Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 2,479 ಜನರಿಗೆ ಕೊರೊನಾ ದೃಢ; 4 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 2053 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,68,445 ಕ್ಕೆ ಏರಿಕೆಯಾಗಿದೆ. 12,68,445 ಸೋಂಕಿತರ ಪೈಕಿ 12,40,610 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 2,479 ಜನರಿಗೆ ಕೊರೊನಾ ದೃಢ; 4 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Jan 04, 2022 | 7:36 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜನವರಿ 04) ಹೊಸದಾಗಿ 2,479 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,13,326 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,61,410 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,355 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 13,532 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 2053 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,68,445 ಕ್ಕೆ ಏರಿಕೆಯಾಗಿದೆ. 12,68,445 ಸೋಂಕಿತರ ಪೈಕಿ 12,40,610 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,411 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 11,423 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 2, ಬಳ್ಳಾರಿ 9, ಬೆಳಗಾವಿ 45, ಬೆಂಗಳೂರು ಗ್ರಾಮಾಂತರ 15, ಬೆಂಗಳೂರು ನಗರ 2053, ಬೀದರ್ 2, ಚಾಮರಾಜನಗರ 2, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 4, ಚಿತ್ರದುರ್ಗ 2, ದಕ್ಷಿಣ ಕನ್ನಡ 75, ದಾವಣಗೆರೆ 3, ಧಾರವಾಡ 29, ಗದಗ 2, ಹಾಸನ 18, ಹಾವೇರಿ 0, ಕಲಬುರಗಿ 16, ಕೊಡಗು 7, ಕೋಲಾರ 14, ಕೊಪ್ಪಳ 1, ಮಂಡ್ಯ 17, ಮೈಸೂರು 48, ರಾಯಚೂರು 3, ರಾಮನಗರ 5, ಶಿವಮೊಗ್ಗ 3, ತುಮಕೂರು 11, ಉಡುಪಿ 72, ಉತ್ತರ ಕನ್ನಡ 4, ವಿಜಯಪುರ 11, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊವಿಡ್​ನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಬೆಂಗಳೂರಲ್ಲಿ ಕೊವಿಡ್ ನಿಯಂತ್ರಣಕ್ಕೆ ಅಧಿಕಾರಿಗಳ ನೇಮಕ ಬೆಂಗಳೂರಲ್ಲಿ ಕೊವಿಡ್ ನಿಯಂತ್ರಣಕ್ಕೆ ಅಧಿಕಾರಿಗಳ ನೇಮಕ ಮಾಡಲಾಗಿದೆ. ನೋಡಲ್‌ ಅಧಿಕಾರಿಗಳಾಗಿ IAS, IPS ಅಧಿಕಾರಿಗಳನ್ನು ನೇಮಿಸಲಾಗಿದೆ. 1. ಏರ್‌ಪೋರ್ಟ್‌ ಕೊವಿಡ್ ಉಸ್ತುವಾರಿ- ಸಿ.ಶಿಖಾ 2. ಖಾಸಗಿ ವೈದ್ಯ ಸಂಸ್ಥೆಯಲ್ಲಿ ಹಾಸಿಗೆ ಮೀಸಲು ಉಸ್ತುವಾರಿಗಳಾಗಿ ಬೆಂಗಳೂರಿನ ಪೂರ್ವ ವಲಯ-1ಕ್ಕೆ ಇಬ್ಬರ ನೇಮಕಾತಿ ಮಾಡಲಾಗಿದೆ. ಕ್ಯಾ. ಮಣಿವಣ್ಣನ್ ಮತ್ತು ಅಲೋಕ್ ಕುಮಾರ್ ನೇಮಕ ಮಾಡಲಾಗಿದೆ. 3. ಬೆಂಗಳೂರಿನ ಪೂರ್ವ ವಲಯ-2ಕ್ಕೆ ಇಬ್ಬರ ನೇಮಕಾತಿ ಮಾಡಲಾಗಿದೆ. ಮೊಹಮ್ಮದ್ ಮೊಹಿಸಿನ್ ಮತ್ತು ಹರಿಶೇಖರನ್ ನೇಮಿಸಲಾಗಿದೆ. 4. ಮಹದೇವಪುರ- ಉಮಾ ಮಹದೇವನ್, ಹಿತೇಂದ್ರ 5. ಪಶ್ಚಿಮ ವಲಯ- ಎಂ.ಟಿ.ರೇಜು ಮತ್ತು ಕೆ.ಟಿ.ಬಾಲಕೃಷ್ಣ 6. ದಕ್ಷಿಣ ವಲಯ- ರಾಜೇಂದ್ರಚೋಳನ್, ರಾಮಚಂದ್ರರಾವ್ 7. ಆರ್.ಆರ್. ನಗರ- ರಾಮ್ ಪ್ರಸಾತ್, ಹೇಮಂತ್ ನಿಂಬಾಳ್ಕರ್ 8. ಯಲಹಂಕ, ದಾಸರಹಳ್ಳಿ- ಏಕ್‌ರೂಪ್‌ ಕೌರ್‌, ಎಸ್‌.ರವಿ 9. ಖಾಸಗಿ ಆಸ್ಪತ್ರೆಯಲ್ಲಿ ಬೆಡ್‌ ಮೀಸಲಿಗೆ ಎನ್‌. ಜಯರಾಮ್‌ 10. ಟ್ರೇಸಿಂಗ್, ಅನ್‌ಟ್ರೇಸ್ಡ್ ಸೋಂಕಿತರ ಪತ್ತೆ- ಅನುಚೇತ್ 11. ಸೋಂಕಿತರ ಅಂತ್ಯಸಂಸ್ಕಾರ- ರಾಜೇಂದ್ರಕುಮಾರ್ ಕಠಾರಿಯಾ 12. ಕಂಟೋನ್ಮೆಂಟ್ ಜೋನ್ ಉಸ್ತುವಾರಿ- ಸತ್ಯವತಿ

ಇದನ್ನೂ ಓದಿ: ಬೆಂಗಳೂರಿನಲ್ಲಿ 2 ಸಾವಿರ ಗಡಿ ದಾಟಿದ ಕೊರೊನಾ ಕೇಸ್​; 24 ಗಂಟೆಯಲ್ಲಿ ಕೊವಿಡ್ ಪ್ರಕರಣಗಳು​ ದ್ವಿಗುಣ

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೊರೊನಾ ಅತಂಕ! ಶಾಲೆಗಳನ್ನ ಬಂದ್ ಮಾಡಲು ಆರ್ಕಿಡ್ ಇಂಟರ್ನ್ಯಾಷನಲ್ ಸಂಸ್ಥೆ ನಿರ್ಧಾರ

Published On - 7:29 pm, Tue, 4 January 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ