AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮೂಲಭೂತ ಕೊರತೆಯಿರುವ ಮೆಡಿಕಲ್ ಕಾಲೇಜುಗಳಿಗೆ ಚಾಟಿ: ಪರಿಶೀಲನೆಗೆ ಮುಂದಾದ ಆರೋಗ್ಯ ವಿವಿ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ಕರ್ನಾಟಕದ ವೈದ್ಯಕೀಯ ಕಾಲೇಜುಗಳಲ್ಲಿನ ಮೂಲಸೌಕರ್ಯ ಕೊರತೆಯನ್ನು ತೀವ್ರವಾಗಿ ಪರಿಶೀಲಿಸುತ್ತಿದೆ. ಸಿಬ್ಬಂದಿ ಕೊರತೆ, ಕಳಪೆ ಉಪಕರಣಗಳು ಮತ್ತು ದತ್ತಾಂಶ ನಿರ್ವಹಣೆಯಲ್ಲಿನ ದೋಷಗಳನ್ನು ಗಮನಿಸಿ, NMCಗೆ ವರದಿ ಸಲ್ಲಿಸಲು ಯೋಜಿಸಲಾಗಿದೆ. ಇದರಿಂದ ಮೆಡಿಕಲ್ ಸೀಟ್ ಕಡಿತದ ಸಾಧ್ಯತೆಯೂ ಇದೆ.

ಕರ್ನಾಟಕದಲ್ಲಿ ಮೂಲಭೂತ ಕೊರತೆಯಿರುವ ಮೆಡಿಕಲ್ ಕಾಲೇಜುಗಳಿಗೆ ಚಾಟಿ: ಪರಿಶೀಲನೆಗೆ ಮುಂದಾದ ಆರೋಗ್ಯ ವಿವಿ
ಕರ್ನಾಟಕದಲ್ಲಿ ಮೂಲಭೂತ ಕೊರತೆಯಿರುವ ಮೆಡಿಕಲ್ ಕಾಲೇಜುಗಳಿಗೆ ಚಾಟಿ: ಪರಿಶೀಲನೆಗೆ ಮುಂದಾದ ಆರೋಗ್ಯ ವಿವಿ
Vinay Kashappanavar
| Edited By: |

Updated on: Jan 09, 2025 | 7:13 PM

Share

ಬೆಂಗಳೂರು, ಜನವರಿ 09: ಬೆಂಗಳೂರು ಸೇರಿದ್ದಂತೆ ಕರ್ನಾಟಕದಲ್ಲಿನ ವೈದ್ಯಕೀಯ ಕಾಲೇಜುಗಳು ತಾವು ಮಾಡಿದ್ದೆ ಆಟ, ಹೇಳಿದ್ದೆ ಪಾಠ ಎನ್ನುವಂತಾಗಿತ್ತು. ಉತ್ತಮ ಸೌಲಭ್ಯ ನೀಡುವಲ್ಲಿ ಹಿಂದೇಟು ಹಾಕಿದ್ದವು. ಮೂಲಭೂತ ಸೌಕರ್ಯ, ಸಿಬ್ಬಂದಿ ಕೊರತೆ, ಕಳಪೆ ಉಪಕರಣಗಳು, ರೋಗಿಗಳ ದತ್ತಾಂಶಗಳನ್ನು ಸರಿಯಾಗಿ ನಿರ್ವಹಿಸದ ರಾಜ್ಯದ 27 ವೈದ್ಯಕೀಯ ಕಾಲೇಜುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಈ ಹಿಂದೆ ದಂಡ ವಿಧಿಸಿ ಶಾಕ್ ನೀಡಿತ್ತು. ಈ ಬೆನ್ನೆಲ್ಲೇ ಇದೀಗ ಮತ್ತೆ ರಾಜ್ಯದ ಮೆಡಿಕಲ್ ಕಾಲೇಜುಗಳಿಗೆ ಚಾಟಿ ಬೀಸಲು ರಾಜೀವ್​ ಗಾಂಧಿ ವಿಜ್ಞಾನಗಳ ವಿಶ್ವವಿದ್ಯಾಲಯ (Rajiv Gandhi University) ಮುಂದಾಗಿದೆ.

ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ಹಾಗೂ ವಿಜ್ಞಾನಗಳ ವಿಶ್ವವಿದ್ಯಾಲಯ ಮೂಲಭೂತ ಸೌಕರ್ಯ ಕೊರತೆ ಇರುವ ಕಾಲೇಜುಗಳಿಗೆ ಚಾಟಿ ಬೀಸಲು ಮುಂದಾಗಿದೆ.

ಇದನ್ನೂ ಓದಿ: ರಾಮನಗರ ರಾಜೀವ್ ಗಾಂಧಿ ವಿವಿ ಸ್ಥಳಾಂತರ ಬೇಡ: ಹೆಚ್​ಡಿ ಕುಮಾರಸ್ವಾಮಿ

ಮೂಲಭೂತ ಸೌಕರ್ಯ ಕೊರತೆ ಹಾಗೂ ಸರಿಯಾದ ಸೇವೆ ನೀಡದೆ ಕಳ್ಳಾಟವಾಡುತ್ತಿರುವ ಮೆಡಿಕಲ್ ಕಾಲೇಜುಗಳ ವಿರುದ್ಧ ಮತ್ತೆ ಎಂಎನ್​ಸಿಗೆ ವರದಿ ನೀಡಲು ಆರೋಗ್ಯ ವಿಶ್ವವಿದ್ಯಾಲಯ ಮುಂದಾಗಿದೆ. ಈ ಹಿಂದೆ ಎಂಎನ್​ಸಿಗೆ ರಾಜ್ಯದ 27 ಮೆಡಿಕಲ್ ಕಾಲೇಜಿಗೆ ನೋಟಿಸ್ ನೀಡಿ ದಂಡ ಹಾಕಿತ್ತು. ಈ ಬಳಿಕವು ಕೆಲವು ಮೆಡಿಕಲ್ ಕಾಲೇಜಿಗಳು ಮತ್ತೆ ಕಳ್ಳಾಟವಾಡುತ್ತಿವೆ. ಸಾಕಷ್ಟು ಮೆಡಿಕಲ್ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಕೊರತೆ, ಸಿಬ್ಬಂದಿ ಕೊರತೆ ಹಾಗೂ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ. ಹೀಗಾಗಿ ಇತಂಹ ಕಾಲೇಜುಗಳ ವರದಿ ಪಡೆಯಲು ಆರೋಗ್ಯ ವಿವಿ ಮುಂದಾಗಿದೆ.

ಮೂಲಭೂತ ಸೌಕರ್ಯ ಕೊರತೆ ಇರುವ ಕಾಲೇಜುಗಳ ಮೆಡಿಕಲ್ ಸೀಟ್ ಕಡಿತಕ್ಕೆ MNC ಗೆ ವರದಿ ನೀಡಲು ಕೂಡಾ ಪ್ಲಾನ್ ಮಾಡಿದೆ. ಮೂಲಭೂತ ಸೌಕರ್ಯ, ಸಿಬ್ಬಂದಿ ಕೊರತೆ, ಕಳಪೆ ಉಪಕರಣಗಳು, ರೋಗಿಗಳ ದತ್ತಾಂಶಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ ಈ ಹಿನ್ನಲೆ ರಾಜ್ಯದ ಮೆಡಿಕಲ್ ಕಾಲೇಜುಗಳ ಸಂಪೂರ್ಣ ಮಾಹಿತಿಯನ್ನ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಪಡೆಯಲು ಮುಂದಾಗಿದೆ. ಒಂದೊಮ್ಮೆ ಮತ್ತೆ ಮೆಡಿಕಲ್ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಕೊರತೆ ಸಮಸ್ಯೆ ಕಂಡು ಬಂದರೆ NMC ಮೆಡಿಕಲ್ ಕಾಲೇಜುಗಳ ಸೀಟ್​ಗಳಿಗೂ ಕತ್ತರಿ ಹಾಕಲಿದ್ದು, ಸದ್ಯ ಆರೋಗ್ಯ ವಿವಿ ಎಲ್ಲಾ ಮೆಡಿಕಲ್ ಕಾಲೇಜುಗಳ ಮಾಹಿತಿ ಕಲೆ ಹಾಕುತ್ತಿದೆ.

ಇದನ್ನೂ ಓದಿ: ರಾಯಚೂರಿನಲ್ಲಿ ಬಾಣಂತಿಯರ ಸರಣಿ ಸಾವು: ರಿಮ್ಸ್ ಆಸ್ಪತ್ರೆಗೆ ಜೆಡಿಎಸ್ ನಿಯೋಗ ಭೇಟಿ,​ ರಿಯಾಲಿಟಿ ಚೆಕ್

ಸರ್ಕಾರಿ ಮೆಡಿಕಲ್ ಕಾಲೇಜು ಸೇರಿ ಹಲವು ಖಾಸಗಿ ಕಾಲೇಜುಗಳು ಕನಿಷ್ಠ ಮಾನದಂಡ ಪಾಲನೇ ಮಾಡುತ್ತಿಲ್ಲ. ಹೀಗಾಗಿ ಈಗ ರಾಜೀವ್ ಗಾಂಧಿ ಹೆಲ್ತ್ ವಿಶ್ವವಿದ್ಯಾಲಯ ಕೂಡಾ ಈ ಬಗ್ಗೆ ವೈದ್ಯಕೀಯ ಕಾಲೇಜುಗಳಿಗೆ ಚಾಟಿ ಬೀಸಿದೆ. ಇನ್ನಾದ್ರೂ ಸರ್ಕಾರ ವೈದ್ಯಕೀಯ ಕಾಲೇಜುಗಳಲ್ಲಿ ಎಲ್ಲೆಲ್ಲಿ ಖಾಲಿ ಹುದ್ದೆ ಇದೆ ಅದನ್ನ ಭರ್ತಿ ಮಾಡಬೇಕಿದ್ದು, ಖಾಸಗಿ ವೈದ್ಯಕೀಯ ಕಾಲೇಜುಗಳು ಇನ್ನಾದ್ರೂ ಉತ್ತಮ ಮೂಲಭೂತ ಸೌಕರ್ಯದ ಕಡೆ ಗಮನಕೊಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?