AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾಸ್ಕರ್ ಹೆಗಡೆ ಸೇರಿ ಟಿವಿ9 ವಾಹಿನಿಯ ನಾಲ್ವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

ಟಿವಿ9 ಕನ್ನಡ ಡಿಜಿಟಲ್​ ಎಡಿಟರ್, ಹಿರಿಯ ಪತ್ರಕರ್ತರಾದ ಭಾಸ್ಕರ ಹೆಗಡೆ ಸೇರಿದಂತೆ ಟಿವಿ9 ವಾಹಿನಿಯ ನಾಲ್ವರು 2022ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಗರಿ ಮುಡಿಗೇರಿಸಿಕೊಂಡಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Mar 13, 2023 | 9:57 PM

Share

ಬೆಂಗಳೂರು: ಟಿವಿ9 ಕನ್ನಡ ಡಿಜಿಟಲ್​ ಎಡಿಟರ್, ಹಿರಿಯ ಪತ್ರಕರ್ತರಾದ ಭಾಸ್ಕರ ಹೆಗಡೆ ಸೇರಿದಂತೆ ಟಿವಿ9 ವಾಹಿನಿಯ ನಾಲ್ವರು 2022ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಗರಿ ಮುಡಿಗೇರಿಸಿಕೊಂಡಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ 124 ಪತ್ರಕರ್ತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ (karnataka media academy Award) ಪ್ರದಾನ ಮಾಡಿದರು. ಟಿವಿ9 ಪ್ರೋಗ್ರಾಮಿಂಗ್ ವಿಭಾಗದ ಮುಖ್ಯಸ್ಥರಾದ ಕಬೀರ್ ಕಾಂತಿಲ, ಟಿವಿ9 ಕ್ರೈಂ ವಿಭಾಗದ ಮುಖ್ಯಸ್ಥ ಹೆಚ್.ವಿ.ಕಿರಣ್, ಮತ್ತು ಟಿವಿ9 ನಿರೂಪಕಿ ಸುಕನ್ಯಾ ಅವರಿಗೆ ಮಾಧ್ಯಮ ಅಕಾಡೆಮಿ ಗೌರವ ಲಭಿಸಿದೆ.

ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪತ್ರಕರ್ತರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ‘ಮಾಧ್ಯಮ ವಾರ್ಷಿಕ ಪ್ರಶಸ್ತಿ’ ಹಾಗೂ ದತ್ತಿ ಪ್ರಶಸ್ತಿಗಳಿಗೆ ಆಯ್ಕೆ ಮಾಡಿತ್ತು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2019, 2020, 2021, 2022ನೇ ಸಾಲಿನ ಮಾಧ್ಯಮ ವಾರ್ಷಿಕ ಪ್ರಶಸ್ತಿಗೆ  ಪತ್ರಕರ್ತರನ್ನು ಆಯ್ಕೆ ಮಾಡಲಾಗಿತ್ತು.

ಇದನ್ನೂ ಓದಿ: ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ: ಭಾಸ್ಕರ ಹೆಗಡೆ ಸೇರಿ ಟಿವಿ9 ಕನ್ನಡ ವಾಹಿನಿಯ ನಾಲ್ವರಿಗೆ ಪ್ರಶಸ್ತಿ ಗರಿ

ಕೊರೋನಾ ಇದ್ದ ಕಾರಣ ಕಳೆದ ಎರಡು ವರ್ಷ ಪ್ರಶಸ್ತಿ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ 2019ರಿಂದ 2022ರ ವರೆಗೆ ನಾಲ್ಕು ವರ್ಷಗಳ ಮಾಧ್ಯಮ ವಾರ್ಷಿಕ ಪ್ರಶಸ್ತಿಗೆ ಒಟ್ಟು 124 ಪತ್ರಕರ್ತರನ್ನು ಆಯ್ಕೆ ಮಾಡಲಾಗಿತ್ತು. ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಕಾರ್ಯ ಸಾಧನೆ ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಇನ್ನು 21 ಪತ್ರಕರ್ತರನ್ನು ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ ತಲಾ 25 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:21 pm, Mon, 13 March 23