ಬೆಂಗಳೂರು: ರಸ್ತೆ ಡಾಂಬರೀಕರಣಕ್ಕೆ ಸಚಿವರಿಂದಲೇ ಟ್ವೀಟ್ ಮೂಲಕ ಮನವಿ!

| Updated By: ಗಣಪತಿ ಶರ್ಮ

Updated on: Aug 15, 2024 | 1:08 PM

ಬೆಂಗಳೂರಿನ ರಸ್ತೆ ಸಮಸ್ಯೆ ಪರಿಹರಿಸಲು ನೇರವಾಗಿ ಕ್ರಮ ಕೈಗೊಳ್ಳಲಾಗದೆ ಸಚಿವರೊಬ್ಬರೇ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಅಷ್ಟಕ್ಕೂ ಯಾವ ರಸ್ತೆಯ ಬಗ್ಗೆ ಸಚಿವರು ಟ್ವೀಟ್ ಮಾಡಿದ್ದಾರೆ? ಇದರಿಂದಾಗಿ ನಡೆಯುತ್ತಿರುವ ಚರ್ಚೆಗಳೇನು? ಇಲ್ಲಿದೆ ಮಾಹಿತಿ.

ಬೆಂಗಳೂರು: ರಸ್ತೆ ಡಾಂಬರೀಕರಣಕ್ಕೆ ಸಚಿವರಿಂದಲೇ ಟ್ವೀಟ್ ಮೂಲಕ ಮನವಿ!
ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ಚಿತ್ರ
Follow us on

ಬೆಂಗಳೂರು, ಆಗಸ್ಟ್ 15: ರಾಜ್ಯದ ಅಭಿವೃದ್ಧಿ ವಿಷಯದಲ್ಲಿ, ರಸ್ತೆ ದುರಸ್ತಿಗೆ ಸಂಬಂಧಿಸಿ ಕಾಂಗ್ರೆಸ್ ಸರ್ಕಾರದ ಸಚಿವರೇ ಅಸಹಾಯಕರಾಗಿದ್ದಾರೆಯೇ? ಇಂಥದ್ದೊಂದು ಪ್ರಶ್ನೆ ಸಚಿವ ಕೃಷ್ಣಭೈರೇಗೌಡ ಮಾಡಿರುವ ಟ್ವೀಟ್​​ನಿಂದ ವ್ಯಕ್ತವಾಗಿದೆ. ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್​​ಗೆ ನೇರವಾಗಿ ಸಮಸ್ಯೆಗಳ ಬಗ್ಗೆ ಹೇಳಲಾಗದೆ ಸಚಿವರು ಒದ್ದಾಡುತ್ತಿದ್ದಾರೆ ಎಂಬ ಅನುಮಾನ ಇದರಿಂದ ವ್ಯಕ್ತವಾಗಿದೆ.

ಕೃಷ್ಣಭೈರೇಗೌಡ ಟ್ವೀಟ್


ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೋವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. ಬಿಬಿಎಂಪಿ ಆಯುಕ್ತರು ಅಥವಾ ಬಿಎಂಆರ್​​ಸಿಎಲ್ ಎಂಡಿ ಯಾರಾದರೂ ಆಗಲಿ ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ ಎಂದು ಕೃಷ್ಣಭೈರೇಗೌಡ ಟ್ವೀಟ್​​​ನಲ್ಲಿ ಉಲ್ಲೇಖಿಸಿದ್ದಾರೆ.

ಒಂದಿದೆ ಡಿಕೆ ಶಿವಕುಮಾರ್ ಬ್ರ್ಯಾಂಡ್​​​ ಬೆಂಗಳೂರು ಎಂದು ಭಾಷಣ ಮಾಡುತ್ತಿದ್ದರೆ, ಇತ್ತ ಅವರದ್ದೇ ಸರ್ಕಾರದ ಸಚಿವರು ನೇರವಾಗಿ ಬೆಂಗಳೂರಿನ ರಸ್ತೆ ಸಮಸ್ಯೆ ಬಗ್ಗೆ ಹೇಳಿಕೊಳ್ಳಲಾಗದೆ ಈ ರೀತಿ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಪ್ರಕಟಿಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

ಮಂತ್ರಿಗಳೇ ಇಷ್ಟು ಅಸಹಾಯಕರಾದರೆ ಹೇಗೆ? ಒಂದು ಫೋನ್ ಮಾಡಿದರೆ ಬಿಬಿಎಂಪಿ ಕಮಿಷನರ್ ನಿಮ್ಮ ಫೋನ್ ಸ್ವೀಕರಿಸುತ್ತಿದ್ದಾರೆ ಇಲ್ಲವೋ? ಎಂದು ನರೇಂದ್ರ ಸಿಂಹ ಮೂರ್ತಿ ಎಂಬವರು ಸಚಿವರ ಟ್ವೀಟ್​​ಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರತಿ ದಿನ ರಸ್ತೆಗಿಳಿಯುತ್ತಿವೆ 2000 ಹೊಸ ವಾಹನ! ವಾಯು ಮಾಲಿನ್ಯದಲ್ಲಿ ದೆಹಲಿಯನ್ನೂ ಮೀರಿಸುವ ಆತಂಕ

ಇತ್ತೀಚೆಗೆ ಸರ್ಕಾರ ಆಡಳಿತ ಎಕ್ಸ್​ ತಾಣದ ಮುಖಾಂತರ ನಡೆಸುತ್ತಿರುವುದು ಖುಶಿ. ಆದರೆ ಸಿಲ್ಕ್​ಬೋರ್ಡ್ ಅವಸ್ಥೆ ನಿಮ್ಮ ಗಮನಕ್ಕೆ ಬಾರದಿರುವುದು ವಿಪರ್ಯಾಸ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ