Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 566 ಜನರಿಗೆ ಕೊರೊನಾ ದೃಢ; 6 ಮಂದಿ ಸಾವು
ಬೆಂಗಳೂರಿನಲ್ಲಿ ಇಂದು ಒಂದೇ ದಿನ 400 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,62,397 ಕ್ಕೆ ಏರಿಕೆಯಾಗಿದೆ. 12,62,397 ಸೋಂಕಿತರ ಪೈಕಿ 12,39,616 ಜನರು ಗುಣಮುಖರಾಗಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಡಿಸೆಂಬರ್ 29) ಹೊಸದಾಗಿ 566 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,05,798 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,59,674 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,324 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,771 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 400 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,62,397 ಕ್ಕೆ ಏರಿಕೆಯಾಗಿದೆ. 12,62,397 ಸೋಂಕಿತರ ಪೈಕಿ 12,39,616 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,392 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,388 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 400, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 1, ಚಿತ್ರದುರ್ಗ 2, ದಕ್ಷಿಣ ಕನ್ನಡ 33, ದಾವಣಗೆರೆ 2, ಧಾರವಾಡ 7, ಗದಗ 0, ಹಾಸನ 31, ಹಾವೇರಿ 0, ಕಲಬುರಗಿ 3, ಕೊಡಗು 14, ಕೋಲಾರ 14, ಕೊಪ್ಪಳ 0, ಮಂಡ್ಯ 9, ಮೈಸೂರು 9, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 8, ಉಡುಪಿ 17, ಉತ್ತರ ಕನ್ನಡ 2, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 29/12/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/3P3NH2Bqtn @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/qCBOKptkZo
— K’taka Health Dept (@DHFWKA) December 29, 2021
ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಕೊವಿಡ್ನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.
ಇದನ್ನೂ ಓದಿ: Covid19: ಬೆಂಗಳೂರು ಅಪಾರ್ಟ್ಮೆಂಟ್ನಲ್ಲಿ 27, ಹಾಸನ ಕಾಫಿತೋಟದಲ್ಲಿ 23 ಮಂದಿಗೆ ಕೊರೊನಾ ದೃಢ
ಇದನ್ನೂ ಓದಿ: ಹೊಸ ವರ್ಷಕ್ಕೆ ಗೋವಾದಲ್ಲಿ ಪಾರ್ಟಿ ಮಾಡೋ ಪ್ಲಾನ್ ಇದೆಯಾ?; ಹೊಸ ಕೊವಿಡ್ ನಿಯಮಗಳು ಹೀಗಿವೆ