AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 330 ಜನರಿಗೆ ಕೊರೊನಾ ದೃಢ; 4 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 205 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,58,904 ಕ್ಕೆ ಏರಿಕೆಯಾಗಿದೆ. 12,58,904 ಸೋಂಕಿತರ ಪೈಕಿ 12,36,936 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 330 ಜನರಿಗೆ ಕೊರೊನಾ ದೃಢ; 4 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 12, 2021 | 8:31 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಡಿಸೆಂಬರ್ 12) ಹೊಸದಾಗಿ 330 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,00,435 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,54,817 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,261 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,328 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 205 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,58,904 ಕ್ಕೆ ಏರಿಕೆಯಾಗಿದೆ. 12,58,904 ಸೋಂಕಿತರ ಪೈಕಿ 12,36,936 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,365 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,602 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 7, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 205, ಬೀದರ್ 1, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 2, ಚಿತ್ರದುರ್ಗ 2, ದಕ್ಷಿಣ ಕನ್ನಡ 15, ದಾವಣಗೆರೆ 4, ಧಾರವಾಡ 3, ಗದಗ 0, ಹಾಸನ 5, ಹಾವೇರಿ 1, ಕಲಬುರಗಿ 1, ಕೊಡಗು 40, ಕೋಲಾರ 3, ಕೊಪ್ಪಳ 0, ಮಂಡ್ಯ 5, ಮೈಸೂರು 13, ರಾಯಚೂರು 0, ರಾಮನಗರ 0, ಶಿವಮೊಗ್ಗ 11, ತುಮಕೂರು 5, ಉಡುಪಿ 1, ಉತ್ತರ ಕನ್ನಡ 2, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಕೊವಿಡ್​ನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಇದನ್ನೂ ಓದಿ: ದಾವಣಗೆರೆ ನವೋದಯ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ! ಶಾಲೆ ಸೀಲ್ ಡೌನ್

ಇದನ್ನೂ ಓದಿ: ಕೇರಳದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆ, ದೇಶದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆ

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!