Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 767 ಜನರಿಗೆ ಕೊರೊನಾ ದೃಢ; 29 ಮಂದಿ ಸಾವು

| Updated By: ganapathi bhat

Updated on: Feb 22, 2022 | 9:06 PM

ಬೆಂಗಳೂರಿನಲ್ಲಿ ಇಂದು ಒಂದೇ ದಿನ 552 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,76,725 ಕ್ಕೆ ಏರಿಕೆಯಾಗಿದೆ. 17,76,725 ಸೋಂಕಿತರ ಪೈಕಿ 17,54,627 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 767 ಜನರಿಗೆ ಕೊರೊನಾ ದೃಢ; 29 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಫೆಬ್ರವರಿ 22) ಹೊಸದಾಗಿ 767 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,38,032 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 38,87,744 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 29 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,845 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 10,406 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 552 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,76,725 ಕ್ಕೆ ಏರಿಕೆಯಾಗಿದೆ. 17,76,725 ಸೋಂಕಿತರ ಪೈಕಿ 17,54,627 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 14 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,842 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,255 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ

ಬಾಗಲಕೋಟೆ 2, ಬಳ್ಳಾರಿ 10, ಬೆಳಗಾವಿ 22, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 552, ಬೀದರ್ 1, ಚಾಮರಾಜನಗರ 6, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 5, ಚಿತ್ರದುರ್ಗ 9, ದಕ್ಷಿಣ ಕನ್ನಡ 20, ದಾವಣಗೆರೆ 3, ಧಾರವಾಡ 10, ಗದಗ 2, ಹಾಸನ 7, ಹಾವೇರಿ 1, ಕಲಬುರಗಿ 3, ಕೊಡಗು 14, ಕೋಲಾರ 9, ಕೊಪ್ಪಳ 0, ಮಂಡ್ಯ 5, ಮೈಸೂರು 23, ರಾಯಚೂರು 0, ರಾಮನಗರ 2, ಶಿವಮೊಗ್ಗ 10, ತುಮಕೂರು 21, ಉಡುಪಿ 15, ಉತ್ತರ ಕನ್ನಡ 6, ವಿಜಯಪುರ 3, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 14 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3, ಧಾರವಾಡ, ತುಮಕೂರು, ಉಡುಪಿ ಜಿಲ್ಲೆಯಲ್ಲಿ 2, ಬಾಗಲಕೋಟೆ, ಬಳ್ಳಾರಿ, ಕಲಬುರಗಿ, ಶಿವಮೊಗ್ಗ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ 1 ಮಂದಿ ಕೊವಿಡ್​ನಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Biometric Attendance: ಕೊರೊನಾ ಕಡಿಮೆಯಾದ ಹಿನ್ನೆಲೆ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವಂತೆ ಸುತ್ತೋಲೆ

ಇದನ್ನೂ ಓದಿ: ಕೊವಿಡ್ ಸಾಂಕ್ರಾಮಿಕ ತಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಿ: ಹಾಂಗ್ ಕಾಂಗ್​​ಗೆ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಸಲಹೆ

Published On - 9:05 pm, Tue, 22 February 22