Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 8,425 ಜನರಿಗೆ ಕೊರೊನಾ ದೃಢ; 47 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 3,822 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,57,458 ಕ್ಕೆ ಏರಿಕೆಯಾಗಿದೆ. 17,57,458 ಸೋಂಕಿತರ ಪೈಕಿ 17,01,127 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 8,425 ಜನರಿಗೆ ಕೊರೊನಾ ದೃಢ; 47 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Feb 06, 2022 | 8:56 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಫೆಬ್ರವರಿ 6) ಹೊಸದಾಗಿ 8,425 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38,96,158 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 37,58,997 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 47 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,347 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 97,781 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 3,822 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,57,458 ಕ್ಕೆ ಏರಿಕೆಯಾಗಿದೆ. 17,57,458 ಸೋಂಕಿತರ ಪೈಕಿ 17,01,127 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 17 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,676 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 39,654 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ

ಬಾಗಲಕೋಟೆ 81, ಬಳ್ಳಾರಿ 249, ಬೆಳಗಾವಿ 221, ಬೆಂಗಳೂರು ಗ್ರಾಮಾಂತರ 92, ಬೆಂಗಳೂರು ನಗರ 3,822, ಬೀದರ್ 75, ಚಾಮರಾಜನಗರ 161, ಚಿಕ್ಕಬಳ್ಳಾಪುರ 100, ಚಿಕ್ಕಮಗಳೂರು 87, ಚಿತ್ರದುರ್ಗ 183, ದಕ್ಷಿಣ ಕನ್ನಡ 163, ದಾವಣಗೆರೆ 56, ಧಾರವಾಡ 211, ಗದಗ 50, ಹಾಸನ 276, ಹಾವೇರಿ 88, ಕಲಬುರಗಿ 195, ಕೊಡಗು 219, ಕೋಲಾರ 114, ಕೊಪ್ಪಳ 99, ಮಂಡ್ಯ 241, ಮೈಸೂರು 582, ರಾಯಚೂರು 34, ರಾಮನಗರ 45, ಶಿವಮೊಗ್ಗ 183, ತುಮಕೂರು 318, ಉಡುಪಿ 175, ಉತ್ತರ ಕನ್ನಡ 141, ವಿಜಯಪುರ 135, ಯಾದಗಿರಿ ಜಿಲ್ಲೆಯಲ್ಲಿ 29 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 17 ಮಂದಿ ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ 7, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5, ಮೈಸೂರು ಜಿಲ್ಲೆಯಲ್ಲಿ 3, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಉಡುಪಿ ಜಿಲ್ಲೆಯಲ್ಲಿ 2, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಧಾರವಾಡ, ಗದಗ, ಹಾವೇರಿ, ರಾಯಚೂರು ಹಾಗೂ ತುಮಕೂರು ಜಿಲ್ಲೆಯಲ್ಲಿ 1 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಭಾರತೀಯ ವಿಜ್ಞಾನಿಗಳಿಂದ ಕೊರೊನಾ ತಡೆಗೆ ತಾಮ್ರ ಆಧಾರಿತ ಆ್ಯಂಟಿವೈರಲ್​ ಫೇಸ್​ ಮಾಸ್ಕ್ ಅಭಿವೃದ್ಧಿ

ಇದನ್ನೂ ಓದಿ: ಭಾರತದಲ್ಲಿ ಕೊವಿಡ್ 19 ಮೂರನೇ ಅಲೆ ಮಾರ್ಚ್​ ತಿಂಗಳಷ್ಟೊತ್ತಿಗೆ ಕಡಿಮೆಯಾಗಲಿದೆ: ಐಸಿಎಂಆರ್​ ಆರೋಗ್ಯ ತಜ್ಞರ ವರದಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್