Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 320 ಜನರಿಗೆ ಕೊರೊನಾ ದೃಢ; 2 ಮಂದಿ ಸಾವು

| Updated By: ganapathi bhat

Updated on: Dec 11, 2021 | 8:31 PM

ಬೆಂಗಳೂರಿನಲ್ಲಿ ಇಂದು ಒಂದೇ ದಿನ 190 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,58,699 ಕ್ಕೆ ಏರಿಕೆಯಾಗಿದೆ. 12,58,699 ಸೋಂಕಿತರ ಪೈಕಿ 12,36,789 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 320 ಜನರಿಗೆ ಕೊರೊನಾ ದೃಢ; 2 ಮಂದಿ ಸಾವು
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಡಿಸೆಂಬರ್ 11) ಹೊಸದಾಗಿ 320 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,00,105 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,54,513 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,257 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,306 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 190 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,58,699 ಕ್ಕೆ ಏರಿಕೆಯಾಗಿದೆ. 12,58,699 ಸೋಂಕಿತರ ಪೈಕಿ 12,36,789 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,362 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,547 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 190, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 10, ಚಿತ್ರದುರ್ಗ 0, ದಕ್ಷಿಣ ಕನ್ನಡ 20, ದಾವಣಗೆರೆ 1, ಧಾರವಾಡ 5, ಗದಗ 0, ಹಾಸನ 17, ಹಾವೇರಿ 0, ಕಲಬುರಗಿ 1, ಕೊಡಗು 21, ಕೋಲಾರ 0, ಕೊಪ್ಪಳ 0, ಮಂಡ್ಯ 4, ಮೈಸೂರು 14, ರಾಯಚೂರು 0, ರಾಮನಗರ 2, ಶಿವಮೊಗ್ಗ 3, ತುಮಕೂರು 9, ಉಡುಪಿ 2, ಉತ್ತರ ಕನ್ನಡ 4, ವಿಜಯಪುರ 3, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಕರ್ನಾಟಕ ಲಸಿಕೆ ನೀಡಿಕೆಯಲ್ಲಿ ಮತ್ತೊಂದು ಮೈಲಿಗಲ್ಲು
ಕರ್ನಾಟಕ ರಾಜ್ಯದಲ್ಲಿ ಲಸಿಕೆ ನೀಡಿಕೆಯಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಲಾಗಿದೆ. ರಾಜ್ಯದಲ್ಲಿ ಈವರೆಗೆ 8 ಕೋಟಿ ಡೋಸ್‌ ಲಸಿಕೆ ನೀಡಿಕೆ ಆಗಿದೆ. ಈ ಬಗ್ಗೆ, ಆರೋಗ್ಯ ಇಲಾಖೆಯ ಸಚಿವ ಡಾ.ಕೆ. ಸುಧಾಕರ್‌ ಟ್ವೀಟ್‌ ಮಾಡಿದ್ದಾರೆ. ಮೊದಲ ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿ ರಾಜ್ಯವೇ ಪ್ರಥಮ ಆಗಿದೆ. 2ನೇ ಡೋಸ್ ಲಸಿಕೆ ನೀಡಿಕೆಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ ಇದೆ. ಇದಕ್ಕಾಗಿ ಜಿಲ್ಲಾಡಳಿತಗಳು, ಆರೋಗ್ಯ ಇಲಾಖೆ ಸಿಬ್ಬಂದಿಗೆ ಧನ್ಯವಾದ ಎಂದು ಡಾ.ಕೆ.ಸುಧಾಕರ್‌ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನಾ ಸ್ಫೋಟ: ಚಿಕ್ಕಮಗಳೂರು ಶಾಲೆ ಸೀಲ್ ಡೌನ್, ಈ ಕಡೆ ಬೆಂಗಳೂರು ಕಾನ್ವೆಂಟ್​ ಮಕ್ಕಳು 4 ದಿನ ಹೈದರಾಬಾದ್ ಪ್ರವಾಸಕ್ಕೆ!

ಇದನ್ನೂ ಓದಿ: ಕೊವಿಡ್ ಲಸಿಕೆ ಅರ್ಹ ಜನಸಂಖ್ಯೆಯ ಶೇ 86 ಮಂದಿಗೆ 1ನೇ ಡೋಸ್ ನೀಡಲಾಗಿದೆ: ಕೇಂದ್ರ ಆರೋಗ್ಯ ಸಚಿವ