AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳು ಹೀಗಿವೆ

ಹಲವು ಅಡೆತಡೆಗಳ ಬಳಿಕ ಕೊನೆಗೂ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅನುಮೋದನೆ ಸಿಕ್ಕಿದೆ. ಆ ಮೂಲಕ ಸಾಲ ಪಡೆದವರ ಆತಂಕಕ್ಕೆ ಇತಿಶ್ರೀ ಹಾಡಲು ಸುಗ್ರೀವಾಜ್ಞೆ ಲಗಾಮು ಬಳಸಲು ಸರ್ಕಾರಕ್ಕೆ ಅವಕಾಶ ದೊರೆತಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆದೇಶದ ಪ್ರಮುಖ ಮುಖ್ಯಾಂಶಗಳು ಇಲ್ಲಿದೆ.

ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳು ಹೀಗಿವೆ
ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳು ಹೀಗಿವೆ
TV9 Web
| Edited By: |

Updated on:Feb 13, 2025 | 4:31 PM

Share

ಬೆಂಗಳೂರು, ಫೆಬ್ರವರಿ 13: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ (Microfinance) ಹಾವಳಿಗೆ ಅನೇಕ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಮನೆ, ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಆದರೆ ಇದೀಗ  ಮಹತ್ವದ ಬೆಳವಣಿಗೆಯಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರು ನಿನ್ನೆ ಅಂಕಿತ ಹಾಕಿದ್ದಾರೆ. ಹಾಗಾದರೆ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಸರ್ಕಾರದ ಮುಖ್ಯಾಂಶಗಳು ಹೀಗಿವೆ.

ಮುಖ್ಯಾಂಶಗಳು:-

  1. ಸದರಿ ಆಧ್ಯಾದೇಶವು ದಿನಾಂಕ: 12.02.2025 ರಂದು ಜಾರಿಗೆ ಬಂದಿದೆ.
  2. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸಲು ಉದ್ದೇಶಿಸಿದೆ.
  3. ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿದೆ.
  4. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಆದೇಶಿಸಲಾಗಿದೆ.
  5. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿ ದರದ ಬಗ್ಗೆ ಪಾರದರ್ಶಕವಾಗಿ ಸಾಲಗಾರರಿಗೆ ಲಿಖಿತ ರೂಪದಲ್ಲಿ ತಿಳಿಸುವುದು.
  6. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಮಾತ್ರ ಈ ಆದೇಶ ಅನ್ವಯಿಸುತ್ತದೆ. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಅಂದಾಜು ರೂ. 60,000 ಕೋಟಿ ರೂ. ಸಾಲವನ್ನು ಸುಮಾರು 1.09 ಕೋಟಿ ರೂ. ಸಾಲಗಾರರು ಪಡೆದಿದ್ದು, ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ವಿವರವಾಗಿ ಅಂದಾಜು ರೂ. 40,000 ಕೋಟಿ ರೂ. ಸಾಲ ಪಡೆದಿದ್ದಾರೆ ಎಂದು ಅಂದಾಜಿಸಲಾಗಿದೆ.
  7. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯ. ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿ ದರ, ಸಾಲಗಾರರ ಮಾಹಿತಿ, ಸುಸ್ಥಿ ಸಾಲಗಳ ವಿವರ ಮುಂತಾದವುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕು.
  8. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಿಗೆ ತ್ರೈಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಸಲ್ಲಿಸಬೇಕು. ಸದರಿ ಮಾಹಿತಿಯನ್ನು ಸಲ್ಲಿಸದಿದ್ದಲ್ಲಿ, 6 ತಿಂಗಳ ಕಾರಾಗೃಹ ವಾಸ ಅಥವಾ ರೂ.10,000 ದಂಡ ವಿಧಿಸಲಾಗುವುದು.
  9. ವಿವಾದಗಳನ್ನು ಇತ್ಯರ್ಥ್ಯ ಪಡಿಸುವುದಕ್ಕಾಗಿ ಒಂಬುಡ್ಸ್ ಪರ್ಸನ್‌ಗಳನ್ನು ಸರ್ಕಾರವು ಅಧಿಸೂಚನೆಯ ಮೂಲಕ ನೇಮಕ ಮಾಡಬಹುದು.
  10. ಬಲವಂತದ ವಸೂಲಿ ಕ್ರಮಗಳನ್ನು ವಿವರವಾಗಿ ತಿಳಿಸಲಾಗಿದೆ.
  11. ಬಲವಂತದ ವಸೂಲಿ ಕ್ರಮಗಳನ್ನು ಕೈಗೊಂಡಲ್ಲಿ, ಯಾವುದೇ ವ್ಯಕ್ತಿಯೂ ವಿಚಾರಣೆಗೆ ಒಳಪಡುತ್ತಾನೆ ಮತ್ತು 10 ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸದ ಶಿಕ್ಷೆ ಹಾಗೂ ರೂ. 5 ಲಕ್ಷ ಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡ ವಿಧಿಸಲಾಗುತ್ತದೆ. ಈ ಅಪರಾಧಗಳು ಸಂಜ್ಞೇಯ ಅಪರಾಧ, ಜಾಮೀನು ರಹಿತ (Cognizable / Non Bailable) ಆಗಿರುತ್ತವೆ. ಯಾವುದೇ ಪೋಲೀಸ್‌ ಅಧಿಕಾರಿ ಇಂತಹ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳುವುದು ನಿರಾಕರಿಸಲಾಗುವುದಿಲ್ಲ.
  12. ಪೋಲೀಸ್‌ ಉಪ ಅಧೀಕ್ಷಕರ (Dy SP) ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯು ಸ್ವತಃ ಪ್ರಕರಣವನ್ನು ದಾಖಲಿಸಬಹುದು.
  13. ಸರ್ಕಾರವು ಕಾಲಕಾಲಕ್ಕೆ ಈ ಆದೇಶದ ಅನುಷ್ಠಾನಕ್ಕಾಗಿ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.
  14. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:29 pm, Thu, 13 February 25

Follow Us
TV9 Web
TV9 Web

TV9 Kannada

Read More
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಫ್ಲೈದುಬೈ ಪ್ರಕರಣ: ಸಹ ಪೈಲಟ್ ಕೃತ್ಯವನ್ನು ಶ್ಲಾಘಿಸಿದ ಅಲ್-ಖೈದಾ
ಫ್ಲೈದುಬೈ ಪ್ರಕರಣ: ಸಹ ಪೈಲಟ್ ಕೃತ್ಯವನ್ನು ಶ್ಲಾಘಿಸಿದ ಅಲ್-ಖೈದಾ