AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ರಕರ್ತರಿಗೆ ತರಬೇತಿ: ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌-ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ

ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್‌ ಸಿಎಸ್‌ಆರ್‌ ಕಾರ್ಯಕ್ರಮದಡಿ ಪತ್ರಕರ್ತರ ತರಬೇತಿಗಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ ಮಾಡಿಕೊಂಡಿದೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುಣಮಟ್ಟದ ಸುಧಾರಣೆಯ ನಿಟ್ಟಿನಲ್ಲಿ ಇದೊಂದು ಮಹತ್ವದ ಉಪಕ್ರಮವಾಗಿದ್ದು, ಹೆಚ್ಚು ಪತ್ರಕರ್ತರಿಗೆ ತರಬೇತಿ ನೀಡುವ ಆಶಯದೊಂದಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯು ಮುಂದಡಿಯಿಟ್ಟಿದೆ. ಇದು ದೇಶದಲ್ಲಿಯೇ ಮೊದಲು.

ಪತ್ರಕರ್ತರಿಗೆ ತರಬೇತಿ: ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌-ಕರ್ನಾಟಕ ಮಾಧ್ಯಮ ಅಕಾಡೆಮಿ  ಒಡಂಬಡಿಕೆ
Karnataka Media Academy
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Sep 08, 2025 | 5:00 PM

Share

ಬೆಂಗಳೂರು, (ಸೆಪ್ಟೆಂಬರ್‌ 8): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್‌ (infosys springboard) ಸಿಎಸ್‌ಆರ್‌ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು (Karnataka Media Academy) ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ಪತ್ರಕರ್ತರ ಸಾಫ್ಟ್‌ಸ್ಕಿಲ್‌ ತರಬೇತಿಯ ಉದ್ದೇಶಕ್ಕಾಗಿ ಮಾಡಿಕೊಳ್ಳುತ್ತಿರುವ ಈ ಒಡಂಬಡಿಕೆಯು ಸಿ.ಎಸ್.ಆರ್. ಅಡಿ ಕರ್ನಾಟಕ ಮಾಧ್ಯಮ ಅಕಾಡೆಮಿ ಕೈಗೆತ್ತಿಕೊಂಡ ಮೊದಲ ಕಾರ್ಯಕ್ರಮವಾಗಿದ್ದು, ಇನ್ಫೋಸಿಸ್ CSR ಯೋಜನೆಯ “ಸ್ಪ್ರಿಂಗ್‌ಬೋರ್ಡ್” ಪ್ಲಾಟ್‌ಫಾರ್ಮ್ ಮೂಲಕ ಪತ್ರಕರ್ತರ ಡಿಜಿಟಲ್ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಸಾಮರ್ಥ್ಯ ನಿರ್ಮಾಣ ಈ ಒಡಂಬಡಿಕೆಯ ಉದ್ದೇಶವಾಗಿದೆ.

“ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯ ಸಹಭಾಗಿತ್ವವು ಬದಲಾಗುತ್ತಿರುವ ಹೊಸ ಮಾಧ್ಯಮಕ್ಕೆ ಹೊಂದಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಈ ವಿನೂತನ ಪ್ಲಾಟ್‌ಫಾರಂ ಮಾಧ್ಯಮ ವೃತ್ತಿಪರರ ಕೌಶಲ್ಯ ಉನ್ನತೀಕರಣಕ್ಕೆ, ಅದರಲ್ಲೂ ವಿಶೇಷವಾಗಿ ಪತ್ರಕರ್ತರಿಗೆ ವೇಗವಾಗಿ ಬದಲಾಗುತ್ತಿರುವ ಸನ್ನಿವೇಶಗಳಿಗೆ ಅನುಗುಣವಾಗಿ ತಾಂತ್ರಿಕ ಪರಿಣತಿ ಹಾಗೂ ಸುದ್ದಿಯನ್ನು ಪ್ರಸ್ತುತಪಡಿಸುವ ಕೌಶಲವನ್ನು ಒದಗಿಸಲಿದೆ” ಎಂಬ ಆಶಯವನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಅವರು ವ್ಯಕ್ತಪಡಿಸಿದ್ದಾರೆ.

“ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ ಶಿಕ್ಷಣ ಕುರಿತ ಸಿಎಸ್‌ಆರ್‌ ಕಾರ್ಯಕ್ರಮವಾಗಿದೆ. ಇಂದು ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ ಮಾಧ್ಯಮ ಅಕಾಡೆಮಿಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ. ಮಾಧ್ಯಮ ಅಕಾಡೆಮಿಗೆ ಸ್ಪ್ರಿಂಗ್‌ಬೋರ್ಡ್‌ನ ಡಿಜಿಟಲ್‌ ವಿಷಯಗಳಿಗೆ ಪ್ರವೇಶ ಲಭಿಸಲಿದೆ ಮತ್ತು ಅವರು ಸಾಫ್ಟ್ ಸ್ಕಿಲ್ ಗಳು, ವ್ಯಕ್ತಿತ್ವ ವಿಕಾಸ ಹಾಗೂ ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಇತ್ತೀಚಿನ ತಂತ್ರಜ್ಞಾನಗಳ ಅವಲೋಕನ ಕುರಿತ ವಿಷಯಗಳಿಂದ ಪ್ರಯೋಜನ ಪಡೆಯಬಹುದು. ಇದು ವಿಶೇಷವಾಗಿ 2ನೇ ಹಾಗೂ 3ನೇ ಹಂತದ ನಗರಗಳ ಪತ್ರಕರ್ತರಿಗೆ ಖಂಡಿತವಾಗಿಯೂ ಸಹಾಯಕವಾಗಲಿದೆ” ಎಂದು ಇನ್ಫೋಸಿಸ್ ನ ಹಿರಿಯ ಉಪಾಧ್ಯಕ್ಷ (ಇಟಿಎ) ಸತೀಶ ಬಿ. ನಂಜಪ್ಪ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ ಕಾರ್ಯಕ್ರಮದಡಿ ಪತ್ರಕರ್ತರಿಗೆ ಮೂರು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಇದರಲ್ಲಿ ಡಿಜಿಟಲ್‌ ಮಾಧ್ಯಮಕ್ಕೆ ಅಗತ್ಯ ಕೌಶಲ್ಯಗಳು, ಕೃತಕ ಬುದ್ಧಿಮತ್ತೆಯ ಬಳಕೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ.

ಈ ವರ್ಷದಲ್ಲಿ ಒಟ್ಟು ಮೂರು ಕಾರ್ಯಕ್ರಮಗಳ ಮೂಲಕ ಒಟ್ಟು 150 ಪತ್ರಕರ್ತರಿಗೆ ತರಬೇತಿ ನೀಡಲು ಉದ್ದೇಶಿಸಿದೆ. ಇದರಲ್ಲಿ ವಿಶೇಷವಾಗಿ ಒಂದು ಬ್ಯಾಚ್‌ನಲ್ಲಿ ಮಹಿಳಾ ಆಯವ್ಯಯದಡಿ ಪತ್ರಕರ್ತೆಯರಿಗೆ ತರಬೇತಿ ನೀಡಲು ಉದ್ದೇಶಿಸಿದೆ. ಜಿಲ್ಲಾ ಮಟ್ಟದ ಪತ್ರಕರ್ತರಿಗೆ ಈ ತರಬೇತಿಯಲ್ಲಿ ಆದ್ಯತೆ ನೀಡಲಾಗಿದೆ.

ಇನ್ಫೋಸಿಸ್ ಸಂಸ್ಥೆಯು ಪ್ಲಾಟ್‌ಫಾರ್ಮ್ ಮತ್ತು ಪರಿಣತಿ ಒದಗಿಸಲಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರು ಹಾಗೂ ಶಿಕ್ಷಕರ ಭಾಗವಹಿಸುವಿಕೆ ಸಮನ್ವಯಗೊಳಿಸಲಿದೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುಣಮಟ್ಟದ ಸುಧಾರಣೆಯ ನಿಟ್ಟಿನಲ್ಲಿ ಇದೊಂದು ಮಹತ್ವದ ಉಪಕ್ರಮವಾಗಿದ್ದು, ಹೆಚ್ಚು ಪತ್ರಕರ್ತರಿಗೆ ತರಬೇತಿ ನೀಡುವ ಆಶಯದೊಂದಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯು ಮುಂದಡಿಯಿಟ್ಟಿದೆ.

ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ, ಸದಸ್ಯ ಹೆಚ್.ವಿ. ಕಿರಣ್‌ ಇನ್‌ಫೋಸಿಸ್ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಸತೀಶ ಬಿ. ನಂಜಪ್ಪ, ಹಿರಿಯ ಅಧಿಕಾರಿಗಳಾದ ಸಂತೋಷ್‌ ಅನಂತಪುರ, ಬಿಳಿಗಿರಿ ರಂಗ ಮೊದಲಾದವರು ಉಪಸ್ಥಿತರಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ