AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ನ​​ ಐವರು, ಬಿಜೆಪಿಯ ಇಬ್ಬರ ಗೆಲುವು, ಸೋಲುಂಡ ಜೆಡಿಎಸ್​​ನ ಗೋವಿಂದರಾಜು

ಕರ್ನಾಟಕ ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ನ ಐದೂ ಅಭ್ಯರ್ಥಿಗಳು ಮತ್ತು ಬಿಜೆಪಿಯ ಇಬ್ಬರು ಗೆಲುವು ಸಾಧಿಸಿದ್ದಾರೆ. ಮೈತ್ರಿ ಪಕ್ಷಗಳ ಕ್ರಾಸ್ ವೋಟಿಂಗ್‌ನಿಂದಾಗಿ ಜೆಡಿಎಸ್‌ನ ಏಕೈಕ ಅಭ್ಯರ್ಥಿ ಗೋವಿಂದರಾಜು ಪರಾಭವಗೊಂಡಿದ್ದಾರೆ. ಚಲಾವಣೆಗೊಂಡಿದ್ದ 222 ಮತಗಳ ಪೈಕಿ ಒಂದು ಮತ ಅಸಿಂಧುವಾಗಿದೆ. ನಂಬರ್ ಸರಿಯಾಗಿ ಬರೆಯದಿದ್ದಕ್ಕೆ 1 ಮತವನ್ನು ತಿರಸ್ಕರಿಸಲಾಗಿದೆ.

ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ನ​​ ಐವರು, ಬಿಜೆಪಿಯ ಇಬ್ಬರ ಗೆಲುವು, ಸೋಲುಂಡ ಜೆಡಿಎಸ್​​ನ ಗೋವಿಂದರಾಜು
ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Jun 18, 2026 | 7:12 PM

Share

ಬೆಂಗಳೂರು, ಜೂನ್​​ 18: ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲುಂಡಿದ್ದು, ಬಿಜೆಪಿ ಮತ್ತು ಜೆಡಿಎಸ್​​ನಿಂದ ಕ್ರಾಸ್​​ ವೋಟಿಂಗ್​​ ಆಗಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕಾಂಗ್ರೆಸ್​ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್​ಗೆ 32 ಮತಗಳು ಬಂದಿದ್ದರೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಪರ 14 ಮತಗಳು ಬಿದ್ದಿವೆ.

ಯಾವ್ಯಾವ ಅಭ್ಯರ್ಥಿಗೆ ಎಷ್ಟು ಮತ?

  • ಜೆಡಿಎಸ್ ಅಭ್ಯರ್ಥಿ ಗೋವಿಂದರಾಜುಗೆ 14 ಮತಗಳು
  • ಕಾಂಗ್ರೆಸ್​​ನ ಬಿ.ಕೆ. ಹರಿಪ್ರಸಾದ್​​ಗೆ 30 ಮತಗಳು
  • ಕಾಂಗ್ರೆಸ್​ನ ತಿಪ್ಪಣ್ಣಪ್ಪ ಕಮಕನೂರುಗೆ 30 ಮತಗಳು
  • ಕಾಂಗ್ರೆಸ್​ನ ಪಿ.ವಿ.ಮೋಹನ್​ಗೆ 29 ಮತಗಳು
  • ಕಾಂಗ್ರೆಸ್​ನ ಬಿ.ಎಸ್.ಶಿವಣ್ಣಗೆ 30 ಮತಗಳು
  • ಕಾಂಗ್ರೆಸ್​ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್​ಗೆ 32 ಮತ
  • ಬಿಜೆಪಿ ಅಭ್ಯರ್ಥಿ ಆರ್.ರಘುಗೆ 29 ಮತಗಳು
  • ಬಿಜೆಪಿ ಅಭ್ಯರ್ಥಿ ಲಿಂಗರಾಜು ಪಾಟೀಲ್​ಗೆ 27 ಮತಗಳು

ಇದನ್ನೂ ಓದಿ: ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ ವೇಳೆ ನಡೆದ 5 ಸ್ವಾರಸ್ಯಕರ ಘಟನೆಗಳಿವು

ಎಲಿಮಿನೇಷನ್ ರೌಂಡ್​ನಲ್ಲಿ ಲಿಂಗರಾಜ್ ಪಾಟೀಲ್​ಗೆ ಜಯ

ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್​ಗೆ 11 ಹೆಚ್ಚುವರಿ ಮತಗಳು ದೊರೆತಿವೆ. ಶಿವರಾಂ ಹೆಬ್ಬಾರ್, ಎಸ್​.ಟಿ.ಸೋಮಶೇಖರ್ ಹೊರತುಪಡಿಸಿ  ಬಿಜೆಪಿಯ 3 ಮತ್ತು ಜೆಡಿಎಸ್​ನ 6 ಶಾಸಕರಿಂದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾವಣೆಗೊಂಡಿದೆ. ಹೀಗಾಗಿ ಲಿಂಗರಾಜ ಪಾಟೀಲ್ ಗೆಲುವಿನ ಕೋಟಾ ತಲುಪಿರಲಿಲ್ಲ. ಪ್ರತಿ ಅಭ್ಯರ್ಥಿ ಗೆಲ್ಲಲು 27.63 ಮತ ಪಡೆಯಬೇಕು. ಆದರೆ ಲಿಂಗರಾಜ ಪಾಟೀಲ್​ಗೆ ಕೇವಲ 27 ಮತಗಳು ಸಿಕ್ಕಿದ್ದವು. ಜೆಡಿಎಸ್​ನ ಗೋವಿಂದರಾಜು 14 ಮತ ಪಡೆದಿದ್ದ ಹಿನ್ನೆಲೆ ಎಲಿಮಿನೇಷನ್ ರೌಂಡ್​ನಲ್ಲಿ ಲಿಂಗರಾಜ್ ಪಾಟೀಲ್​ಗೆ ಜಯ ಸಿಕ್ಕಿದೆ.

ಒಂದು ಮತ ಅಸಿಂಧು

ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಚಲಾವಣೆಗೊಂಡಿದ್ದ 222 ಮತಗಳ ಪೈಕಿ ಒಂದು ಮತ ಅಸಿಂಧುವಾಗಿದೆ. ನಂಬರ್ ಸರಿಯಾಗಿ ಬರೆಯದಿದ್ದಕ್ಕೆ 1 ಮತವನ್ನು ತಿರಸ್ಕರಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:57 pm, Thu, 18 June 26

Follow Us