AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು, ಮಂಡ್ಯ, ಮೈಸೂರಿಗೆ ‘ಯೆಲ್ಲೋ ಅಲರ್ಟ್: ಇಂದು ಈ ಜಿಲ್ಲೆಗಳಲ್ಲಿ ಸುರಿಯಲಿದೆ ಗುಡುಗು ಸಹಿತ ಭಾರಿ ಮಳೆ

ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿದ್ದರೂ, ಇಂದು ದಕ್ಷಿಣ ಒಳನಾಡಿನ ಕೊಡಗು, ಮೈಸೂರು ಸೇರಿದಂತೆ 5 ಜಿಲ್ಲೆಗಳಿಗೆ ಭಾರೀ ಮಳೆಯ ನಿರೀಕ್ಷೆಯಿದ್ದು, 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಮಲೆನಾಡು ಭಾಗಕ್ಕೂ ಎಚ್ಚರಿಕೆ ನೀಡಲಾಗಿದೆ. ಜೂನ್ 22ರ ನಂತರ ಕರಾವಳಿ ಭಾಗದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದೆ. ಉತ್ತರ ಕರ್ನಾಟಕದಲ್ಲಿ ಬಹುತೇಕ ಒಣ ಹವಾಮಾನ ಇರಲಿದೆ.

ಕೊಡಗು, ಮಂಡ್ಯ, ಮೈಸೂರಿಗೆ ‘ಯೆಲ್ಲೋ ಅಲರ್ಟ್: ಇಂದು ಈ ಜಿಲ್ಲೆಗಳಲ್ಲಿ ಸುರಿಯಲಿದೆ ಗುಡುಗು ಸಹಿತ ಭಾರಿ ಮಳೆ
ಮಳೆ (ಪ್ರಾತಿನಿಧಿಕ ಚಿತ್ರ)
ಅಕ್ಷಯ್​ ಪಲ್ಲಮಜಲು​​
| Edited By: |

Updated on:Jun 19, 2026 | 4:04 PM

Share

ಬೆಂಗಳೂರು, ಜೂ.19: ಕರ್ನಾಟಕದಲ್ಲಿ ಸದ್ಯ ಮುಂಗಾರು ಮಳೆ ಕೊಂಚ ಕ್ಷೀಣಿಸಿದ್ದು, ದುರ್ಬಲಗೊಂಡಿದೆ. ಆದಾಗ್ಯೂ ಹವಾಮಾನ ಇಲಾಖೆಯ (IMD) ಇತ್ತೀಚಿನ ವರದಿಯ ಪ್ರಕಾರ ಇಂದು ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಪ್ರಮುಖವಾಗಿ ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ.

ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಸಾಧಾರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಆದರೆ ಬರುವ ವಾರ ಅಂದರೆ ಜೂನ್ 22 ರಿಂದ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳಲಿದ್ದು, ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಇಂದು ರಾಜ್ಯದಲ್ಲಿ ಗರಿಷ್ಠ ತಾಪಮಾನ 33°C ಹಾಗೂ ಕನಿಷ್ಠ ತಾಪಮಾನ 23°C ಆಸುಪಾಸಿನಲ್ಲಿ ಇರಲಿದೆ.

ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಇಡೀ ಮಲೆನಾಡು ಭಾಗದಲ್ಲಿ ಇಂದು ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆಯು ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಘಾಟ್ ಪ್ರದೇಶಗಳಲ್ಲಿ ಸಂಚರಿಸುವ ಚಾಲಕರು ಜಾಗರೂಕರಾಗಿರಲು ಸೂಚಿಸಲಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಕರಾವಳಿಯ ಕೆಲವು ಭಾಗಗಳಲ್ಲಿ ಸಾಧಾರಣ ಹಾಗೂ ಒಳನಾಡಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಇರಲಿದ್ದು, ಮೀನುಗಾರರು ಎಚ್ಚರಿಕೆ ವಹಿಸಬೇಕು. ಜೂನ್ 22ರ ನಂತರ ಇಲ್ಲಿ ಮಳೆ ಮತ್ತಷ್ಟು ತೀವ್ರಗೊಳ್ಳಲಿದೆ.

ಇದನ್ನೂ ಓದಿ; ರಾಜ್ಯದಲ್ಲಿ ಭೀಕರ ಬರಗಾಲದ ವದಂತಿ ಸುಳ್ಳು: ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದ ಹವಾಮಾನ ತಜ್ಞರು

ಮಲೆನಾಡಿಗೆ ಹೋಲಿಸಿದರೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂಗಾರು ಮಳೆ ಸದ್ಯಕ್ಕೆ ಕ್ಷೀಣಿಸಿದೆ. ಕಲಬುರಗಿ, ಬೆಳಗಾವಿ, ಬೀದರ್, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಇಂದು ಪ್ರಧಾನವಾಗಿ ಒಣ ಹವಾಮಾನ ಇರಲಿದೆ. ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 33°C ನಿಂದ 35°C ವರೆಗೆ ದಾಖಲಾಗುವ ಸಾಧ್ಯತೆಯಿದ್ದು, ಸೆಖೆಯ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆಯನ್ನು ಹೊರತುಪಡಿಸಿದರೆ ಭಾರಿ ಮಳೆಯ ಮುನ್ಸೂಚನೆ ಇಲ್ಲ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 am, Fri, 19 June 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ