Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 238 ಜನರಿಗೆ ಕೊರೊನಾ ದೃಢ; 3 ಮಂದಿ ಸಾವು

| Updated By: ganapathi bhat

Updated on: Dec 17, 2021 | 8:19 PM

ಬೆಂಗಳೂರಿನಲ್ಲಿ ಇಂದು ಒಂದೇ ದಿನ 153 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,59,738 ಕ್ಕೆ ಏರಿಕೆಯಾಗಿದೆ. 12,59,738 ಸೋಂಕಿತರ ಪೈಕಿ 12,37,765 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 238 ಜನರಿಗೆ ಕೊರೊನಾ ದೃಢ; 3 ಮಂದಿ ಸಾವು
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಡಿಸೆಂಬರ್ 17) ಹೊಸದಾಗಿ 238 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,01,792 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,56,405 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,282 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,076 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 153 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,59,738 ಕ್ಕೆ ಏರಿಕೆಯಾಗಿದೆ. 12,59,738 ಸೋಂಕಿತರ ಪೈಕಿ 12,37,765 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,376 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,596 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 153, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 2, ಚಿತ್ರದುರ್ಗ 0, ದಕ್ಷಿಣ ಕನ್ನಡ 19, ದಾವಣಗೆರೆ 1, ಧಾರವಾಡ 3, ಗದಗ 0, ಹಾಸನ 1, ಹಾವೇರಿ 0, ಕಲಬುರಗಿ 0, ಕೊಡಗು 13, ಕೋಲಾರ 2, ಕೊಪ್ಪಳ 1, ಮಂಡ್ಯ 3, ಮೈಸೂರು 15, ರಾಯಚೂರು 0, ರಾಮನಗರ 0, ಶಿವಮೊಗ್ಗ 4, ತುಮಕೂರು 6, ಉಡುಪಿ 5, ಉತ್ತರ ಕನ್ನಡ 4, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಕೊವಿಡ್​ನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಕರ್ನಾಟಕ ರಾಜ್ಯದಲ್ಲಿ ರೂಪಾಂತರಿ ಒಮಿಕ್ರಾನ್ ಆತಂಕ ಇಲ್ಲ: ಸಚಿವ ಸುಧಾಕರ್
ಕರ್ನಾಟಕ ರಾಜ್ಯದಲ್ಲಿ ರೂಪಾಂತರಿ ಒಮಿಕ್ರಾನ್ ಆತಂಕ ಇಲ್ಲ ಎಂದು ಬೆಳಗಾವಿಯಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ ನೀಡಿದ್ದಾರೆ. ಮುಂಜಾಗ್ರತಾ ಕ್ರಮಗಳ ಬಗ್ಗೆ ಸಿಎಂ ಜತೆ ಚರ್ಚೆ ಮಾಡುತ್ತೇವೆ. ತಾಂತ್ರಿಕ ಸಲಹಾ ಸಮಿತಿ ಜೊತೆಯೂ ಸಭೆ ಮಾಡುತ್ತೇವೆ. ಯಾವ ಕ್ರಮ ತೆಗೆದುಕೊಳ್ಳಬೇಕೆಂದು ಸಲಹೆ ಪಡೆಯುತ್ತೇವೆ. ಕಡ್ಡಾಯವಾಗಿ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕಿದೆ. ರಾಜ್ಯದ ಜನರು ಎಚ್ಚರಿಕೆಯಿಂದಿರಬೇಕು ಎಂದು ಸುಧಾಕರ್ ಹೇಳಿದ್ದಾರೆ.

ದೇಶದಲ್ಲಿ ನೂರರ ಗಡಿ ದಾಟಿದ ಒಮಿಕ್ರಾನ್​​ ಪ್ರಕರಣಗಳು
ದೇಶದಲ್ಲಿ ಒಮಿಕ್ರಾನ್​​ ಪ್ರಕರಣಗಳ ಸಂಖ್ಯೆ ನೂರರ ಗಡಿ ದಾಟಿದೆ. ದೇಶದ 11 ರಾಜ್ಯಗಳಲ್ಲಿ 101 ಒಮಿಕ್ರಾನ್​ ಕೇಸ್​ಗಳು ಪತ್ತೆ ಆಗಿವೆ. ಮಹಾರಾಷ್ಟ್ರ 32, ದೆಹಲಿ 22, ರಾಜಸ್ಥಾನದಲ್ಲಿ 17 ಕೇಸ್ ಪತ್ತೆ ಆಗಿದೆ. ದೇಶದಲ್ಲಿ ಒಮಿಕ್ರಾನ್​ ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆ ಆಗಿದ್ದು ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Coronavirus: ಲಂಡನ್, ದುಬೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 6 ಜನರಿಗೆ ಕೊರೊನಾ ಸೋಂಕು

ಇದನ್ನೂ ಓದಿ: ಕೊರೊನಾ ಟೆಸ್ಟ್ ಬಳಿಕ ಬಂದ 25 ಕೋಟಿ ಕೊವಿಡ್ ಮೆಸೇಜ್‌ಗೆ ₹2.4 ಕೋಟಿ ಗುತ್ತಿಗೆ, ಸರ್ಕಾರದ ನಡೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ

Published On - 7:42 pm, Fri, 17 December 21