Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 299 ಜನರಿಗೆ ಕೊರೊನಾ ದೃಢ; 6 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 215 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,57,875 ಕ್ಕೆ ಏರಿಕೆಯಾಗಿದೆ. 12,57,875 ಸೋಂಕಿತರ ಪೈಕಿ 12,36,229 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 299 ಜನರಿಗೆ ಕೊರೊನಾ ದೃಢ; 6 ಮಂದಿ ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Dec 07, 2021 | 8:10 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಡಿಸೆಂಬರ್ 7) ಹೊಸದಾಗಿ 299 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,98,699 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,53,327 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,243 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,100 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 215 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,57,875 ಕ್ಕೆ ಏರಿಕೆಯಾಗಿದೆ. 12,57,875 ಸೋಂಕಿತರ ಪೈಕಿ 12,36,229 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,351 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,294 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 215, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 4, ಚಿತ್ರದುರ್ಗ 0, ದಕ್ಷಿಣ ಕನ್ನಡ 14, ದಾವಣಗೆರೆ 0, ಧಾರವಾಡ 6, ಗದಗ 0, ಹಾಸನ 6, ಹಾವೇರಿ 0, ಕಲಬುರಗಿ 1, ಕೊಡಗು 12, ಕೋಲಾರ 2, ಕೊಪ್ಪಳ 0, ಮಂಡ್ಯ 2, ಮೈಸೂರು 11, ರಾಯಚೂರು 0, ರಾಮನಗರ 0, ಶಿವಮೊಗ್ಗ 4, ತುಮಕೂರು 4, ಉಡುಪಿ 3, ಉತ್ತರ ಕನ್ನಡ 5, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ, ಧಾರವಾಡ ಹಾಗೂ ಮೈಸೂರು ಜಿಲ್ಲೆಯಲ್ಲಿ ಕೊವಿಡ್​ನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಚಿಕ್ಕಮಗಳೂರು: ನವೋದಯ ವಿದ್ಯಾಲಯದಲ್ಲಿ ಮತ್ತೆ 7 ಮಂದಿಗೆ ಕೊರೊನಾ ಶಿಕ್ಷಕರ ಕುಟುಂಬದವರಲ್ಲಿ ಕೊರೊನಾ ಸೋಂಕು ಪತ್ತೆ ಆಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೀಗೋಡು ಗ್ರಾಮದಲ್ಲಿರುವ ನವೋದಯ ವಿದ್ಯಾಲಯ ಶಾಲೆಯಲ್ಲಿ ಸೋಂಕಿತರ ಸಂಖ್ಯೆ 110 ಕ್ಕೆ ಏರಿಕೆ ಆಗಿದೆ. 93 ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕರು, ಸಿಬ್ಬಂದಿಗೆ ಸೋಂಕು ಕಂಡುಬಂದಿದೆ.

ಇದನ್ನೂ ಓದಿ: ಮುಂದಿನ ಕೊರೊನಾ ರೂಪಾಂತರಿ ವೈರಸ್ ಹೆಚ್ಚು ಮಾರಕ, ಸಾಂಕ್ರಾಮಿಕವಾಗಿರಲಿದೆ; ಆಕ್ಸ್​ಫರ್ಡ್​ ವಿಜ್ಞಾನಿ ಎಚ್ಚರಿಕೆ

ಇದನ್ನೂ ಓದಿ: Omicron: ಕರ್ನಾಟಕದಲ್ಲಿ 130 ವಿದ್ಯಾರ್ಥಿಗಳಿಗೆ ಕೊವಿಡ್ ಸೋಂಕು; ಮತ್ತೆ ಶಾಲೆ ಮುಚ್ಚುವ ಸುಳಿವು ನೀಡಿದ ಸರ್ಕಾರ

Published On - 7:38 pm, Tue, 7 December 21

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?