ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಡಿಸೆಂಬರ್ 1) ಹೊಸದಾಗಿ 322 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,96,470 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,51,654 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,213 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6,574 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 165 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,56,617 ಕ್ಕೆ ಏರಿಕೆಯಾಗಿದೆ. 12,56,617 ಸೋಂಕಿತರ ಪೈಕಿ 12,35,353 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 1 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,338 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 4,925 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 165, ಬೀದರ್ 0, ಚಾಮರಾಜನಗರ 9, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 4, ದಕ್ಷಿಣ ಕನ್ನಡ 13, ದಾವಣಗೆರೆ 0, ಧಾರವಾಡ 10, ಗದಗ 1, ಹಾಸನ 13, ಹಾವೇರಿ 0, ಕಲಬುರಗಿ 1, ಕೊಡಗು 9, ಕೋಲಾರ 2, ಕೊಪ್ಪಳ 0, ಮಂಡ್ಯ 6, ಮೈಸೂರು 47, ರಾಯಚೂರು 1, ರಾಮನಗರ 1, ಶಿವಮೊಗ್ಗ 13, ತುಮಕೂರು 6, ಉಡುಪಿ 10, ಉತ್ತರ ಕನ್ನಡ 3, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 01/12/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/8pBlDPjw14
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/9iLIetmEvA
— K’taka Health Dept (@DHFWKA) December 1, 2021
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.
ಕೊರೊನಾ ಹೊಸ ತಳಿ ಒಮಿಕ್ರಾನ್ ಆತಂಕ ಹಿನ್ನೆಲೆ; ಜಿನೋಮ್ ಸೀಕ್ವೆನ್ಸಿಂಗ್ ಕುರಿತು ಆರೋಗ್ಯ ಇಲಾಖೆ ಸುತ್ತೋಲೆ
ಕೊರೊನಾ ಹೊಸ ತಳಿ ಒಮಿಕ್ರಾನ್ ಆತಂಕ ಹಿನ್ನೆಲೆ ಜಿನೋಮ್ ಸೀಕ್ವೆನ್ಸಿಂಗ್ ಕುರಿತು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಕ್ಲಸ್ಟರ್ ಮಟ್ಟದಲ್ಲಿ ಸೋಂಕು ಪತ್ತೆಯಾದ್ರೆ ಸ್ಯಾಂಪಲ್ಸ್ ಕಳಿಸಲಿ. ಜಿನೋಮ್ ಸೀಕ್ವೆನ್ಸಿಂಗ್ಗೆ ಸ್ಯಾಂಪಲ್ಸ್ ಕಳುಹಿಸಬೇಕು. INSACOG ಪ್ರಮಾಣಿತ ಲ್ಯಾಬ್ಗಳಿಗೆ ಕಳಿಸುವುದು ಕಡ್ಡಾಯ. ಜಿಲ್ಲಾ ಕೇಂದ್ರಗಳಲ್ಲಿ ಗುರುತಿಸಿರುವ ಲ್ಯಾಬ್ಗಳಿಗೆ ಕಳುಹಿಸಬೇಕು. 10 INSACOG ಪ್ರಮಾಣಿತ ಲ್ಯಾಬ್ಗಳಿಗೆ ಕಳುಹಿಸಬೇಕು. INSACOG, NCBS ಪ್ರಮಾಣಿತ ಲ್ಯಾಬ್ಗಳಿಗೆ ಕಳುಹಿಸಬೇಕು. ಯಾವುದೇ ಖಾಸಗಿ ಪ್ರಯೋಗಾಲಯಗಳಿಗೆ ಕಳಿಸುವಂತಿಲ್ಲ. INSACOG ಪ್ರಮಾಣಿತವಲ್ಲದ ಲ್ಯಾಬ್ಗಳಿಗೆ ಕಳಿಸುವಂತಿಲ್ಲ. ಹೊಸ ತಳಿ ಪತ್ತೆ ಹಚ್ಚುವ ದೃಷ್ಟಿಯಿಂದ ಜಿನೋಮ್ ಸೀಕ್ವೆನ್ಸಿಂಗ್ಗೆ ಸ್ಯಾಂಪಲ್ಸ್ ಕಳಿಸುವುದು ಕಡ್ಡಾಯ ಎಂದು ಹೇಳಲಾಗಿದೆ.
ಇದನ್ನೂ ಓದಿ: ಧಾರವಾಡ: ಎಸ್ಡಿಎಮ್ ವಿದ್ಯಾರ್ಥಿನಿಯಿಂದ ಸಹೋದರನಿಗೆ ಹರಡಿದ ಕೊರೊನಾ ಸೋಂಕು; ಶಾಲೆಗೆ ರಜೆ ಘೋಷಣೆ
ಇದನ್ನೂ ಓದಿ: ಅರಿವಿಗೆ ಬರುವ ಮೊದಲೇ ಹರಡಿದ ಒಮಿಕ್ರಾನ್: 20 ದೇಶಗಳಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ, ಕಾದಿದೆಯೇ ಸಂಕಷ್ಟ
Published On - 8:31 pm, Wed, 1 December 21