AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟಕ್ಕೆ ಹೊಸ ರೂಪ! ಗುಣಮಟ್ಟ ಪರಿಶೀಲನೆಗೆ ವಿಶೇಷ ಆಡಿಟ್‌ಗೆ ಶಿಕ್ಷಣ ಇಲಾಖೆ ಚಿಂತನೆ

ಕರ್ನಾಟಕದ ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟದ ಗುಣಮಟ್ಟ ಸುಧಾರಣೆಗೆ ಶಿಕ್ಷಣ ಇಲಾಖೆ ವಿಶೇಷ ಆಡಿಟ್ ವ್ಯವಸ್ಥೆ ರೂಪಿಸಲು ಚಿಂತನೆ ನಡೆಸಿದೆ. ಅಜೀಂ ಪ್ರೇಮ್‌ಜಿ ಫೌಂಡೇಷನ್‌ನ 1,591 ಕೋಟಿ ರೂಪಾಯಿ ನೆರವಿನೊಂದಿಗೆ ನಡೆಯುತ್ತಿರುವ ಯೋಜನೆಯಲ್ಲಿ ಆಹಾರ ಸುರಕ್ಷತೆ, ಪೌಷ್ಟಿಕಾಂಶ ಮತ್ತು ಸಮಾನತೆಗೆ ಆದ್ಯತೆ ನೀಡಲಾಗುತ್ತಿದೆ. ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಹಾಲು, ರಾಗಿ ಮಾಲ್ಟ್ ಸೇರಿದಂತೆ ಪೌಷ್ಟಿಕ ಆಹಾರ ಒದಗಿಸುವುದರ ಜೊತೆಗೆ ಮೆನ್ಯೂ ಬದಲಾವಣೆಗೂ ಚಿಂತನೆ ನಡೆದಿದೆ.

ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟಕ್ಕೆ ಹೊಸ ರೂಪ! ಗುಣಮಟ್ಟ ಪರಿಶೀಲನೆಗೆ ವಿಶೇಷ ಆಡಿಟ್‌ಗೆ ಶಿಕ್ಷಣ ಇಲಾಖೆ ಚಿಂತನೆ
ಸರ್ಕಾರಿ ಶಾಲೆಗಳ ಬಿಸಿಯೂಟದ ಗುಣಮಟ್ಟ ಪರಿಶೀಲನೆಗೆ ವಿಶೇಷ ಆಡಿಟ್ ವ್ಯವಸ್ಥೆ ರೂಪಿಸಲು ಚಿಂತನೆ.
ವಿನಯ್​ ಕಾಶಪ್ಪನವರ್​
| Edited By: |

Updated on: Nov 24, 2026 | 8:17 AM

Share

ಮುಖ್ಯಾಂಶಗಳು

  • ಸರ್ಕಾರಿ ಶಾಲೆಗಳ ಬಿಸಿಯೂಟದ ಗುಣಮಟ್ಟ ಪರಿಶೀಲನೆಗೆ ವಿಶೇಷ ಆಡಿಟ್ ವ್ಯವಸ್ಥೆ ರೂಪಿಸಲು ಚಿಂತನೆ.
  • ಅಜೀಂ ಪ್ರೇಮ್‌ಜಿ ಫೌಂಡೇಷನ್‌ನಿಂದ ಬಿಸಿಯೂಟ ಯೋಜನೆಗೆ 1,591 ಕೋಟಿ ರೂಪಾಯಿ ನೆರವು.
  • ಮಕ್ಕಳ ಪೌಷ್ಟಿಕಾಂಶ ಹೆಚ್ಚಿಸಲು ಮೆನ್ಯೂ ಬದಲಾವಣೆ, ಪ್ರಾದೇಶಿಕ ಆಹಾರಕ್ಕೂ ಶಿಕ್ಷಣ ಇಲಾಖೆ ಒತ್ತು.

ಬೆಂಗಳೂರು, ನವೆಂಬರ್ 24: ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ನೀಡಲಾಗುವ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟ ಸುಧಾರಿಸಲು ರಾಜ್ಯ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ. ಮಕ್ಕಳಿಗೆ ಕೇವಲ ಹೊಟ್ಟೆ ತುಂಬಿಸುವ ಊಟ ನೀಡುವುದಷ್ಟೇ ಅಲ್ಲದೆ, ಅಗತ್ಯ ಪೌಷ್ಟಿಕಾಂಶ, ಆಹಾರ ಸುರಕ್ಷತೆ ಮತ್ತು ಗುಣಮಟ್ಟವನ್ನು ಖಚಿತಪಡಿಸುವ ಉದ್ದೇಶದಿಂದ ವಿಶೇಷ ಆಡಿಟ್ ವ್ಯವಸ್ಥೆ ರೂಪಿಸುವ ಚಿಂತನೆ ನಡೆಸಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಈ ಯೋಜನೆಯಲ್ಲಿ ಆಹಾರದ ಗುಣಮಟ್ಟ ಹಾಗೂ ವಿತರಣೆಯಲ್ಲಿ ಸಮಾನತೆ ಕಾಪಾಡಲು ಇಲಾಖೆ ಒತ್ತು ನೀಡುತ್ತಿದೆ.

ಬಿಸಿಯೂಟದ ಗುಣಮಟ್ಟಕ್ಕೆ ವಿಶೇಷ ಆಡಿಟ್

ಸರ್ಕಾರಿ ಶಾಲೆಗಳ ಬಿಸಿಯೂಟ ಯೋಜನೆಗೆ ಅಜೀಂ ಪ್ರೇಮ್‌ಜಿ ಫೌಂಡೇಷನ್‌ನಿಂದ 1,591 ಕೋಟಿ ರೂಪಾಯಿ ನೆರವು ದೊರೆತಿದೆ. ರಾಜ್ಯ ಸರ್ಕಾರವೂ ಸಾರ್ವಜನಿಕರ ತೆರಿಗೆ ಹಣವನ್ನು ಈ ಯೋಜನೆಗೆ ವೆಚ್ಚ ಮಾಡುತ್ತಿದೆ. ಹೀಗಾಗಿ ಮಕ್ಕಳಿಗೆ ವಿತರಿಸುವ ಆಹಾರದಲ್ಲಿ ನಿಗದಿತ ಗುಣಮಟ್ಟದ ಮಾನದಂಡ ಪಾಲನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ವಿಶೇಷ ಆಡಿಟ್ ನಡೆಸುವ ಬಗ್ಗೆ ಚರ್ಚೆ ನಡೆದಿದೆ.

ಆಹಾರ ತಯಾರಿಕೆ, ವಿತರಣೆ, ಪೌಷ್ಟಿಕಾಂಶದ ಪ್ರಮಾಣ ಮತ್ತು ಮಕ್ಕಳಿಗೆ ಸಿಗುವ ಆಹಾರದ ಗುಣಮಟ್ಟದ ಮೇಲೆ ನಿರಂತರ ನಿಗಾ ಇಡುವುದು ಈ ವ್ಯವಸ್ಥೆಯ ಉದ್ದೇಶವಾಗಿದೆ. ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ನೀಡುವುದು ಸೇರಿದಂತೆ ಆಹಾರ ವಿತರಣೆಯಲ್ಲಿ ಸಮಾನತೆ ಕಾಪಾಡಲು ಇಲಾಖೆ ಮುಂದಾಗಿದೆ.

ಮೆನ್ಯೂ ಬದಲಾವಣೆಗೂ ಚಿಂತನೆ: ಮಕ್ಕಳ ತಟ್ಟೆಗೆ ಪೌಷ್ಟಿಕ ಆಹಾರ

ಪ್ರಸ್ತುತ ವಾರದ ಮೆನ್ಯೂನಲ್ಲಿ ಸೋಮವಾರದಿಂದ ಗುರುವಾರದವರೆಗೆ ವಿವಿಧ ತರಕಾರಿಗಳ ಸಾಂಬಾರು, ಶುಕ್ರವಾರ ಬಿಸಿಬೇಳೆ ಬಾತ್ ಹಾಗೂ ಶನಿವಾರ ಉಪ್ಪಿಟ್ಟು, ಗೋಧಿ ಪೊಂಗಲ್, ವಾಂಗಿಬಾತ್, ಚಪಾತಿ ಅಥವಾ ಪೂರಿ ಸಾಗು ನೀಡಲಾಗುತ್ತದೆ. ಇದರ ಜೊತೆಗೆ ವಾರದಲ್ಲಿ ಐದು ದಿನ 150 ಮಿ.ಲೀ. ಹಾಲು, ನಿಗದಿತ ದಿನಗಳಲ್ಲಿ ರಾಗಿ ಮಾಲ್ಟ್ ಹಾಗೂ ವಾರದ ಆರು ದಿನ ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸಲಾಗುತ್ತದೆ.

ತಜ್ಞರ ಸಲಹೆ ಆಧರಿಸಿ ಮೆನ್ಯೂನಲ್ಲಿ ಬದಲಾವಣೆ ತರಲು ಹಾಗೂ ಆಯಾ ಜಿಲ್ಲೆಗಳ ಆಹಾರ ಪದ್ಧತಿಗೆ ಅನುಗುಣವಾಗಿ ರಾಗಿ ಮುದ್ದೆ, ಜೋಳದ ರೊಟ್ಟಿಯಂತಹ ಪ್ರಾದೇಶಿಕ ಆಹಾರಗಳನ್ನು ಸೇರಿಸುವ ಬಗ್ಗೆಯೂ ಚಿಂತನೆ ನಡೆದಿದೆ.

ಈ ಕುರಿತು ಮಾತನಾಡಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಬಿಸಿಯೂಟದಲ್ಲಿ ಗುಣಮಟ್ಟದ ಮಾನದಂಡ ಕಡ್ಡಾಯವಾಗಿ ಪಾಲನೆಯಾಗಬೇಕು. ಸಮಾನ ಶಿಕ್ಷಣದ ಜೊತೆಗೆ ಮಕ್ಕಳಿಗೆ ನೀಡುವ ಆಹಾರದಲ್ಲೂ ಸಮಾನತೆ ಇರಬೇಕು. ಆಹಾರದ ಗುಣಮಟ್ಟ ಪರಿಶೀಲನೆ ನಿರಂತರವಾಗಿ ನಡೆಯಬೇಕು ಎಂದು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ
ಬಿಗ್ ಬಾಸ್ ಕನ್ನಡ 13: ಯಶಸ್ ಆಟಕ್ಕೆ ದೊಡ್ಡ ಕಂಟಕವಾದ ಗಗನ್ ಚಿನ್ನಪ್ಪ
ಬಿಗ್ ಬಾಸ್ ಕನ್ನಡ 13: ಯಶಸ್ ಆಟಕ್ಕೆ ದೊಡ್ಡ ಕಂಟಕವಾದ ಗಗನ್ ಚಿನ್ನಪ್ಪ
ಸಾಮಾನ್ಯ ಹಾಲ್ಮಾರ್ಕ್ ಪರೀಕ್ಷೆಗೂ ಸಿಗದ ನಕಲಿ ಚಿನ್ನದ ಜಾಲ
ಸಾಮಾನ್ಯ ಹಾಲ್ಮಾರ್ಕ್ ಪರೀಕ್ಷೆಗೂ ಸಿಗದ ನಕಲಿ ಚಿನ್ನದ ಜಾಲ