ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಫೆಬ್ರವರಿ 17) ಹೊಸದಾಗಿ 1,579 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,33,115 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 38,73,580 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 23 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,738 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 19,761 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 769 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,73,991 ಕ್ಕೆ ಏರಿಕೆಯಾಗಿದೆ. 17,73,991 ಸೋಂಕಿತರ ಪೈಕಿ 17,48,371 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,791 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,828 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 12, ಬಳ್ಳಾರಿ 55, ಬೆಳಗಾವಿ 73, ಬೆಂಗಳೂರು ಗ್ರಾಮಾಂತರ 9, ಬೆಂಗಳೂರು ನಗರ 7,69, ಬೀದರ್ 7, ಚಾಮರಾಜನಗರ 29, ಚಿಕ್ಕಬಳ್ಳಾಪುರ 16, ಚಿಕ್ಕಮಗಳೂರು 22, ಚಿತ್ರದುರ್ಗ 39, ದಕ್ಷಿಣ ಕನ್ನಡ 43, ದಾವಣಗೆರೆ 4, ಧಾರವಾಡ 37, ಗದಗ 6, ಹಾಸನ 43, ಹಾವೇರಿ 7, ಕಲಬುರಗಿ 10, ಕೊಡಗು 45, ಕೋಲಾರ 20, ಕೊಪ್ಪಳ 9, ಮಂಡ್ಯ 25, ಮೈಸೂರು 83, ರಾಯಚೂರು 3, ರಾಮನಗರ 1, ಶಿವಮೊಗ್ಗ 39, ತುಮಕೂರು 84, ಉಡುಪಿ 35, ಉತ್ತರ ಕನ್ನಡ 33, ವಿಜಯಪುರ 10, ಯಾದಗಿರಿ ಜಿಲ್ಲೆಯಲ್ಲಿ 11 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 17/02/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/BQEvxJNGJZ@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/kBoDfUvMoe
— K’taka Health Dept (@DHFWKA) February 17, 2022
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಬಾಗಲಕೋಟೆ, ದಕ್ಷಿಣ ಕನ್ನಡ, ಧಾರವಾಡ, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ 2, ಬೆಳಗಾವಿ, ಚಿತ್ರದುರ್ಗ, ಕೊಡಗು, ಕೋಲಾರ, ಉಡುಪಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ 1 ಮಂದಿ ಮೃತಪಟ್ಟಿದ್ದಾರೆ.
ಕೊವಿಡ್ ನಿಯಂತ್ರಣಕ್ಕೆ ವಿಧಿಸಿದ್ದ ನಿಷೇಧಾಜ್ಞೆ ಮುಂದುವರಿಕೆ
ಕೊವಿಡ್ ನಿಯಂತ್ರಣಕ್ಕೆ ವಿಧಿಸಿದ್ದ ನಿಷೇಧಾಜ್ಞೆ ಮುಂದುವರಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಫೆ.28ರವರೆಗೂ ನಿಷೇಧಾಜ್ಞೆ ಮುಂದುವರಿಸಿ ಆದೇಶ ನೀಡಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಈ ಬಗ್ಗೆ ಆದೇಶ ನೀಡಿದ್ದಾರೆ. ಕೊವಿಡ್ ನಿಬಂಧನೆಗಳು ಯಥಾವತ್ ಮುಂದುವರಿಯಲಿವೆ. ಯಾವುದೇ ರೀತಿಯ ಧರಣಿ, ಮೆರವಣಿಗೆಗೆ ಅವಕಾಶವಿಲ್ಲ. ನಿಬಂಧನೆಗಳನ್ನ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಎಂದು ಹೇಳಲಾಗಿದೆ.
ಇದನ್ನೂ ಓದಿ: ಅಬ್ಬಾ! ಕೊನೆಗೂ ಬೆಂಗಳೂರು ಕರಗ ಉತ್ಸವಕ್ಕೆ ಬಿಬಿಎಂಪಿ ಹಸಿರು ನಿಶಾನೆ, ತಗ್ಗಿದ ಕೊರೊನಾ ಅಬ್ಬರ
ಇದನ್ನೂ ಓದಿ: Corbevax: ಭಾರತಕ್ಕೆ ಇಂದೇ ಕಾರ್ಬ್ವ್ಯಾಕ್ಸ್ ಪೂರೈಕೆ ಸಾಧ್ಯತೆ; ಸದ್ಯದಲ್ಲೇ ಕಡಿಮೆ ಬೆಲೆಯ ಕೊವಿಡ್ ಲಸಿಕೆ ಲಭ್ಯ
Published On - 8:28 pm, Thu, 17 February 22