Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 514 ಜನರಿಗೆ ಕೊರೊನಾ ದೃಢ; 19 ಮಂದಿ ಸಾವು
ಬೆಂಗಳೂರಿನಲ್ಲಿ ಇಂದು ಒಂದೇ ದಿನ 345 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,78,137 ಕ್ಕೆ ಏರಿಕೆಯಾಗಿದೆ. 17,78,137 ಸೋಂಕಿತರ ಪೈಕಿ 17,57,479 ಜನರು ಗುಣಮುಖರಾಗಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಫೆಬ್ರವರಿ 26) ಹೊಸದಾಗಿ 514 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,40,429 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 38,93,532 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 19 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,919 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6,940 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 345 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,78,137 ಕ್ಕೆ ಏರಿಕೆಯಾಗಿದೆ. 17,78,137 ಸೋಂಕಿತರ ಪೈಕಿ 17,57,479 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,896 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 3,761 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 9, ಬೆಳಗಾವಿ 20, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 345, ಬೀದರ್ 1, ಚಾಮರಾಜನಗರ 3, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 6, ಚಿತ್ರದುರ್ಗ 5, ದಕ್ಷಿಣ ಕನ್ನಡ 7, ದಾವಣಗೆರೆ 4, ಧಾರವಾಡ 14, ಗದಗ 0, ಹಾಸನ 14, ಹಾವೇರಿ 0, ಕಲಬುರಗಿ 8, ಕೊಡಗು 16, ಕೋಲಾರ 5, ಕೊಪ್ಪಳ 1, ಮಂಡ್ಯ 0, ಮೈಸೂರು 18, ರಾಯಚೂರು 0, ರಾಮನಗರ 0, ಶಿವಮೊಗ್ಗ 10, ತುಮಕೂರು 8, ಉಡುಪಿ 4, ಉತ್ತರ ಕನ್ನಡ 11, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 26/02/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/ptbu9pUySK @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/3yHSCKLVkx
— K’taka Health Dept (@DHFWKA) February 26, 2022
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 13 ಮಂದಿ ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ 4, ಧಾರವಾಡ, ಉಡುಪಿ ಜಿಲ್ಲೆಯಲ್ಲಿ 1 ಮಂದಿ ಕೊವಿಡ್ನಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ: COVID-19: ರೆಡ್ ವೈನ್ ಸೇವನೆಯಿಂದ ಕೊರೊನಾದಿಂದ ದೂರವಿರಬಹುದು-ಅಧ್ಯಯನ
ಇದನ್ನೂ ಓದಿ: Biometric Attendance: ಕೊರೊನಾ ಕಡಿಮೆಯಾದ ಹಿನ್ನೆಲೆ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವಂತೆ ಸುತ್ತೋಲೆ