ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಫೆಬ್ರವರಿ 27) ಹೊಸದಾಗಿ 366 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,40,795 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 38,94,333 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 17 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,936 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6,488 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 224 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,78,361 ಕ್ಕೆ ಏರಿಕೆಯಾಗಿದೆ. 17,78,361 ಸೋಂಕಿತರ ಪೈಕಿ 17,57,805 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 11 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,907 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 3,648 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 2, ಬಳ್ಳಾರಿ 9, ಬೆಳಗಾವಿ 17, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 224, ಬೀದರ್ 2, ಚಾಮರಾಜನಗರ 4, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 2, ಚಿತ್ರದುರ್ಗ 6, ದಕ್ಷಿಣ ಕನ್ನಡ 10, ದಾವಣಗೆರೆ 1, ಧಾರವಾಡ 7, ಗದಗ 0, ಹಾಸನ 8, ಹಾವೇರಿ 2, ಕಲಬುರಗಿ 9, ಕೊಡಗು 4, ಕೋಲಾರ 1, ಕೊಪ್ಪಳ 5, ಮಂಡ್ಯ 2, ಮೈಸೂರು 17, ರಾಯಚೂರು 4, ರಾಮನಗರ 1, ಶಿವಮೊಗ್ಗ 4, ತುಮಕೂರು 7, ಉಡುಪಿ 5, ಉತ್ತರ ಕನ್ನಡ 5, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 3 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 27/02/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/uwlLYX41Qn @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/aZCTvAf6Tx
— K’taka Health Dept (@DHFWKA) February 27, 2022
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 11 ಮಂದಿ ಸಾವನ್ನಪ್ಪಿದ್ದಾರೆ. ಬೀದರ್, ಚಾಮರಾಜನಗರ, ದಕ್ಷಿಣ ಕನ್ನಡ, ಕೊಡಗು, ರಾಯಚೂರು, ಉಡುಪಿ ಜಿಲ್ಲೆಯಲ್ಲಿ 1 ಮಂದಿ ಕೊವಿಡ್ನಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ: COVID-19: ರೆಡ್ ವೈನ್ ಸೇವನೆಯಿಂದ ಕೊರೊನಾದಿಂದ ದೂರವಿರಬಹುದು-ಅಧ್ಯಯನ
ಇದನ್ನೂ ಓದಿ: ಭಾರತದಲ್ಲಿ ಕೊವಿಡ್‌ನಿಂದಾಗಿ ಹೆತ್ತವರು, ಪೋಷಕರನ್ನು ಕಳೆದುಕೊಂಡಿದ್ದು 19 ಲಕ್ಷ ಮಕ್ಕಳು