AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ರಕರ್ತೆಯರಿಗೆ ಶುಭಸುದ್ದಿ; ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಾಧ್ಯಮ ಅಕಾಡೆಮಿ ಇನ್ಫೋಸಿಸ್ ಸಿಎಸ್‌ಆರ್ ಸಹಯೋಗದಲ್ಲಿ ಪತ್ರಕರ್ತೆಯರಿಗಾಗಿ ವಿಶೇಷ ವಸತಿಯುತ ತರಬೇತಿ ಆಯೋಜಿಸಿದೆ. ಮಾರ್ಚ್ 25-27ರಂದು ಮೈಸೂರಿನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಡಿಜಿಟಲ್ ಮಾಧ್ಯಮ, ಕೃತಕ ಬುದ್ಧಿಮತ್ತೆ, ಸಾಫ್ಟ್‌ಸ್ಕಿಲ್ ತರಬೇತಿ ನೀಡಲಾಗುವುದು. 5 ವರ್ಷ ಅನುಭವವಿರುವ ಪತ್ರಕರ್ತೆಯರು ಮಾರ್ಚ್ 10ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಹರಿಗೆ ಪ್ರಯಾಣ ಭತ್ಯೆ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪತ್ರಕರ್ತೆಯರಿಗೆ ಶುಭಸುದ್ದಿ; ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ತರಬೇತಿಗೆ ಅರ್ಜಿ ಆಹ್ವಾನ
ರ್ನಾಟಕ ಮಾಧ್ಯಮ ಅಕಾಡೆಮಿಯಿಂದ ತರಬೇತಿಗೆ ಅರ್ಜಿ ಆಹ್ವಾನ
ಭಾವನಾ ಹೆಗಡೆ
|

Updated on: Mar 04, 2026 | 12:39 PM

Share

ಬೆಂಗಳೂರು, ಮಾರ್ಚ್ 04: ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಪತ್ರಕರ್ತೆಯರಿಗಾಗಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇನ್ಫೋಸಿಸ್ (Infosys) ಸಿ.ಎಸ್.ಆರ್ ಕಾರ್ಯಕ್ರಮದಡಿ ಈ ತರಬೇತಿ ನಡೆಯಲಿದ್ದು, ಅರ್ಹ ಪತ್ರಕರ್ತೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮಾರ್ಚ್ 25ರಿಂದ 27ರವರೆಗೆ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮೂರು ದಿನಗಳ ವಸತಿಯುತ ತರಬೇತಿ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕನಿಷ್ಠ ಐದು ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತೆಯರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು ಗೂಗಲ್ ಫಾರ್ಮ್ https://forms.gle/tozr4GxUQibDHBvk9 ಮೂಲಕ ಅಗತ್ಯ ಮಾಹಿತಿಗಳೊಂದಿಗೆ ನೋಂದಣಿ ಮಾಡಿಕೊಳ್ಳಬೇಕಾಗಿದೆ. ಅರ್ಜಿ ಸಲ್ಲಿಸುವ ವೇಳೆ ಭಾವಚಿತ್ರ, ವಯಸ್ಸಿನ ಪ್ರಮಾಣಪತ್ರ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಪತ್ರ ಅಥವಾ ಅಧಿಕೃತ ಗುರುತಿನ ಚೀಟಿ, ಸಂಬಂಧಿತ ಮಾಧ್ಯಮ ಸಂಸ್ಥೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾನ್ಯ ಪಟ್ಟಿಯಲ್ಲಿ ಸೇರಿರುವ ದಾಖಲೆ ಹಾಗೂ ಕನಿಷ್ಠ ಐದು ವರ್ಷದ ಸೇವಾನುಭವದ ದಾಖಲೆಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ಇದನ್ನೂ ಓದಿ KAS ಗ್ರೂಪ್ ಎ,ಬಿ ಪರೀಕ್ಷೆ ರಿಸಲ್ಟ್ ವಿರುದ್ಧ ವಿದ್ಯಾರ್ಥಿಗಳ ಅಪಸ್ವರ: ಸಿಬಿಐ ತನಿಖೆಗೆ ಒತ್ತಾಯ

ಮೂರು ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ ಡಿಜಿಟಲ್ ಮಾಧ್ಯಮ ಬಳಕೆ, ಕೃತಕ ಬುದ್ಧಿಮತ್ತೆ (ಎಐ) ಉಪಯೋಗ, ಸಾಫ್ಟ್ ಸ್ಕಿಲ್ ಅಭಿವೃದ್ಧಿ ಹಾಗೂ ನಾಯಕತ್ವ ತರಬೇತಿ ನೀಡಲಾಗುತ್ತದೆ. ಭಾಗವಹಿಸುವ ಪತ್ರಕರ್ತೆಯರಿಗೆ ನಿಯಮಾನುಸಾರ ಪ್ರಯಾಣ ಭತ್ಯೆಯೂ ನೀಡಲಾಗುವುದು. ಪತ್ರಕರ್ತೆಯರ ಆಯ್ಕೆ ಕುರಿತ ಅಂತಿಮ ನಿರ್ಧಾರ ಕರ್ನಾಟಕ ಮಾಧ್ಯಮ ಅಕಾಡೆಮಿಯದ್ದೇ ಆಗಿರುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದೆ. ಆಸಕ್ತ  ಪತ್ರಕರ್ತೆಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!