ಪ್ರಹ್ಲಾದ್​​ ಜೋಶಿ ಭೇಟಿಯಾದ ಕೆ.ಹೆಚ್​. ಮುನಿಯಪ್ಪ: ಎಂಎಸ್​​ಪಿ ಅನುದಾನದ ಬಾಕಿ ಮೊತ್ತ ಬಿಡುಗಡೆಗೆ ಕೇಂದ್ರ ಸಚಿವರಿಗೆ ಮನವಿ

ಕರ್ನಾಟಕದ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ, ರಾಜ್ಯಕ್ಕೆ ಬರಬೇಕಿರುವ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯ ಬಾಕಿ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ 1902 ಕೋಟಿ ಬಾಕಿ ಹಣ ಕೇಳ್ತಿದ್ದೇವೆ ಎಂದು ಪ್ರಹ್ಲಾದ್ ಜೋಶಿ ಅವರ ಭೇಟಿ ನಂತರ ಮುನಿಯಪ್ಪ ತಿಳಿಸಿದ್ದಾರೆ.

ಪ್ರಹ್ಲಾದ್​​ ಜೋಶಿ ಭೇಟಿಯಾದ ಕೆ.ಹೆಚ್​. ಮುನಿಯಪ್ಪ: ಎಂಎಸ್​​ಪಿ ಅನುದಾನದ ಬಾಕಿ ಮೊತ್ತ ಬಿಡುಗಡೆಗೆ ಕೇಂದ್ರ ಸಚಿವರಿಗೆ ಮನವಿ
ಎಂಎಸ್​​ಪಿ ಅನುದಾನದ ಬಾಕಿ ಮೊತ್ತ ಬಿಡುಗಡೆಗೆ ಕೇಂದ್ರ ಸಚಿವರಿಗೆ ಮನವಿ
Edited By:

Updated on: Jul 08, 2026 | 6:46 PM

ಮುಖ್ಯಾಂಶಗಳು

  • ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿಯಾದ ಕೆ.ಹೆಚ್. ಮುನಿಯಪ್ಪ
  • MSP ಯೋಜನೆಯ ಬಾಕಿ ಅನುದಾನ ಬಿಡುಗಡೆಗೆ ಸಚಿವರಿಂದ ಮನವಿ
  • ಕೇಂದ್ರದಿಂದ ರಾಜ್ಯಕ್ಕೆ 1902 ಕೋಟಿ ಬಾಕಿ ಹಣ ಬರಬೇಕಿದೆಳ: ಸಚಿವ

ನವದೆಹಲಿ, ಜುಲೈ 08: ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಅವರನ್ನು ಕರ್ನಾಟಕದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಸಚಿವ ಕೆ.ಹೆಚ್​. ಮುನಿಯಪ್ಪ ಭೇಟಿಯಾಗಿ ಆಹಾರ ಇಲಾಖೆಗೆ ಸಂಬಂಧಿಸಿ ಮನವಿ ಸಲ್ಲಿಸಿದ್ದಾರೆ. ರಾಜ್ಯಕ್ಕೆ ಬರಬೇಕಿದ್ದ ಕನಿಷ್ಠ ಬೆಂಬಲ ಬೆಲೆ ಯೋಜನೆಯ(MSP) ಅನುದಾನ ಬಾಕಿ ಮರುಪಾವತಿ ಮೊತ್ತಗಳ ಬಿಡುಗಡೆ ಕುರಿತು ಜೋಶಿ ಜೊತೆ ಅವರು ಚರ್ಚೆ ನಡೆಸಿದ್ದಾರೆ.

1,902.58 ಕೋಟಿ ರೂ. MSP ಬಾಕಿ ಮರುಪಾವತಿ ಮೊತ್ತ ಬಿಡುಗಡೆಗೆ ಮನವಿ

ಕೆಎಂಎಸ್ 2025-26ರಲ್ಲಿ ರಾಜ್ಯವು 5.69 ಲಕ್ಷ ಮೆಟ್ರಿಕ್ ಟನ್ ರಾಗಿ, 2.21 ಲಕ್ಷ ಮೆಟ್ರಿಕ್ ಟನ್ ಜೋಳ ಹಾಗೂ 0.0567 ಲಕ್ಷ ಮೆಟ್ರಿಕ್ ಟನ್ ಭತ್ತವನ್ನು ಖರೀದಿಸಿದೆ. ಇದರ ಒಟ್ಟು ಮೌಲ್ಯ 4,422.17 ಕೋಟಿ ರೂಪಾಯಿ ಆಗಿದೆ. ಈ ಪೈಕಿ ಕೇಂದ್ರ ಸರ್ಕಾರ ಈವರೆಗೆ 190.10 ಕೋಟಿ ರೂ. ಬಿಡುಗಡೆ ಮಾಡಿದೆ. ಉಳಿದ 4,232.07 ಕೋಟಿ ಮರುಪಾವತಿ ಬಿಡುಗಡೆ ಮಾಡುವಂತೆ ಮುನಿಯಪ್ಪ ಮನವಿ ಮಾಡಿದ್ದಾರೆ. ಅಲ್ಲದೆ ಕೆಎಂಎಸ್ 2022-23ಕ್ಕೆ ಸಂಬಂಧಿಸಿದ 375.99 ಕೋಟಿ ರೂ. ತಾತ್ಕಾಲಿಕ ಸಬ್ಸಿಡಿ ಹಕ್ಕುಪತ್ರವು ಕೇಂದ್ರ ಸರ್ಕಾರದ ಪರಿಶೀಲನೆಯಲ್ಲಿದ್ದು, ಅದನ್ನೂ ಶೀಘ್ರ ಮಂಜೂರು ಮಾಡುವಂತೆ ಆಗ್ರಹಿಸಿದ್ದಾರೆ. ಕೆಎಂಎಸ್ 2009-10ರಿಂದ 2024-25ರವರೆಗಿನ ಅವಧಿಗೆ ಸಂಬಂಧಿಸಿದ 1,902.58 ಕೋಟಿ ರೂ. MSP ಬಾಕಿ ಮರುಪಾವತಿ ಮೊತ್ತ ಬಿಡುಗಡೆಗೂ ಕೇಂದ್ರ ಸಚಿವರನ್ನ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಕರ್ನಾಟಕದಲ್ಲಿ ಅಕ್ರಮವಾಗಿ ಎಸ್​ಐಆರ್; ಪ್ರಲ್ಹಾದ್ ಜೋಶಿ ಆರೋಪ

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ 1902 ಕೋಟಿ ಬಾಕಿ ಹಣ ಕೇಳ್ತಿದ್ದೇವೆ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನಂತರ ನವದೆಹಲಿಯಲ್ಲಿ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ಲೆಕ್ಕಪರಿಶೋಧನೆ ವರದಿ ಸಲ್ಲಿಸಿದ್ದೇವೆ. ಆ ಬಾಕಿ ಮೊತ್ತ ಬಿಡುಗಡೆ ಮಾಡಿದರೆ ರೈತರಿಗೆ ನೀಡ್ತೇವೆ. ಶೇ.10ರಷ್ಟು ಬಾಕಿ ಮೊತ್ತ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದು, ಸದ್ಯದಲ್ಲೇ ಕೇಂದ್ರದಿಂದ ರಾಜ್ಯಕ್ಕೆ 375 ಕೋಟಿ ಬಿಡುಗಡೆ ಆಗಲಿದೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:45 pm, Wed, 8 July 26

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Loading...
Unable to load recommendations.
Follow Us