AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್​​ ಚುನಾವಣೆಯಲ್ಲಿ ಕ್ರಾಸ್​​ ವೋಟಿಂಗ್​​: ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ರಚನೆ

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ನಡೆದಿರುವ ಬಗ್ಗೆ ತನಿಖೆಗಾಗಿ ಬಿಜೆಪಿ ಸಿ.ಟಿ.ರವಿ ನೇತೃತ್ವದ ತ್ರಿಸದಸ್ಯ ಸತ್ಯಶೋಧನಾ ಸಮಿತಿ ರಚಿಸಿದೆ. ಮತ್ತೊಂದೆಡೆ ಕ್ರಾಸ್​​ ವೋಟಿಂಗ್​​ ಸಂಬಂಧ ಕೇಂದ್ರದ ಮಾಜಿ ಸಚಿವ ಭಗವಂತ್ ಖೂಬಾ ಶಿಸ್ತು ಕ್ರಮಕ್ಕೆ ಆಗ್ರಹಿಸಿ ರಾಜ್ಯ ಬಿಜೆಪಿ ಅಧ್ಯಕ್ಷೆಇಗೆ ಪತ್ರ ಬರೆದಿದ್ದಾರೆ. ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರಿಗೂ ಈ ಸಂಬಂಧ ಮನವಿ ಮಾಡಿದ್ದಾರೆ.

ವಿಧಾನ ಪರಿಷತ್​​ ಚುನಾವಣೆಯಲ್ಲಿ ಕ್ರಾಸ್​​ ವೋಟಿಂಗ್​​: ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ರಚನೆ
ಸಾಂದರ್ಭಿಕ ಚಿತ್ರImage Credit source: PTI
ಕಿರಣ ಹೆಚ್​. ವಿ.
| Edited By: |

Updated on:Jun 19, 2026 | 2:06 PM

Share

ಬೆಂಗಳೂರು, ಜೂನ್​​ 19: ವಿಧಾನ ಪರಿಷತ್​​ ಚುನಾವಣೆಯಲ್ಲಿ ಭಾರಿ ಅಡ್ಡಮತದಾನದ ಪರಿಣಾಮ ಕೂದಲೆಳೆ ಅಂತರದಲ್ಲಿ ಮುಖಭಂಗ ತಪ್ಪಿಸಿಕೊಂಡಿರುವ ಕರ್ನಾಟಕ ಬಿಜೆಪಿ ಕ್ರಾಸ್​​ ವೋಟಿಂಗ್​​ ವಿಚಾರವಾಗಿ ಸತ್ಯಶೋಧನಾ ಸಮಿತಿ ರಚನೆ ಮಾಡಿದೆ. ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಎನ್​.ಮಹೇಶ್, ಶಾಸಕ ಮಹೇಶ್ ಟೆಂಗಿನಕಾಯಿ ಒಳಗೊಂಡ ತ್ರಿಸದಸ್ಯ ಸಮಿತಿಗೆ ಜೂನ್ 25ರೊಳಗೆ ವರದಿ ನೀಡುವಂತೆ ಬಿ.ವೈ.ವಿಜಯೇಂದ್ರ ಸೂಚನೆ ನೀಡಿದ್ದಾರೆ.

ಭಗವಂತ್ ಖೂಬಾ ಪತ್ರ

ಬಿಜೆಪಿ ಶಾಸಕರಿಂದ ಅಡ್ಡಮತದಾನ ಹಿನ್ನೆಲೆ ರಾಜ್ಯ ಬಿಜೆಪಿ ಅದ್ಯಕ್ಷ ಬಿ.ವೈ.ವಿಜಯೇಂದ್ರಗೆ ಕೇಂದ್ರದ ಮಾಜಿ ಸಚಿವ ಭಗವಂತ್ ಖೂಬಾ ಪತ್ರ ಬರೆದಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧವೇ ರಾಜಾರೋಷವಾಗಿ ಕೆಲಸ ಮಾಡಿದರೂ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಇದರಿಂದಾಗಿಯೇ ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನ ನಡೆದಿದೆ. ಎಷ್ಟೋ ಕಡೆ ಶಾಸಕರು ತಮ್ಮ ಬೆಂಬಲಿಗರಿಗೆ ಮುನ್ಸೂಚನೆ ನೀಡುತ್ತಿದ್ದಾರೆ ಕಾರ್ಯಕರ್ತರು ಸಂಘಟನೆಯಲ್ಲಿ ಕೆಲಸ ಮಾಡದೇ ದೂರ ಉಳಿಯುತ್ತಿದ್ದಾರೆ. ಹಣ ಕೊಟ್ಟು ಜನರನ್ನು ಕರೆತಂದು ಕಾರ್ಯಕರ್ತರು ಎಂದು ಬಿಂಬಿಸುವ ಕೆಲಸ ಆಗುತ್ತಿದ್ದರೂ ಇದ್ಯಾವುದನ್ನೂ ಪ್ರಶ್ನಿಸುತ್ತಿಲ್ಲ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ. 2028ರಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಶಿಸ್ತು ಕ್ರಮ ಆಗಲೇಬೇಕು ಎಂದು ಗೌಪ್ಯ ಪತ್ರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಒತ್ತಾಯಿಸಿರುವ ಖೂಬಾ, ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರಿಗೂ ಈ ಸಂಬಂಧ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪರಿಷತ್ ಚುನಾವಣೆಯಲ್ಲಿ ಜೆಡಿಎಸ್​ಗೆ ಸೋಲು; ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ

‘ಅಡ್ಡ ಮತದಾನದಿಂದ ಬೇಸರವಾಗಿದೆ’

ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಅಡ್ಡಮತದಾನದಿಂದ ನಮಗೂ ಬೇಸರ ಹಾಗೂ ನೋವಾಗಿದೆ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಅಡ್ಡಮತದಾನ ಆಗಬಾರದಿತ್ತು, ಆದರೆ ದುರಾದೃಷ್ಟವಶಾತ್ ಆಗಿದೆ. ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ. ಈ ಬೆಳವಣಿಗೆಯಿಂದ ವಿಚಲಿತ ಆಗಿ ಓಡಿಹೋಗುವವನು ನಾನಲ್ಲ. ಇದನ್ನು ಅರಗಿಸಿಕೊಳ್ಳುವ ಶಕ್ತಿ ನನಗಿದೆ. ನಾನು ರಾಜ್ಯ ಬಿಜೆಪಿ ಅಧ್ಯಕ್ಷ, ಬಿ.ಎಸ್​.ಯಡಿಯೂರಪ್ಪನವರ ಮಗ. ಅಡ್ಡಮತದಾನ ಬಗ್ಗೆ ಯಾರಿಗೆ ಹೇಳಬೇಕೋ ಹೇಳುತ್ತೇನೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:05 pm, Fri, 19 June 26

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು