Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 268 ಜನರಿಗೆ ಕೊರೊನಾ ದೃಢ; 14 ಮಂದಿ ಸಾವು
ಬೆಂಗಳೂರಿನಲ್ಲಿ ಇಂದು ಒಂದೇ ದಿನ 161 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,78,522 ಕ್ಕೆ ಏರಿಕೆಯಾಗಿದೆ. 17,78,522 ಸೋಂಕಿತರ ಪೈಕಿ 17,58,355 ಜನರು ಗುಣಮುಖರಾಗಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಫೆಬ್ರವರಿ 28) ಹೊಸದಾಗಿ 268 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,41,063 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 38,95,452 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 14 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,950 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 5,623 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 161 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,78,522 ಕ್ಕೆ ಏರಿಕೆಯಾಗಿದೆ. 17,78,522 ಸೋಂಕಿತರ ಪೈಕಿ 17,58,355 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,917 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 3,249 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 7, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 161, ಬೀದರ್ 2, ಚಾಮರಾಜನಗರ 2, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 3, ಚಿತ್ರದುರ್ಗ 6, ದಕ್ಷಿಣ ಕನ್ನಡ 13, ದಾವಣಗೆರೆ 3, ಧಾರವಾಡ 3, ಗದಗ 0, ಹಾಸನ 3, ಹಾವೇರಿ 0, ಕಲಬುರಗಿ 1, ಕೊಡಗು 7, ಕೋಲಾರ 5, ಕೊಪ್ಪಳ 7, ಮಂಡ್ಯ 0, ಮೈಸೂರು 11, ರಾಯಚೂರು 0, ರಾಮನಗರ 0, ಶಿವಮೊಗ್ಗ 10, ತುಮಕೂರು 14, ಉಡುಪಿ 3, ಉತ್ತರ ಕನ್ನಡ 3, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 28/02/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/G46JAH6p66 @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/bkrIprP20P
— K’taka Health Dept (@DHFWKA) February 28, 2022
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 10 ಮಂದಿ ಸಾವನ್ನಪ್ಪಿದ್ದಾರೆ. ಬಳ್ಳಾರಿ, ಹಾಸನ, ಕೊಪ್ಪಳ, ಮಂಡ್ಯ ಜಿಲ್ಲೆಯಲ್ಲಿ 1 ಮಂದಿ ಕೊವಿಡ್ನಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ: Covid 4th Wave: ಜೂನ್ 22ರ ವೇಳೆಗೆ ಕೊರೊನಾ 4ನೇ ಅಲೆ ಅಪ್ಪಳಿಸುವ ಸಾಧ್ಯತೆ; ಆ. 23ಕ್ಕೆ ಉತ್ತುಂಗಕ್ಕೇರುವ ಸಾಧ್ಯತೆ
ಇದನ್ನೂ ಓದಿ: ಭಾರತದಲ್ಲಿ ಕೊವಿಡ್ನಿಂದಾಗಿ ಹೆತ್ತವರು, ಪೋಷಕರನ್ನು ಕಳೆದುಕೊಂಡಿದ್ದು 19 ಲಕ್ಷ ಮಕ್ಕಳು
Published On - 8:22 pm, Mon, 28 February 22