AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 301 ಜನರಿಗೆ ಕೊರೊನಾ ದೃಢ; 7 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 162 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,57,660 ಕ್ಕೆ ಏರಿಕೆಯಾಗಿದೆ. 12,57,660 ಸೋಂಕಿತರ ಪೈಕಿ 12,36,132 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 301 ಜನರಿಗೆ ಕೊರೊನಾ ದೃಢ; 7 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 06, 2021 | 11:03 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಡಿಸೆಂಬರ್ 6) ಹೊಸದಾಗಿ 301 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,98,400 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,53,067 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,237 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,067 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 162 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,57,660 ಕ್ಕೆ ಏರಿಕೆಯಾಗಿದೆ. 12,57,660 ಸೋಂಕಿತರ ಪೈಕಿ 12,36,132 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,348 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,179 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 162, ಬೀದರ್ 0, ಚಾಮರಾಜನಗರ 3, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 40, ಚಿತ್ರದುರ್ಗ 1, ದಕ್ಷಿಣ ಕನ್ನಡ 2, ದಾವಣಗೆರೆ 3, ಧಾರವಾಡ 11, ಗದಗ 0, ಹಾಸನ 12, ಹಾವೇರಿ 1, ಕಲಬುರಗಿ 0, ಕೊಡಗು 5, ಕೋಲಾರ 1, ಕೊಪ್ಪಳ 0, ಮಂಡ್ಯ 3, ಮೈಸೂರು 16, ರಾಯಚೂರು 0, ರಾಮನಗರ 0, ಶಿವಮೊಗ್ಗ 4, ತುಮಕೂರು 8, ಉಡುಪಿ 2, ಉತ್ತರ ಕನ್ನಡ 9, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಮಂದಿ ಕೊವಿಡ್19 ಸೋಂಕಿನಿಂದ ಮೃತಪಟ್ಟಿದ್ದಾರೆ. ಕೊಡಗು ಹಾಗೂ ತುಮಕೂರು ಜಿಲ್ಲೆಯಲ್ಲಿ ಕೊವಿಡ್​ನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ರಾಜ್ಯದಲ್ಲಿ 130 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ ಕರ್ನಾಟಕ ರಾಜ್ಯದಲ್ಲಿ 130 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢವಾಗಿದೆ. 1 ರಿಂದ 10ನೇ ತರಗತಿವರೆಗಿನ 130 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.

ನವೋದಯ ವಸತಿ ಶಾಲೆ ಮಕ್ಕಳಿಗೆ ಕೊರೊನಾ ಪ್ರಕರಣ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿದ್ದಾರೆ. ಒಮಿಕ್ರಾನ್​ ರೀತಿಯ ಲಕ್ಷಣ ಇದುವರೆಗೂ ಕಂಡುಬಂದಿಲ್ಲ. ಎಲ್ಲಾ 418 ಸ್ಯಾಂಪಲ್ಸ್​ ನಿಮ್ಹಾನ್ಸ್​ಗೆ ರವಾನಿಸಲಾಗುವುದು. ವಸತಿ ಶಾಲೆಯಲ್ಲಿ ದಿನದ 24 ಗಂಟೆಯೂ ವೈದ್ಯರ ನಿಗಾ ಇರಲಿದೆ. ಎಲ್ಲ ಸೋಂಕಿತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶಾಲೆಯಲ್ಲಿ ದಿನಕ್ಕೆ 2 ಬಾರಿ ಸ್ಯಾನಿಟೈಸಿಂಗ್ ಮಾಡಲಾಗುತ್ತಿದೆ. ಮುನ್ನೆಚ್ಚರಿಕೆಯಾಗಿ ಶಾಲೆ ಬಳಿ 2 ಆಂಬುಲೆನ್ಸ್ ಸಿದ್ಧವಾಗಿದೆ. ಶಿಫ್ಟ್​ಗೆ 6 ಜನರಂತೆ 3 ಶಿಫ್ಟ್​ನಲ್ಲಿ ಆರೋಗ್ಯ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ರಮೇಶ್ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸಿಗೋಡು ಗ್ರಾಮದ ನವೋದಯ ಶಾಲೆಯಲ್ಲಿ ಕೊರೊನಾ ಸ್ಫೋಟ ಹಿನ್ನೆಲೆ ನವೋದಯ ವಸತಿ ಶಾಲೆಗೆ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ ಭೇಟಿ ನೀಡಿದ್ದಾರೆ. ಮಕ್ಕಳ ಯೋಗಕ್ಷೇಮ ವಿಚಾರಿಸಿದ್ದಾರೆ. ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದ್ದಾರೆ. 93 ವಿದ್ಯಾರ್ಥಿಗಳು ಸೇರಿದಂತೆ 107 ಜನರಿಗೆ ಕೊರೊನಾ ದೃಢವಾಗಿದೆ.

ಇದನ್ನೂ ಓದಿ: ಶಾಲೆಗಳಿಗೆ ಪ್ರತ್ಯೇಕ ಕೊರೊನಾ ಮಾರ್ಗಸೂಚಿ ಪ್ರಕಟಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟದಿಂದ ಮನವಿ

ಇದನ್ನೂ ಓದಿ: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ; ಯಾವ ಯಾವ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಎಷ್ಟಿದೆ?

Published On - 9:46 pm, Mon, 6 December 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!