Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1033 ಜನರಿಗೆ ಕೊರೊನಾ ದೃಢ; 5 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 810 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,64,428 ಕ್ಕೆ ಏರಿಕೆಯಾಗಿದೆ. 12,64,428 ಸೋಂಕಿತರ ಪೈಕಿ 12,40,149 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1033 ಜನರಿಗೆ ಕೊರೊನಾ ದೃಢ; 5 ಮಂದಿ ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on: Jan 01, 2022 | 8:39 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜನವರಿ 01) ಹೊಸದಾಗಿ 1033 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,08,370 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,60,615 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,340 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,386 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 810 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,64,428 ಕ್ಕೆ ಏರಿಕೆಯಾಗಿದೆ. 12,64,428 ಸೋಂಕಿತರ ಪೈಕಿ 12,40,149 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,402 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,876 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 810, ಬೀದರ್ 2, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 10, ಚಿತ್ರದುರ್ಗ 4, ದಕ್ಷಿಣ ಕನ್ನಡ 48, ದಾವಣಗೆರೆ 0, ಧಾರವಾಡ 9, ಗದಗ 0, ಹಾಸನ 5, ಹಾವೇರಿ 0, ಕಲಬುರಗಿ 8, ಕೊಡಗು 13, ಕೋಲಾರ 6, ಕೊಪ್ಪಳ 0, ಮಂಡ್ಯ 23, ಮೈಸೂರು 29, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 8, ಉಡುಪಿ 28, ಉತ್ತರ ಕನ್ನಡ 5, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದಾರೆ. ಮಂಡ್ಯ, ತುಮಕೂರು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊವಿಡ್​ನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಇದನ್ನೂ ಓದಿ: ಭಾರತದಲ್ಲಿ ಕೊರೊನಾ ಸ್ಫೋಟ; ದಿನವೂ 10 ಸಾವಿರಕ್ಕಿಂತ ಹೆಚ್ಚು ಕೊವಿಡ್ ಕೇಸ್ ಪತ್ತೆ

ಇದನ್ನೂ ಓದಿ: Coronavirus: ಕೊವಿಡ್ ಟೆಸ್ಟ್ ಹೆಚ್ಚಳಕ್ಕೆ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸೂಚನೆ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM