
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಡಿಸೆಂಬರ್ 19) ಹೊಸದಾಗಿ 300 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,02,427 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,56,970 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 1 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,288 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,140 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 168 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,60,131 ಕ್ಕೆ ಏರಿಕೆಯಾಗಿದೆ. 12,60,131 ಸೋಂಕಿತರ ಪೈಕಿ 12,38,093 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,377 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,660 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 168, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 9, ಚಿತ್ರದುರ್ಗ 4, ದಕ್ಷಿಣ ಕನ್ನಡ 37, ದಾವಣಗೆರೆ 0, ಧಾರವಾಡ 2, ಗದಗ 0, ಹಾಸನ 11, ಹಾವೇರಿ 0, ಕಲಬುರಗಿ 0, ಕೊಡಗು 10, ಕೋಲಾರ 9, ಕೊಪ್ಪಳ 0, ಮಂಡ್ಯ 2, ಮೈಸೂರು 13, ರಾಯಚೂರು 4, ರಾಮನಗರ 0, ಶಿವಮೊಗ್ಗ 2, ತುಮಕೂರು 7, ಉಡುಪಿ 2, ಉತ್ತರ ಕನ್ನಡ 8, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಉಡುಪಿ ಜಿಲ್ಲೆಯಲ್ಲಿ ಕೊವಿಡ್ನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.
ಇದನ್ನೂ ಓದಿ: ವೆಸ್ಟ್ ಇಂಡೀಸ್ ನಂತರ ಐರ್ಲೆಂಡ್ ಕ್ರಿಕೆಟಿಗರಿಗೂ ವಕ್ಕರಿಸಿದ ಕೊರೊನಾ; ನಾಲ್ವರು ಆಟಗಾರರಿಗೆ ಕೊರೊನಾ ಪಾಸಿಟಿವ್
ಇದನ್ನೂ ಓದಿ: ಅಮಿತ್ ಶಾಗೆ 33 ವರ್ಷ, ಓಂ ಬಿರ್ಲಾಗೆ 26 ವರ್ಷ-ವೈರಲ್ ಆದ ಕೊವಿಡ್ 19 ಸರ್ಟಿಫಿಕೇಟ್ಗಳು, ತನಿಖೆಗೆ ಆದೇಶ