AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್​​

Karnataka MLC Election 2026: ಕರ್ನಾಟಕ ವಿಧಾನಪರಿಷತ್‌ನ ಕಾಂಗ್ರೆಸ್‌ನ 3, ಬಿಜೆಪಿಯ 3 ಹಾಗೂ ಜೆಡಿಎಸ್‌ನ ಓರ್ವ ಸದಸ್ಯರ ಅವಧಿ ಜೂನ್ 26ಕ್ಕೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆ ತೆರವಾಗಲಿರುವ ಈ 7 ಸ್ಥಾನಗಳಿಗೆ ಚುನಾವಣೆ ದಿನಾಂಕ ಪ್ರಕಟಗೊಂಡಿದೆ. ಜೂನ್​​ 18ರಂದು ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಗೊಳ್ಳಲಿದೆ. ಆಡಳಿತಾರೂಢ ಕಾಂಗ್ರೆಸ್​​ ಸದಸ್ಯರ ಬಲವನ್ನು ಹೆಚ್ಚಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದರೆ, ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ತಲಾ 1 ಸ್ಥಾಣ ಕಳೆದುಕೊಳ್ಳುವ ಆತಂಕದಲ್ಲಿವೆ.

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್​​
ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ
ಕಿರಣ್​ ಹನಿಯಡ್ಕ
| Edited By: |

Updated on:May 26, 2026 | 12:46 PM

Share

ಬೆಂಗಳೂರು, ಮೇ 26: ರಾಜ್ಯಸಭಾ ಚುನಾವಣೆಯ ಘೋಷಣೆ ಬೆನ್ನಲ್ಲೇ ಕರ್ನಾಟಕದ ವಿಧಾನಪರಿಷತ್ ಎಲೆಕ್ಷನ್​​ಗೂ ದಿನಾಂಕ ಪ್ರಕಟಗೊಂಡಿದೆ. ಜೂನ್ 26ರಂದು ತೆರವಾಗಲಿರುವ ಪರಿಷತ್​​ನ 7 ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್​​ನ 3, ಬಿಜೆಪಿಯ 3 ಮತ್ತು ಜೆಡಿಎಸ್​​ನ ಒಂದು ಸದಸ್ಯರ ಅವಧಿ ಜೂನ್​​ನಲ್ಲಿ ಮುಕ್ತಾಯವಾಗಲಿದೆ. ಚುನಾವಣೆಗೆ ದಿನಾಂಕ ಘೋಷಣೆ ಬೆನ್ನಲ್ಲೇ ಆಕಾಂಕ್ಷಿಗಳು ಅಲರ್ಟ್​​ ಆಗಿದ್ದು, ಸ್ಥಾನ ಗಿಟ್ಟಿಸಲು ಕಾರ್ಯಕತಂತ್ರ ಶುರುಮಾಡಿದ್ದಾರೆ.

ಮುಖ್ಯಾಂಶಗಳು

  • ಕರ್ನಾಟಕದ ವಿಧಾನಪರಿಷತ್​​ ಚುನಾವಣೆಗೆ ದಿನಾಂಕ ಘೋಷಣೆ
  • ಜೂನ್ 26ರಂದು ತೆರವಾಗಲಿರುವ ಪರಿಷತ್​​ನ 7 ಸ್ಥಾನಗಳಿಗೆ ಎಲೆಕ್ಷನ್​​
  • ಜೂನ್ 18ರಂದು 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆ

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ ವೇಳಾಪಟ್ಟಿ

ಚುನಾವಣೆ ಅಧಿಸೂಚನೆ: ಜೂನ್​​ 01

ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಜೂನ್​​ 08

ನಾಮಪತ್ರ ಪರಿಶೀಲನೆ: ಜೂನ್​​ 09

ನಾಮಪತ್ರ ಹಿಂಪಡೆಯಲು ಕೊನೇ ದಿನ: ಜೂನ್​​ 11

ಮತದಾನ: ಜೂನ್​​ 18

ಫಲಿತಾಂಶ: ಜೂನ್​​ 18

ಇದನ್ನೂ ಓದಿ: ಸಿಎಂ ಪಟ್ಟಕ್ಕಾಗಿ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ; ಬೆಂಗಳೂರಿನಲ್ಲಿ ಜಮೀರ್ ಸಿಎಂ ಆಗಲಿ ಎಂದ ಸ್ವಾಮೀಜಿಯ ವಿಡಿಯೋ ವೈರಲ್!

ವಿಧಾನ ಪರಿಷತ್ತಿನ​​ ಯಾವೆಲ್ಲ ಸದಸ್ಯರ ಅವಧಿ ಮುಕ್ತಾಯ?

ಬಿ.ಕೆ. ಹರಿಪ್ರಸಾದ್​​, ನಾಸೀರ್​​ ಅಹ್ಮದ್​​, ತಿಪ್ಪಣ್ಣ, ಪ್ರತಾಪ್​​ ಸಿಂಹ ನಾಯಕ್​​, ಎನ್​​. ನಾಗರಾಜು (ಎಂಟಿಬಿ), ಸುನಿಲ್​​ ವಲ್ಯಾಪುರ ಮತ್ತು ಗೋವಿಂದರಾಜು ಅವರ ಅಧಿಕಾರ ಅವಧಿಯು ಜೂನ್​​ನಲ್ಲಿ ಮುಕ್ತಾಯವಾಗಲಿದೆ. ಇನ್ನು ವಿಧಾನ ಸಭೆಯ ಹಾಲಿ ಬಲಾಬಲವನ್ನು ಗಮನಿಸಿದರೆ ತೆರವಾಗಲಿರುವ 7 ಸ್ಥಾನಗಳ ಪೈಕಿ 5 ಸ್ಥಾನಗಳು ಕಾಂಗ್ರೆಸ್​​ ಮತ್ತು 2 ಸ್ಥಾನಗಳು ಬಿಜೆಪಿ ಪಾಲಾಗುವ ಸಾಧ್ಯತೆ ಇದೆ. ಆ ಮೂಲಕ ಕಾಂಗ್ರೆಸ್​​ 2 ಸ್ಥಾನಗಳನ್ನು ಹೆಚ್ಚಿಸಿಕೊಂಡರೆ, ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್​​ ತಲಾ 1 ಸ್ಥಾನಗಳನ್ನು ಕಳೆದುಕೊಳ್ಳುವ ಲೆಕ್ಕಾಚಾರ ಇದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:28 pm, Tue, 26 May 26

Follow Us
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ