ಕರ್ನಾಟಕ-ಮಹಾರಾಷ್ಟ್ರ ನಡುವಿನ ಗಡಿ ವಿವಾದದ ಕುರಿತು ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಇದು ಕನ್ನಡಿಗರಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ ಎಂದು ಹೇಳಿದ್ದಾರೆ. ಈ ವಿವಾದವು ಕರ್ನಾಟಕದ ಜನತೆಯ ಹಿತಾಸಕ್ತಿಯ ವಿರುದ್ಧ ರಾಷ್ಟ್ರೀಯ ಪಕ್ಷಗಳು ನಡೆಸುತ್ತಿರುವ ದಾಳಿಯ ಭಾಗವಾಗಿದೆ.
“ಇದೀಗ ಕನ್ನಡಿಗರಿಗೆ (Kannadiga) ಮಾಡು ಇಲ್ಲವೇ ಮಡಿ ಗಳಿಗೆ. ನಮ್ಮ ತೆರಿಗೆಯ ಸರಿಯಾದ ಪಾಲು ನಮಗೆ ಸಿಗಬೇಕಾದರೆ, ನಮ್ಮ ಮಕ್ಕಳಿಗೆ ಉದ್ಯೋಗ ಸಿಗಬೇಕಾದರೆ, ನಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಹೊರಗಿನವರಿಂದ ರಕ್ಷಿಸಬೇಕಾದರೆ, ಗಡಿ ವಿವಾದ (Karnataka -Maharashtra Border Row) ಬಗೆಹರಿಯಬೇಕಾದರೆ, ಜೊತೆಗೆ ನಮ್ಮ ಅಸ್ಮಿತೆಯೊಂದಿಗೆ ರಾಜಿ ಮಾಡಿಕೊಳ್ಳದೆ ನಮ್ಮ ನೋವನ್ನು ನಮ್ಮವರೇ ಅರ್ಥಮಾಡಿಕೊಳ್ಳಬಲ್ಲರು ಎಂಬ ಸತ್ಯವನ್ನು ಅರಿತು ಕನ್ನಡ ಪ್ರಾದೇಶಿಕ ಪಕ್ಷವನ್ನು ಬಲಪಡಿಸಬೇಕು,’’ ಎಂದು ಬಹಿರಂಗ ಪತ್ರದಲ್ಲಿ ಬರೆದಿದ್ದಾರೆ. ಈ ಸಂಕಷ್ಟದಿಂದ ಹೊರಬರಲು ಪ್ರಾದೇಶಿಕ ಪಕ್ಷಗಳನ್ನು (Kannada regional party) ಬಲಪಡಿಸುವುದೊಂದೇ ದಾರಿ ಎಂದು ಜೆಡಿಎಸ್ (JDS) ರಾಷ್ಟ್ರೀಯ ಅಧ್ಯಕ್ಷರು ಹೇಳಿದ್ದಾರೆ.
ನಾನು ಪ್ರಧಾನಿಯಾಗಿದ್ದಾಗ ಗುಜರಾತ್‌ನ ನರ್ಮದಾ ನದಿ ವಿವಾದ ಮತ್ತು ಕಾಶ್ಮೀರದ ಚುನಾವಣೆಯಂತಹ ಅತ್ಯಂತ ಸೂಕ್ಷ್ಮ ಸಮಸ್ಯೆಗಳನ್ನು ಪರಿಹರಿಸುವಲ್ಲಿ ನಾನು ಯಶಸ್ವಿಯಾಗಿದ್ದೆ. ಆದರೆ, ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೂ, ಬೆಳಗಾವಿ (Belagavi) ಗಡಿ ವಿವಾದವನ್ನು ಬಗೆಹರಿಸುವಲ್ಲಿ ವಿಳಂಬವಾಗುತ್ತಿರುವುದು ಆಡಳಿತ ಪಕ್ಷವು ಸಮಸ್ಯೆಯನ್ನು ಹೇಗೆ ಹೀನಾಯವಾಗಿ ನಡೆಸಿಕೊಂಡಿದೆ ಎಂಬುದನ್ನು ಪ್ರತಿಬಿಂಬಿಸುತ್ತದೆ.
2006ರಲ್ಲಿ ಗಡಿ ವಿವಾದ ಉತ್ತುಂಗದಲ್ಲಿದ್ದಾಗ ಅಂದಿನ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ಬೆಳಗಾವಿಯನ್ನು ಕರ್ನಾಟಕದ ಎರಡನೇ ರಾಜಧಾನಿಯನ್ನಾಗಿ ಘೋಷಿಸಲು ವಿಧಾನಮಂಡಲ ಅಧಿವೇಶನ ಕರೆದಿದ್ದರು. ಪ್ರತಿ ವರ್ಷ ವಿಧಾನಮಂಡಲದ ಜಂಟಿ ಅಧಿವೇಶನ ನಡೆಸುವಂತಾಗಲು ಗಡಿ ಭಾಗದ ಬಳಿ ಸುವರ್ಣ ವಿಧಾನಸೌಧಕ್ಕೆ (Suvarna Vidhana Soudha) ಶಂಕುಸ್ಥಾಪನೆಯನ್ನೂ ಮಾಡಿದ್ದರು ಎಂದು ದೊಡ್ಡಗೌಡರು ಹೇಳಿದ್ದಾರೆ.
ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ಗಡಿ ವಿವಾದ ತೀವ್ರಗೊಂಡಿದ್ದು, ಆಡಳಿತ ಸರ್ಕಾರವು ರಣಹೇಡಿಯಂತೆ ಬಾಲ ಮುದುರಿಕೊಂಡಿರುವುದು, ವಿರೋಧ ಪಕ್ಷವು ಈ ವಿಷಯಕ್ಕೂ ತಮಗೂ ಸಂಬಂಧವೇ ಇಲ್ಲದಿರುವಂತೆ ಇರುವುದು, ಕರ್ನಾಟಕಕ್ಕೆ ಕನ್ನಡ-ಕೇಂದ್ರಿತ ಸರ್ಕಾರದ ಅನಿವಾರ್ಯತೆ ಎಷ್ಟಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ
‘ಕರ್ಣಾಟ ಬಲಂ ಅಜೇಯಂʼ ಎಂದು ಕೊಂಡಾಡುವಷ್ಟು ಬಲಿಷ್ಠವಾಗಿದ್ದ ನಮ್ಮ ರಾಜ್ಯವು ಇಂದು ಛಿದ್ರ ಛಿದ್ರವಾಗುವ ಭಯದ ವಾತವರಣ ನಿರ್ಮಾಣವಾಗಿರುವುದಕ್ಕೆ ರಾಷ್ಟ್ರೀಯ ಪಕ್ಷಗಳ ನಿರ್ಲಕ್ಷ್ಯಕರ ಆಡಳಿತ ಕಾರಣವೇ ಹೊರತು ಮತ್ತೀನೇನು ಅಲ್ಲ
ಕರ್ನಾಟಕದ ಗತವೈಭವ ಮರುಕಳಿಸಬೇಕಿದ್ದರೇ ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮನಾಗಬೇಕಿದೆ. ಇದು ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರುವುದರಿಂದ ಮಾತ್ರ ಸಾಧ್ಯ!
ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ಗಡಿ ವಿವಾದ ತೀವ್ರಗೊಂಡಿದ್ದು, ಆಡಳಿತ ಸರ್ಕಾರವು ರಣಹೇಡಿಯಂತೆ ಬಾಲ ಮುದುರಿಕೊಂಡಿರುವುದು, ವಿರೋಧ ಪಕ್ಷವು ಈ ವಿಷಯಕ್ಕೂ ತಮಗೂ ಸಂಬಂಧವೇ ಇಲ್ಲದಿರುವಂತೆ ಇರುವುದು, ಕರ್ನಾಟಕಕ್ಕೆ ಕನ್ನಡ-ಕೇಂದ್ರಿತ ಸರ್ಕಾರದ ಅನಿವಾರ್ಯತೆ ಎಷ್ಟಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. (1/3) pic.twitter.com/JanzuCopYK
— H D Devegowda (@H_D_Devegowda) December 29, 2022
ಎರಡೂ ರಾಜ್ಯಗಳ ಶಾಸಕರು ಭೂಮಿಯ ಮೇಲಿನ ತಮ್ಮ ಹಕ್ಕು ಬಿಟ್ಟುಕೊಡುವುದರ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸುವುದರೊಂದಿಗೆ ಉಭಯ ರಾಜ್ಯಗಳ ನಡುವಿನ ಗಡಿ ಘರ್ಷಣೆಯ ಜ್ವರ ಹೈ ಪಿಚ್ ತಲುಪಿದೆ.
ಒಂದು ಇಂಚು ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಕರ್ನಾಟಕ ನಿರ್ಣಯವನ್ನು ಅಂಗೀಕರಿಸಿದರೆ, ನೆರೆಯ ರಾಜ್ಯವು ಕರ್ನಾಟಕದ 800 ಹಳ್ಳಿಗಳನ್ನು ತನ್ನ ಗಡಿಯೊಳಗೆ ಸೇರಿಸಲು ಕೋರಿದೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:36 am, Fri, 30 December 22