Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 348 ಜನರಿಗೆ ಕೊರೊನಾ ದೃಢ; 3 ಮಂದಿ ಸಾವು

| Updated By: ganapathi bhat

Updated on: Dec 26, 2021 | 8:57 PM

ಬೆಂಗಳೂರಿನಲ್ಲಿ ಇಂದು ಒಂದೇ ದಿನ 248 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,61,556 ಕ್ಕೆ ಏರಿಕೆಯಾಗಿದೆ. 12,61,556 ಸೋಂಕಿತರ ಪೈಕಿ 12,39,122 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 348 ಜನರಿಗೆ ಕೊರೊನಾ ದೃಢ; 3 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಡಿಸೆಂಬರ್ 26) ಹೊಸದಾಗಿ 348 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,04,587 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,58,828 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,312 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,418 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 248 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,61,556 ಕ್ಕೆ ಏರಿಕೆಯಾಗಿದೆ. 12,61,556 ಸೋಂಕಿತರ ಪೈಕಿ 12,39,122 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,385 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,048 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 8, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 248, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 2, ಚಿತ್ರದುರ್ಗ 2, ದಕ್ಷಿಣ ಕನ್ನಡ 8, ದಾವಣಗೆರೆ 2, ಧಾರವಾಡ 6, ಗದಗ 0, ಹಾಸನ 8, ಹಾವೇರಿ 0, ಕಲಬುರಗಿ 0, ಕೊಡಗು 18, ಕೋಲಾರ 6, ಕೊಪ್ಪಳ 0, ಮಂಡ್ಯ 5, ಮೈಸೂರು 6, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 11, ಉಡುಪಿ 3, ಉತ್ತರ ಕನ್ನಡ 11, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಕೊವಿಡ್​ನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಇದನ್ನೂ ಓದಿ: 52 ವಿದ್ಯಾರ್ಥಿಗಳಿಗೆ ಕೊರೊನಾವೈರಸ್ ಸೋಂಕು; ಮಹಾರಾಷ್ಟ್ರದ ಶಾಲೆ ಸೀಲ್​​ಡೌನ್

ಇದನ್ನೂ ಓದಿ: ಕೊವಿಡ್​ 19 ಲಸಿಕೆ 2ನೇ ಡೋಸ್​, ಬೂಸ್ಟರ್​ ಡೋಸ್​ ನಡುವಿನ ಅಂತರ 9-12 ತಿಂಗಳುಗಳು; ಆರೋಗ್ಯ ತಜ್ಞರ ಹೇಳಿಕೆ