ಮಹಾರಾಷ್ಟ್ರ ಗಡಿ ವಿವಾದ : ಸಿಎಂ ಬೊಮ್ಮಾಯಿ ನೇತೃತ್ವದ ಸಭೆ ಅಂತ್ಯ, ಸರ್ವ ಪಕ್ಷ ಸಭೆ ಬಳಿಕ ಅಂತಿಮ ನಿರ್ಧಾರ

| Updated By: ವಿವೇಕ ಬಿರಾದಾರ

Updated on: Nov 27, 2022 | 8:48 PM

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು (ರವಿವಾರ) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಿತು.

ಮಹಾರಾಷ್ಟ್ರ ಗಡಿ ವಿವಾದ : ಸಿಎಂ ಬೊಮ್ಮಾಯಿ ನೇತೃತ್ವದ ಸಭೆ ಅಂತ್ಯ,  ಸರ್ವ ಪಕ್ಷ ಸಭೆ ಬಳಿಕ ಅಂತಿಮ ನಿರ್ಧಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us on

ಬೆಂಗಳೂರು: ಕಳೆದ ಒಂದು ವಾರದಿಂದ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೆ ಏರಿದೆ. ರಾಜ್ಯದ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್​ ನೇಮಕವಾದ ಬಳಿಕ ಮೊದಲ ಸಭೆ ಮಾಡಿದ್ದೇವೆ. ಗಡಿ ವಿವಾದದ ಬಗ್ಗೆ ಇಲ್ಲಿಯವರೆಗೆ ನಡೆದಿರುವುದರ ಬಗ್ಗೆ ಚರ್ಚೆ ಮಾಡಿದ್ದೇವೆ. ಸುಪ್ರೀಂ ಕೋರ್ಟ್​ನಲ್ಲಿ ಯಾವ ರೀತಿ ವಾದ ಮಾಡಬೇಕು. ನಮ್ಮ ಸ್ಟ್ರ್ಯಾಟಜಿ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದ್ದಾರೆ.

ಮಹಾರಾಷ್ಟ್ರ ಗಡಿ ವಿಚಾರವಾಗಿ ಕ್ಯಾತೆ ತೆಗೆಯುತ್ತಿರುವ ಹಿನ್ನೆಲ್ಲೆ ಇಂದು (ನ. 27) ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯಿತು. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಯವರೊಂದಿಗೆ ಮಾತನಾಡಿದ ಅವರು ನವೆಂಬರ್ 29 ರಂದು ದೆಹಲಿಗೆ ಹೋಗಿ ಮುಖಲ್ ರೋಹ್ಟಗಿ ಅವರಿಗೆ ಭೇಟಿ ಮಾಡಿ ಚರ್ಚೆ ಮಾಡುತ್ತೇನೆ. ಸರ್ವಪಕ್ಷ ಸಭೆ ಬಗ್ಗೆ ನಾಳೆ ವಿರೋಧ ಪಕ್ಷದ ನಾಯಕರ ಜೊತೆ ಮಾತನಾಡುತ್ತೇನೆ. ಅವರ ಜೊತೆ ಮಾತನಾಡಿ ಸರ್ವ ಪಕ್ಷ ಸಭೆ ಬಗ್ಗೆ ತಿರ್ಮಾನ ತೆಗೆದುಕೊಳ್ಳುತ್ತೇನೆ. ನಾಡು, ನೆಲ-ಜಲದ ರಕ್ಷಣೆಗೆ ಸದಾ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಬೆಳಗಾವಿ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ, ಕರ್ನಾಟಕ ಗಡಿ ಮತ್ತು ನದಿ ರಕ್ಷಣಾ ಆಯೋಗದ ಅಧ್ಯಕ್ಷ ನಿವೃತ್ತ ನ್ಯಾ.ಶಿವರಾಜ್ ಪಾಟೀಲ್, ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಕೆಲ ಸುಪ್ರೀಂಕೋರ್ಟ್ ವಕೀಲರು ಭಾಗಿಯಾಗಿದ್ದರು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:43 pm, Sun, 27 November 22