Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1290 ಜನರಿಗೆ ಕೊರೊನಾ ದೃಢ; 5 ಮಂದಿ ಸಾವು

| Updated By: ganapathi bhat

Updated on: Jan 03, 2022 | 10:29 PM

ಬೆಂಗಳೂರಿನಲ್ಲಿ ಇಂದು ಒಂದೇ ದಿನ 1041 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,66,392 ಕ್ಕೆ ಏರಿಕೆಯಾಗಿದೆ. 12,66,392 ಸೋಂಕಿತರ ಪೈಕಿ 12,40,408 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1290 ಜನರಿಗೆ ಕೊರೊನಾ ದೃಢ; 5 ಮಂದಿ ಸಾವು
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜನವರಿ 03) ಹೊಸದಾಗಿ 1290 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,10,847 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,61,122 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,351 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 11,345 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 1041 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,66,392 ಕ್ಕೆ ಏರಿಕೆಯಾಗಿದೆ. 12,66,392 ಸೋಂಕಿತರ ಪೈಕಿ 12,40,408 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,408 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 9,575 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 11, ಬೆಳಗಾವಿ 14, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 1041, ಬೀದರ್ 1, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 2, ಚಿತ್ರದುರ್ಗ 1, ದಕ್ಷಿಣ ಕನ್ನಡ 52, ದಾವಣಗೆರೆ 2, ಧಾರವಾಡ 19, ಗದಗ 1, ಹಾಸನ 11, ಹಾವೇರಿ 0, ಕಲಬುರಗಿ 9, ಕೊಡಗು 10, ಕೋಲಾರ 6, ಕೊಪ್ಪಳ 1, ಮಂಡ್ಯ 13, ಮೈಸೂರು 14, ರಾಯಚೂರು 2, ರಾಮನಗರ 0, ಶಿವಮೊಗ್ಗ 13, ತುಮಕೂರು 6, ಉಡುಪಿ 43, ಉತ್ತರ ಕನ್ನಡ 2, ವಿಜಯಪುರ 5, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಹಾಗೂ ಹಾಸನ ಜಿಲ್ಲೆಯಲ್ಲಿ ಕೊವಿಡ್​ನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಕೊವಿಡ್ ಬಗ್ಗೆ ಮುನ್ನೆಚ್ಚರಿಕೆ ವಹಿಸಿದರೆ ಲಾಕ್​ಡೌನ್ ಅಗತ್ಯವಿಲ್ಲ: ಬಸವರಾಜ ಹೊರಟ್ಟಿ
ಕೊವಿಡ್ ಬಗ್ಗೆ ಮುನ್ನೆಚ್ಚರಿಕೆ ವಹಿಸಿದರೆ ಲಾಕ್​ಡೌನ್ ಅಗತ್ಯವಿಲ್ಲ. ಅನಿವಾರ್ಯವಾದರೆ ಲಾಕ್​ಡೌನ್​ ಮಾಡಲೇ ಬೇಕಾಗುತ್ತದೆ ಎಂದು ಹುಬ್ಬಳ್ಳಿಯ ಹೆಬಸೂರಿನಲ್ಲಿ ಪರಿಷತ್ ಸಭಾಪತಿ ಹೊರಟ್ಟಿ ಹೇಳಿಕೆ ನೀಡಿದ್ದಾರೆ. ಈಗಾಗಲೇ ಲಾಕ್​ಡೌನ್​ನಿಂದ ಸಾಕಷ್ಟು ಸಮಸ್ಯೆ ಅನುಭವಿಸಿದ್ದೇವೆ. ಮತ್ತೊಮ್ಮೆ ಲಾಕ್​ಡೌನ್ ಮಾಡಿದರೆ ಮತ್ತಷ್ಟು ಸಮಸ್ಯೆಯಾಗಲಿದೆ. ಕೊರೊನಾ ನಿರ್ವಹಣೆಗೆ ಸರ್ಕಾರ ಜವಾಬ್ದಾರಿ ತೆಗೆದುಕೊಂಡಿದೆ. ಕೊರೊನಾ ನಿಯಂತ್ರಣಕ್ಕೆ ಜನರು ಕೂಡ ಸಹಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ.

ಜನವರಿ 7 ರಂದು ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ
ಜನವರಿ 7 ರಂದು ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಿಗದಿ ಮಾಡಲಾಗಿದೆ. ಟಫ್ ರೂಲ್ಸ್‌ ಜಾರಿ ಬಗ್ಗೆ ಅಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್. ಅಶೋಕ್‌ ಹೇಳಿಕೆ ನೀಡಿದ್ದಾರೆ. ಈಗಾಗಲೇ ಕೆಲವೊಂದು ವರದಿ ಸಲ್ಲಿಕೆ ಮಾಡಲಾಗಿದೆ. ಈ ಬಗ್ಗೆ ತಜ್ಞರು, ಅಧಿಕಾರಿಗಳ ಜತೆ ಸಿಎಂ ಸಭೆ ಮಾಡುತ್ತಾರೆ. ತಜ್ಞರ ಶಿಫಾರಸು ಜಾರಿ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗುತ್ತೆ. ಬೇರೆ ಬೇರೆ ರಾಜ್ಯಗಳಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗಿದೆ. ಜನರ ರಕ್ಷಣೆ ಮಾಡಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ವಿಚಾರವಾಗಿ ಕಂದಾಯ ಸಚಿವ ಆರ್.ಅಶೋಕ್‌ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ನವರು ಪಾದಯಾತ್ರೆ ಮಾಡ್ತೀವಿ ಅಂದ್ರೆ ಮಾಡಲಿ. ರಾಜ್ಯ ಸರ್ಕಾರ ಏನು ಮಾಡಬೇಕೋ ಅದನ್ನು ಮಾಡುತ್ತದೆ. ನಿಯಮ ರೂಪಿಸಿ ಜಾರಿ ಮಾಡುವ ಹೊಣೆ ಹೊತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Mumbai Covid Cases: ಮುಂಬೈನಲ್ಲಿ ಕೊರೊನಾ ಕೇಸ್ ಹೆಚ್ಚಳ; ಜ. 31ರವರೆಗೆ ಶಾಲೆಗಳು ಬಂದ್

ಇದನ್ನೂ ಓದಿ: 2 ಸಾವಿರಕ್ಕೂ ಅಧಿಕ ಪ್ರಯಾಣಿಕರಿದ್ದ ಮುಂಬೈ-ಗೋವಾ ಐಷಾರಾಮಿ ಹಡಗಿನಲ್ಲಿ 66 ಮಂದಿಗೆ ಕೊರೊನಾ ಸೋಂಕು; ಇಡೀ ಹಡಗು ಐಸೋಲೇಟ್​ !

Published On - 10:24 pm, Mon, 3 January 22