AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಬೆಂಗಳೂರಲ್ಲಿ ಮುಂದುವರಿದ ಕೂಲ್ ಕೂಲ್ ಕ್ಲೈಮೇಟ್: ಕರಾವಳಿಯ 3 ಜಿಲ್ಲೆಗಳಿಗೆ ಹೈ ಅಲರ್ಟ್

Monsoon 2026: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ. ಐಎಂಡಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಕ್ಕೆ 'ರೆಡ್ ಅಲರ್ಟ್' ಘೋಷಿಸಿದೆ. ಮಲೆನಾಡು ಭಾಗದಲ್ಲೂ ವರುಣನ ಆರ್ಭಟ ಹೆಚ್ಚಲಿದ್ದು, ಸಾರ್ವಜನಿಕರು ಎಚ್ಚರ ವಹಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Karnataka Weather Forecast: ಬೆಂಗಳೂರಲ್ಲಿ ಮುಂದುವರಿದ ಕೂಲ್ ಕೂಲ್ ಕ್ಲೈಮೇಟ್: ಕರಾವಳಿಯ 3 ಜಿಲ್ಲೆಗಳಿಗೆ ಹೈ ಅಲರ್ಟ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 25, 2026 | 6:59 AM

Share

ಮುಖ್ಯಾಂಶಗಳು

  • ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗಲಿದೆ
  • ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನ ಭಾಗಗಳಲ್ಲಿ ವರುಣನ ಆರ್ಭಟ
  • ಬೆಂಗಳೂರು ಹಾಗೂ ಬಯಲು ಸೀಮೆ ಹವಾಮಾನ ಹೇಗಿರಲಿದೆ?

ಬೆಂಗಳೂರು, ಜೂ.25: ನೈಋತ್ಯ ಮುಂಗಾರು ಮಾರುತಗಳು ರಾಜ್ಯಾದ್ಯಂತ ತೀವ್ರಗೊಂಡಿದ್ದು, ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನ ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಲಿದ್ದು, ಆ ಜಿಲ್ಲೆಗಳ ಜನರು ಎಚ್ಚರ ಇರುವಂತೆ ಹಾಗೂ ಅಧಿಕಾರಿಗಳು ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಇಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಮಲೆನಾಡು ಭಾಗದಲ್ಲೂ ಗಾಳಿಯ ವೇಗ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ರಸ್ತೆಗಳಲ್ಲಿ ಸಾಗುವ ವಾಹನ ಸವಾರರು ಹಾಗೂ ನದಿ ತೀರದ ನಿವಾಸಿಗಳು ಜಾಗರೂಕರಾಗಿರಲು ಜಿಲ್ಲಾಡಳಿತಗಳು ಪ್ರಕಟಣೆ ಹೊರಡಿಸಿವೆ.

ಇದನ್ನೂ ಓದಿ: ಫುಟ್ ಪಾತ್ ತೆರವಿಗೆ ಕೃಷ್ಣಭೈರೇಗೌಡ ಪಣ:ಒತ್ತುವರಿದಾರರಿಗೆ ಡೆಡ್​​ಲೈನ್, ರಸ್ತೆ ಬದಿ ನಿಲ್ಲಿಸುವ ಗಾಡಿ ಗುಜರಿಗೆ

ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಾತಾವರಣ ಸದ್ಯ ತಂಪಾಗಿದ್ದು, ಮೋಡಕವಿದ ವಾತಾವರಣ ಮುಂದುವರಿಯಲಿದೆ. ಬೆಳಗ್ಗೆ ಮತ್ತು ಸಂಜೆ ವೇಳೆ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು. ಬಯಲು ಸೀಮೆಯ ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲೂ ಹಗುರವಾದ ಮಳೆಯ ಸಿಂಚನವಾಗಲಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕಾಗಲಿದ್ದು, ಕೃಷಿ ಚಟುವಟಿಕೆಗಳಿಗೆ ಪೂರಕವಾದ ವಾತಾವರಣ ಸೃಷ್ಟಿಯಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!
ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!