Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 335 ಜನರಿಗೆ ಕೊರೊನಾ ದೃಢ; 5 ಮಂದಿ ಸಾವು
ಬೆಂಗಳೂರಿನಲ್ಲಿ ಇಂದು ಒಂದೇ ದಿನ 225 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,59,963 ಕ್ಕೆ ಏರಿಕೆಯಾಗಿದೆ. 12,59,963 ಸೋಂಕಿತರ ಪೈಕಿ 12,37,945 ಜನರು ಗುಣಮುಖರಾಗಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಡಿಸೆಂಬರ್ 18) ಹೊಸದಾಗಿ 335 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,02,127 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,56,691 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,287 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,120 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 225 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,59,963 ಕ್ಕೆ ಏರಿಕೆಯಾಗಿದೆ. 12,59,963 ಸೋಂಕಿತರ ಪೈಕಿ 12,37,945 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 1 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,377 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,640 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 225, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 6, ಚಿತ್ರದುರ್ಗ 0, ದಕ್ಷಿಣ ಕನ್ನಡ 19, ದಾವಣಗೆರೆ 0, ಧಾರವಾಡ 5, ಗದಗ 0, ಹಾಸನ 8, ಹಾವೇರಿ 0, ಕಲಬುರಗಿ 1, ಕೊಡಗು 25, ಕೋಲಾರ 5, ಕೊಪ್ಪಳ 0, ಮಂಡ್ಯ 2, ಮೈಸೂರು 14, ರಾಯಚೂರು 1, ರಾಮನಗರ 2, ಶಿವಮೊಗ್ಗ 2, ತುಮಕೂರು 2, ಉಡುಪಿ 6, ಉತ್ತರ ಕನ್ನಡ 9, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 18/12/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/FHl5tyHIMC @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/2sASoGk7ID
— K’taka Health Dept (@DHFWKA) December 18, 2021
ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ, ದಕ್ಷಿಣ ಕನ್ನಡ, ಧಾರವಾಡ ಹಾಗೂ ಮೈಸೂರು ಜಿಲ್ಲೆಯಲ್ಲಿ ಕೊವಿಡ್ನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.
ಇದನ್ನೂ ಓದಿ: Omicron: ಭಾರತದಲ್ಲಿ ಒಮಿಕ್ರಾನ್ ಸೋಂಕು ಹೆಚ್ಚಾಗುವ ಸಾಧ್ಯತೆ ಕಡಿಮೆ; ತಜ್ಞರ ಅಭಿಮತ
ಇದನ್ನೂ ಓದಿ: Omicron: ಕರ್ನಾಟಕದಲ್ಲಿ ಮತ್ತೆ 6 ಒಮಿಕ್ರಾನ್ ಪ್ರಕರಣ ಪತ್ತೆ; ದಕ್ಷಿಣ ಕನ್ನಡದಲ್ಲೇ ಐವರಿಗೆ ಒಮಿಕ್ರಾನ್ ದೃಢ