಳೂರು

ಇದ್ನನೂ ಓದಿ: Karnataka Weather Today: ಚಳಿಗಾಲದಲ್ಲೂ ನಿಲ್ಲದ ವರುಣನ ಅಬ್ಬರ; ಇನ್ನೆರಡು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

ಬೆಂಗಳೂರು ಎಂಎಎಲ್​ಸಿ ಚುನಾವಣೆ: 15 ಸದಸ್ಯರ ಮತದಾನಕ್ಕೆ ಹೈ ಅನುಮತಿ, ಆದರೆ ಫಲಿತಾಂಶಕ್ಕೆ ಕೋರ್ಟ್ ಅನುಮತಿ ಕಡ್ಡಾಯ

Published On - 7:16 am, Fri, 10 December 21

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು