AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮುಂದುವರಿದ ಮಳೆಯ ಕೊರತೆ: ಶೇ.21ರಷ್ಟು ಕಡಿಮೆ ಸುರಿದ ವರ್ಷಧಾರೆ

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಹಲವೆಡೆ ಮಳೆಯಾಗುತ್ತಿದ್ದರೂ ಮುಂಗಾರು ಆರಂಭದಿಂದ ಇದುವರೆಗಿನ ಒಟ್ಟಾರೆ ಮಳೆ ಕೊರತೆ ತೀವ್ರವಾಗಿದೆ. ಜೂನ್‌ 1ರಿಂದ ಆಗಸ್ಟ್ 9ರವರೆಗಿನ ಅವಧಿಯಲ್ಲಿ ಕರ್ನಾಟಕದಲ್ಲಿ ವಾಡಿಕೆಗಿಂತ ಶೇ. 21ರಷ್ಟು ಕಡಿಮೆ ಮಳೆ ದಾಖಲಾಗಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ. ಬೆಂಗಳೂರು, ಮೈಸೂರು ಹಾಗೂ ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತೀವ್ರ ಅಭಾವ ಎದುರಾಗಿದ್ದು, ಮಲೆನಾಡಿನಲ್ಲೂ ಪರಿಸ್ಥಿತಿ ಕಳವಳಕಾರಿಯಾಗಿದೆ.

ಕರ್ನಾಟಕದಲ್ಲಿ ಮುಂದುವರಿದ ಮಳೆಯ ಕೊರತೆ: ಶೇ.21ರಷ್ಟು ಕಡಿಮೆ ಸುರಿದ ವರ್ಷಧಾರೆ
ಸಾಂದರ್ಭಿಕ ಚಿತ್ರImage Credit source: PTI
ಪ್ರಸನ್ನ ಹೆಗಡೆ
|

Updated on: Aug 10, 2026 | 6:12 PM

Share

ಮುಖ್ಯಾಂಶಗಳು

  • ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ವಾಡಿಕೆಗಿಂತ ಕಡಿಮೆ ಮಳೆ
  • ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇ.34ರಷ್ಟು ಕೊರತೆ ದಾಖಲು
  • ಮಲೆನಾಡು ಜಿಲ್ಲೆಗಳಲ್ಲೂ ಮಳೆ ಅಭಾವ, ಪರಿಸ್ಥಿತಿ ಕಳವಳಕಾರಿ

ಬೆಂಗಳೂರು, ಆಗಸ್ಟ್​​ 10: ಕಳೆದ ಒಂದು ವಾರದಿಂದ ಕರ್ನಾಟಕದ ಕೆಲವೆಡೆ ಭಾರಿ ಮಳೆಯಾಗುತ್ತಿದ್ದರೂ ರಾಜ್ಯದ ಮಳೆ ಕೊರತೆ ಮಾತ್ರ ಕಡಿಮೆಯಾಗಿಲ್ಲ. ಜೂನ್‌ 1ರಿಂದ ಆರಂಭವಾದ ಮುಂಗಾರು ಅವಧಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಬೆಂಗಳೂರು ನಗರ ಜಿಲ್ಲೆ ಅತ್ಯಂತ ಹೆಚ್ಚು ಮಳೆ ಕೊರತೆ ಎದುರಿಸುತ್ತಿರುವ ಜಿಲ್ಲೆಗಳ ಪೈಕಿ ಒಂದಾಗಿದ್ದು, ಶೇ.34ರಷ್ಟು ಕೊರತೆ ದಾಖಲಾಗಿದೆ. ಆಗಸ್ಟ್‌ 9ರವರೆಗೆ ಜಿಲ್ಲೆಯಲ್ಲಿ 127 ಮಿ.ಮೀ ಮಳೆಯಾಗಿದ್ದು, ಈ ಅವಧಿಯಲ್ಲಿ ವಾಡಿಕೆಯಂತೆ 197 ಮಿ.ಮೀ ಮಳೆಯಾಗಬೇಕಿತ್ತು.

ರಾಜ್ಯದಲ್ಲಿ ಶೇ.21ರಷ್ಟು ಮಳೆ ಕೊರತೆ

ವಿಜಯನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ವಾಡಿಕೆ ಮಳೆಯ ಅರ್ಧಕ್ಕಿಂತಲೂ ಕಡಿಮೆ ಮಳೆಯಾಗಿದೆ. ವಿಜಯನಗರದಲ್ಲಿ ಶೇ.58 ಮತ್ತು ಮೈಸೂರಿನಲ್ಲಿ ಶೇ.51ರಷ್ಟು ಮಳೆ ಕೊರತೆ ದಾಖಲಾಗಿದೆ. ಚಾಮರಾಜನಗರದಲ್ಲಿ ಶೇ.47, ಕೋಲಾರದಲ್ಲಿ ಶೇ.42 ಹಾಗೂ ಬಳ್ಳಾರಿಯಲ್ಲಿ ಶೇ.41ರಷ್ಟು ಮಳೆ ಕೊರತೆ ದಾಖಲಾಗಿದ್ದು, ಈ ಜಿಲ್ಲೆಗಳೂ ತೀವ್ರ ಮಳೆ ಕೊರತೆ ಎದುರಿಸುತ್ತಿವೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಶೇ.21ರಷ್ಟು ಮಳೆ ಕೊರತೆ ಇದೆ. ರಾಜ್ಯವು 656.7 ಮಿ.ಮೀ ವಾಡಿಕೆ ಮಳೆಯ ಎದುರು 517.8 ಮಿ.ಮೀ ಮಳೆಯನ್ನು ಮಾತ್ರ ಪಡೆದಿದೆ. ಮುಂಗಾರು ಆರಂಭವಾದಾಗಿನಿಂದ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಮಳೆ ಕೊರತೆ ದಾಖಲಾಗಿದೆ. ಆದರೆ, ಈ ಮಳೆಯಿಂದ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಕೊಂಚ ಏರಿಕೆಯಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ

ಮಲೆನಾಡಿನಲ್ಲೂ ಪರಿಸ್ಥಿತಿ ಕಳವಳಕಾರಿ

ರಾಜ್ಯದ ಪ್ರಮುಖ ನದಿಗಳ ಜಲಾನಯನ ಪ್ರದೇಶಗಳಾಗಿರುವ ಮಲೆನಾಡು ಜಿಲ್ಲೆಗಳಲ್ಲೂ ಪರಿಸ್ಥಿತಿ ಕಳವಳಕಾರಿಯಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಸುಮಾರು ಶೇ.31ರಿಂದ 34ರಷ್ಟು ಕಡಿಮೆ ಮಳೆಯಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್ ಸೇರಿ 6 ಆರೋಪಿಗಳು ವಿಚಾರಣೆಗೆ ಹಾಜರು
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್ ಸೇರಿ 6 ಆರೋಪಿಗಳು ವಿಚಾರಣೆಗೆ ಹಾಜರು
ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!
ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!
ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ
ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ
ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ
ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ