ಉತ್ತರ ಕನ್ನಡ ಪ್ರವಾಹ ಪ್ರವಾಸ ಕೈಗೊಂಡ ಸಿಎಂ ಬಸವರಾಜ ಬೊಮ್ಮಾಯಿ, ಮೊದಲ ದಿನವೇ ಪ್ಲಾಪ್ ಶೋ

ಪ್ರವಾಹ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಸರಿಯಾದ ಸಮಯ ಪಾಲನೆ ಮಾಡುತ್ತಿಲ್ಲ. ನೆರೆ ಪೀಡಿತ ಪ್ರದೇಶಗಳಿಗೆ ಇನ್ನೂ ಭೇಟಿ ಕೊಟಿಲ್ಲ. ಸಮಯಕ್ಕೆ ಸರಿಯಾಗಿ ಹಾಜರಾಗದೆ ಇತರೆ ಕಾರ್ಯಾಕ್ರಮಕ್ಕೆ ಹಾಜರಾಗುತ್ತಿದ್ದಾರೆ.

ಉತ್ತರ ಕನ್ನಡ ಪ್ರವಾಹ ಪ್ರವಾಸ ಕೈಗೊಂಡ ಸಿಎಂ ಬಸವರಾಜ ಬೊಮ್ಮಾಯಿ, ಮೊದಲ ದಿನವೇ ಪ್ಲಾಪ್ ಶೋ
ಉತ್ತರ ಕನ್ನಡ ಪ್ರವಾಹ ಪ್ರವಾಸ ಕೈಗೊಂಡ ಸಿಎಂ ಬಸವರಾಜ ಬೊಮ್ಮಾಯಿ, ಮೊದಲ ದಿನವೇ ಪ್ಲಾಪ್ ಶೋ
Follow us
TV9 Web
| Updated By: ಆಯೇಷಾ ಬಾನು

Updated on:Jul 29, 2021 | 1:38 PM

ಬೆಂಗಳೂರು: ಅತೀವ ಮುಂಗಾರು ಮಳೆಯಿಂದ ತೀವ್ರತರ ಸಂಕಷ್ಟಕ್ಕೆ ತುತ್ತಾಗಿರುವ ಉತ್ತರ ಕನ್ನಡದ ನೆರೆ ಭಾಗಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಬೇಕು ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಮೇದಿ/ ಉದ್ದೇಶ ಹೊಂದಿದ್ದರು. ಆದರೆ ಅವರ ಪ್ರವಾಸ ನಿಧಾನಗತಿಯಲ್ಲಿ ಸಾಗುತ್ತಿದ್ದು, ಇನ್ನೂ ಹುಬ್ಬಳ್ಳಿಯಲ್ಲೇ ಉಳಿದಿದ್ದಾರೆ. ಮುಖ್ಯಂಮಂತ್ರಿಯಾದ ಮರು ದಿನ ಅಪಾರ ಸಂಖ್ಯೆಯ ಅಭಿಮಾನಿಗಳ ಭೇಟಿ, ಕಾರ್ಯದೊತ್ತಡದಿಂದಾಗಿ ಸಿಎಂ ಬೊಮ್ಮಾಯಿ ಪ್ರವಾಸ ವಿಳಂಬದಿಂದ ಕೂಡಿದೆ. ಈ ಮಧ್ಯೆ ಅವರ ಬೆಂಗಾವಲು ಪಡೆ ವಾಹನ ಸಣ್ಣ ಅಪಘಾತಕ್ಕೂ ಸಿಲುಕಿದೆ.

ಪ್ರವಾಹ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಸರಿಯಾದ ಸಮಯ ಪಾಲನೆ ಮಾಡುತ್ತಿಲ್ಲ. ನೆರೆ ಪೀಡಿತ ಪ್ರದೇಶಗಳಿಗೆ ಇನ್ನೂ ಭೇಟಿ ಕೊಟಿಲ್ಲ. ಸಮಯಕ್ಕೆ ಸರಿಯಾಗಿ ಹಾಜರಾಗದೆ ಇತರೆ ಕಾರ್ಯಾಕ್ರಮಕ್ಕೆ ಹಾಜರಾಗುತ್ತಿದ್ದಾರೆ. ಬೆಳ್ಳಗ್ಗೆ 11.45ಕ್ಕೆ ಅಂಕೋಲದಲ್ಲಿರಬೇಕಾದ ಸಿಎಂ ಇನ್ನೂ ಬಂದಿಲ್ಲ. ನೆರೆ ಪೀಡಿತ ಪ್ರದೇಶಗಳಿಗೆ ತೆರಳದೆ ಸ್ವಾಮೀಜಿಗಳ ಭೇಟಿ, ಇತರೆ ಕಾರ್ಯಕ್ರಮಗಳ ಚಾಲನೆಗೆ ಸಿಎಂ ಸಮಯ ನೀಡುತ್ತಿದ್ದಾರೆ. ಸದ್ಯ ಈಗ ಕಲಘಟಗಿಯಿಂದ ಯಲ್ಲಾಪುರಕ್ಕೆ ತೆರಳಿದ್ದಾರೆ. ನೂತನ ಸಿಎಂ ಬೊಮ್ಮಾಯಿಯವರ ಪ್ರವಾಸ ನಿಧಾನಗತಿಯಲ್ಲಿ ಸಾಗುತ್ತಿದ್ದು ಮೊದಲ ದಿನವೇ ಪ್ಲಾಪ್ ಶೋ ಆಗಿದ್ದಾರೆ.

11.45 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಯಲ್ಲಾಪುರದಲ್ಲಿಯೇ ಇರಲಿದ್ದಾರೆ. ಬಳಿಕ ಕಾರವಾರ ಮತ್ತು ಅಂಕೋಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ, ಪರಿಹಾರ ಕ್ರಮಗಳ ಪರಿಶೀಲನೆ, ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2 ರಿಂದ 3 ಗಂಟೆಯವರೆಗೆ ಅಂಕೋಲಾದಲ್ಲಿ ಶಾಸಕರು, ಸಂಸದರು ಮತ್ತು ಜಿಲ್ಲಾಡಳಿತದ ಜೊತೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅಂಕೋಲಾದಿಂದ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ 5.30ಕ್ಕೆ ಹುಬ್ಬಳ್ಳಿ ಏರ್ ಪೋರ್ಟ್ ತಲುಪಲಿದ್ದಾರೆ.

ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು! ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಅಪಘಾತಕ್ಕೀಡಾಗಿದೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮುಂಭಾಗ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾರಿಗೂ ಗಂಭೀರ ಸ್ವರೂಪದ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಘಟನೆ ನಡೆಯುವಾಗ ಮುಖ್ಯಮಂತ್ರಿಯವರ ಕಾರಿನಲ್ಲಿದ್ದರು ಎಂದು ವರದಿಯಾಗಿದೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಶಿವರಾಮ್ ಹೆಬ್ಬಾರ್ ಇದ್ದರು. ವಿಮಾನ ನಿಲ್ದಾಣದಿಂದ ಹೊರ ತೆರಳುವಾಗ ಸಿಎಂ ಅವರಿದ್ದ ಕಾರನ್ನು ಹಿಂಬಾಲಿಸುವ ಭರದಲ್ಲಿ ಬೆಂಗಾವಲು ಪಡೆಗೆ ಕಾರು ಡಿಕ್ಕಿಯಾಗಿದೆ. ಘಟನೆ ನಡೆಯುವಾಗ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಮುಖ್ಯಮಂತ್ರಿಯವರ ಕಾರಿನಲ್ಲಿದ್ದರು. ಅಪಘಾತದ ಸಂದರ್ಭದಲ್ಲಿ ಮಾಜಿ ಸಚಿವರ ಕಾರಿನಲ್ಲಿ ಇದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇದನ್ನೂ ಓದಿ: Hubballi: ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು!

Published On - 1:35 pm, Thu, 29 July 21