AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ-ಮಹಾರಾಷ್ಟ್ರ ಭಾಷಾ ಸಮಸ್ಯೆ ಬಗೆಹರಿಸಲು ಕೇಂದ್ರ ಮುಂದಾಗಲಿ: ರಾಷ್ಟ್ರಪತಿಗೆ ಪತ್ರ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದಿಂದ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರದ ಮಧ್ಯಪ್ರವೇಶ ಅಗತ್ಯವಿದೆ. ಸಂವಿಧಾನದ 350(ಬಿ) ವಿಧಿಯಡಿ ಭಾಷಾ ಅಲ್ಪಸಂಖ್ಯಾತರಿಗೆ ವಿಶೇಷ ಅಧಿಕಾರಿ ನೇಮಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಪತ್ರ ಬರೆದಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ಭಾಷಾ ಸಮಸ್ಯೆ ಬಗೆಹರಿಸಲು ಕೇಂದ್ರ ಮುಂದಾಗಲಿ: ರಾಷ್ಟ್ರಪತಿಗೆ ಪತ್ರ
ಕರ್ನಾಟಕ-ಮಹಾರಾಷ್ಟ್ರ ಭಾಷಾ ಗಲಾಟೆ ಸಮಸ್ಯೆ ಬಗೆಹರಿಸಲು ಕೇಂದ್ರ ಮುಂದಾಗಲಿ: ರಾಷ್ಟ್ರಪತಿಗೆ ಪತ್ರ
ಕಿರಣ್​ ಹನಿಯಡ್ಕ
| Edited By: |

Updated on:Feb 27, 2025 | 6:19 PM

Share

ಬೆಂಗಳೂರು, ಫೆಬ್ರವರಿ 27: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಮಹಾದೇವಪ್ಪ ಹುಕ್ಕೇರಿ ಮೇಲೆ ಮರಾಠಿ ಪುಂಡರು ಹಲ್ಲೆ ಮಾಡಿದ ಬಳಿಕ ಎರಡು ರಾಜ್ಯಗಳ ನಡುವೆ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿತ್ತು. ಇದು ಭಾಷಾ ಗಲಾಟೆಗೂ ಕಾರಣವಾಗಿತ್ತು. ಹೀಗಾಗಿ ಕರ್ನಾಟಕ-ಮಹಾರಾಷ್ಟ್ರ ನಡುವೆ ಭಾಷೆ ಗಲಾಟೆ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಮುಂದಾಗಿ ಸಂವಿಧಾನದ ಅವಕಾಶಗಳಂತೆ ವಿಶೇಷಾಧಿಕಾರಿ ನೇಮಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ (Droupadi Murmu) ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಪತ್ರ ಬರೆದಿದ್ದಾರೆ.

ಪತ್ರದಲ್ಲೇನಿದೆ?

ಇದೀಗ ಮತ್ತೊಮ್ಮೆ ಉಲ್ಬಣಗೊಂಡಿರುವ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಿನ್ನಲೆ ನಿಮಗೆ ಈ ಪತ್ರವನ್ನು ಬರೆಯಲಾಗುತ್ತಿದೆ. ಎರಡೂ ರಾಜ್ಯಗಳ ಸರ್ಕಾರಗಳು ವಿವಾದವನ್ನು ತಣ್ಣಗಾಗಿಸುವ ನಿಟ್ಟಿನಲ್ಲಿ  ಸಕ್ರಿಯವಾಗಿ ತೊಡಗಿಸಿಕೊಂಡಿದ್ದ-ರೂ, ಕಣ್ಣಿಗೆ ಕಾಣದ ಸಂಗತಿಗಳಿವೆ. ದೊಡ್ಡ ಪ್ರಮಾಣದ ಹಿಂಸಾಚಾರ, ಆಸ್ತಿಪಾಸ್ತಿ ನಷ್ಟ ಮತ್ತು ಗಡಿಯ ಎರಡೂ ಬದಿಗಳಲ್ಲಿನ ಆಡಳಿತಾತ್ಮಕ ವ್ಯವಸ್ಥೆಯ ಮೇಲೆ ಆಳವಾದ ಪರಿಣಾಮ ಬೀರಿದೆ. ಹಾಗಾಗಿ ಈ ಸಂದರ್ಭದಲ್ಲಿ ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಕೇಂದ್ರ ಸರ್ಕಾರದ ಪಾತ್ರವು ಪ್ರಾಮುಖ್ಯತೆಯನ್ನು ಪಡೆಯುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಕನ್ನಡಿಗರ ಸ್ವಾಭಿಮಾನ ಹತ್ತಿಕ್ಕಲು ಶಿವಸೇನೆ ಮತ್ತು ಎಂಇಎಸ್ ಪುಂಡರಿಗೆ ಬಿಡೋದಿಲ್ಲ: ಪ್ರವೀಣ್ ಶೆಟ್ಟಿ, ಕರವೇ

ರಾಷ್ಟ್ರಪತಿಗಳು ಭಾಷಾ ಅಲ್ಪಸಂಖ್ಯಾತರಿಗೆ ವಿಶೇಷ ಅಧಿಕಾರಿಯನ್ನು ನೇಮಿಸತಕ್ಕದ್ದು. ಅದರ ಅಡಿಯಲ್ಲಿ ಭಾಷಾ ಅಲ್ಪಸಂಖ್ಯಾತರಿಗೆ ಒದಗಿಸಲಾದ ರಕ್ಷಣೋಪಾಯಗಳಿಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ತನಿಖೆ ಮಾಡುವುದು ಮತ್ತು ರಾಷ್ಟ್ರಪತಿಗಳು ನಿರ್ದೇಶಿಸಬಹುದಾದಂತಹ ಮಧ್ಯಂತರಗಳಲ್ಲಿ ಆ ವಿಷಯಗಳ ಬಗ್ಗೆ ರಾಷ್ಟ್ರಪತಿಗಳಿಗೆ ವರದಿ ಮಾಡುವುದು ವಿಶೇಷ ಅಧಿಕಾರಿಯ ಕರ್ತವ್ಯವಾಗಿರತಕ್ಕದ್ದು ಮತ್ತು ರಾಷ್ಟ್ರಪತಿಗಳು ಅಂಥ ಎಲ್ಲಾ ವರದಿಗಳನ್ನು ಸಂಸತ್ತಿನ ಪ್ರತಿಯೊಂದು ಸದನದ ಮುಂದೆ ಇಡುವಂತೆ ಮಾಡತಕ್ಕದ್ದು ಮತ್ತು ಸಂಬಂಧಿತ ರಾಜ್ಯಗಳ ಸರ್ಕಾರಗಳಿಗೆ ಕಳುಹಿಸಬೇಕು.

ಇದನ್ನೂ ಓದಿ: ಬೆಳಗಾವಿ ಕಂಡಕ್ಟರ್​​ ವಿರುದ್ಧ ಪೋಕ್ಸೋ ಕೇಸ್​ ವಾಪಸ್​ ಪಡೆದಿದ್ದೇವೆ: ಸಂತ್ರಸ್ತ ಬಾಲಕಿಯ ತಾಯಿ

ಭಾಷಾ ಅಲ್ಪಸಂಖ್ಯಾತರ ವಿಶೇಷ ಅಧಿಕಾರಿಯನ್ನು ಕೂಡಲೇ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ ದಯಮಾಡಿ ನಿರ್ದೇಶಿಸಬೇಕೆಂದು ವಿನಂತಿಸಲಾಗಿದೆ. ಅವರು ಗಡಿ ಪ್ರದೇಶಗಳಲ್ಲಿ ವಾಸಿಸುವ ಜನರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸಿ ಮತ್ತು ಕೇಂದ್ರಕ್ಕೆ ವರದಿ ಸಲ್ಲಿಸುತ್ತಾರೆ. ಬಳಿಕ ಈ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಒದಗಿಸಲು ಕೇಂದ್ರ ಸರ್ಕಾರವು ಮಧ್ಯಪ್ರವೇಶಿಸಬಹುದಾಗಿದೆ. ನಂತರ ಎರಡೂ ಕಡೆಯ ಸಾಮಾನ್ಯ ಜನರು ಶಾಂತಿಯುತ ಜೀವನ ನಡೆಸಬಹುದಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:19 pm, Thu, 27 February 25

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?