AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 322 ಜನರಿಗೆ ಕೊರೊನಾ ದೃಢ; 2 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 165 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,56,617 ಕ್ಕೆ ಏರಿಕೆಯಾಗಿದೆ. 12,56,617 ಸೋಂಕಿತರ ಪೈಕಿ 12,35,353 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 322 ಜನರಿಗೆ ಕೊರೊನಾ ದೃಢ; 2 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 01, 2021 | 8:37 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಡಿಸೆಂಬರ್ 1) ಹೊಸದಾಗಿ 322 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,96,470 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,51,654 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,213 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6,574 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 165 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,56,617 ಕ್ಕೆ ಏರಿಕೆಯಾಗಿದೆ. 12,56,617 ಸೋಂಕಿತರ ಪೈಕಿ 12,35,353 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 1 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,338 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 4,925 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 165, ಬೀದರ್ 0, ಚಾಮರಾಜನಗರ 9, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 4, ದಕ್ಷಿಣ ಕನ್ನಡ 13, ದಾವಣಗೆರೆ 0, ಧಾರವಾಡ 10, ಗದಗ 1, ಹಾಸನ 13, ಹಾವೇರಿ 0, ಕಲಬುರಗಿ 1, ಕೊಡಗು 9, ಕೋಲಾರ 2, ಕೊಪ್ಪಳ 0, ಮಂಡ್ಯ 6, ಮೈಸೂರು 47, ರಾಯಚೂರು 1, ರಾಮನಗರ 1, ಶಿವಮೊಗ್ಗ 13, ತುಮಕೂರು 6, ಉಡುಪಿ 10, ಉತ್ತರ ಕನ್ನಡ 3, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಕೊರೊನಾ ಹೊಸ ತಳಿ ಒಮಿಕ್ರಾನ್ ಆತಂಕ ಹಿನ್ನೆಲೆ; ಜಿನೋಮ್ ಸೀಕ್ವೆನ್ಸಿಂಗ್ ಕುರಿತು ಆರೋಗ್ಯ ಇಲಾಖೆ ಸುತ್ತೋಲೆ ಕೊರೊನಾ ಹೊಸ ತಳಿ ಒಮಿಕ್ರಾನ್ ಆತಂಕ ಹಿನ್ನೆಲೆ ಜಿನೋಮ್ ಸೀಕ್ವೆನ್ಸಿಂಗ್ ಕುರಿತು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಕ್ಲಸ್ಟರ್ ಮಟ್ಟದಲ್ಲಿ ಸೋಂಕು ಪತ್ತೆಯಾದ್ರೆ ಸ್ಯಾಂಪಲ್ಸ್ ಕಳಿಸಲಿ. ಜಿನೋಮ್ ಸೀಕ್ವೆನ್ಸಿಂಗ್​ಗೆ ಸ್ಯಾಂಪಲ್ಸ್ ಕಳುಹಿಸಬೇಕು. INSACOG ಪ್ರಮಾಣಿತ ಲ್ಯಾಬ್​ಗಳಿಗೆ ಕಳಿಸುವುದು ಕಡ್ಡಾಯ. ಜಿಲ್ಲಾ ಕೇಂದ್ರಗಳಲ್ಲಿ ಗುರುತಿಸಿರುವ ಲ್ಯಾಬ್​ಗಳಿಗೆ ಕಳುಹಿಸಬೇಕು. 10 INSACOG ಪ್ರಮಾಣಿತ ಲ್ಯಾಬ್​ಗಳಿಗೆ ಕಳುಹಿಸಬೇಕು. INSACOG, NCBS ಪ್ರಮಾಣಿತ ಲ್ಯಾಬ್​ಗಳಿಗೆ ಕಳುಹಿಸಬೇಕು. ಯಾವುದೇ ಖಾಸಗಿ ಪ್ರಯೋಗಾಲಯಗಳಿಗೆ ಕಳಿಸುವಂತಿಲ್ಲ. INSACOG ಪ್ರಮಾಣಿತವಲ್ಲದ ಲ್ಯಾಬ್​ಗಳಿಗೆ ಕಳಿಸುವಂತಿಲ್ಲ. ಹೊಸ ತಳಿ ಪತ್ತೆ ಹಚ್ಚುವ ದೃಷ್ಟಿಯಿಂದ ಜಿನೋಮ್ ಸೀಕ್ವೆನ್ಸಿಂಗ್​​ಗೆ ಸ್ಯಾಂಪಲ್ಸ್ ಕಳಿಸುವುದು ಕಡ್ಡಾಯ ಎಂದು ಹೇಳಲಾಗಿದೆ.

ಇದನ್ನೂ ಓದಿ: ಧಾರವಾಡ: ಎಸ್​ಡಿಎಮ್​ ವಿದ್ಯಾರ್ಥಿನಿಯಿಂದ ಸಹೋದರನಿಗೆ ಹರಡಿದ ಕೊರೊನಾ ಸೋಂಕು; ಶಾಲೆಗೆ ರಜೆ ಘೋಷಣೆ

ಇದನ್ನೂ ಓದಿ: ಅರಿವಿಗೆ ಬರುವ ಮೊದಲೇ ಹರಡಿದ ಒಮಿಕ್ರಾನ್: 20 ದೇಶಗಳಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ, ಕಾದಿದೆಯೇ ಸಂಕಷ್ಟ

Published On - 8:31 pm, Wed, 1 December 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?