ಕರ್ನಾಟಕದಲ್ಲಿ ಹೊಸದಾಗಿ 4,246 ಕೊರೊನಾ ಪ್ರಕರಣಗಳು ಪತ್ತೆ; ಬೆಂಗಳೂರಿನಲ್ಲಿ ಮಾತ್ರವೇ 3,605 ಕೊವಿಡ್ ಪಾಸಿಟಿವ್
ಬೆಂಗಳೂರಲ್ಲಿ ಇಂದು ಕೊರೊನಾ ಸೋಂಕಿಗೆ ಇಬ್ಬರು ಬಲಿ ಆಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ. 3.33ರಷ್ಟಿದೆ ಎಂದು ಟ್ವಿಟರ್ನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜನವರಿ 5) 4,246 ಕೊರೊನಾ ಪ್ರಕರಣಗಳು ಪತ್ತೆ ಆಗಿವೆ. ಬೆಂಗಳೂರಿನಲ್ಲಿ ಮಾತ್ರವೇ ಇಂದು ಒಂದೇ ದಿನ 3,605 ಜನರಿಗೆ ಸೋಂಕು ದೃಢವಾಗಿದೆ. ಬೆಂಗಳೂರಲ್ಲಿ ಇಂದು ಕೊರೊನಾ ಸೋಂಕಿಗೆ ಇಬ್ಬರು ಬಲಿ ಆಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ. 3.33ರಷ್ಟಿದೆ ಎಂದು ಟ್ವಿಟರ್ನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಇಂದು (ಜನವರಿ 05) ಹೊಸದಾಗಿ 4,246 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,17,572 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,61,772 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,357 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 17,414 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 3,605 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,72,050 ಕ್ಕೆ ಏರಿಕೆಯಾಗಿದೆ. 12,72,050 ಸೋಂಕಿತರ ಪೈಕಿ 12,40,874 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,413 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 14,762 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 6, ಬಳ್ಳಾರಿ 34, ಬೆಳಗಾವಿ 31, ಬೆಂಗಳೂರು ಗ್ರಾಮಾಂತರ 19, ಬೆಂಗಳೂರು ನಗರ 3605, ಬೀದರ್ 3, ಚಾಮರಾಜನಗರ 2, ಚಿಕ್ಕಬಳ್ಳಾಪುರ 8, ಚಿಕ್ಕಮಗಳೂರು 12, ಚಿತ್ರದುರ್ಗ 6, ದಕ್ಷಿಣ ಕನ್ನಡ 111, ದಾವಣಗೆರೆ 3, ಧಾರವಾಡ 26, ಗದಗ 5, ಹಾಸನ 20, ಹಾವೇರಿ 0, ಕಲಬುರಗಿ 28, ಕೊಡಗು 20, ಕೋಲಾರ 24, ಕೊಪ್ಪಳ 0, ಮಂಡ್ಯ 36, ಮೈಸೂರು 59, ರಾಯಚೂರು 0, ರಾಮನಗರ 4, ಶಿವಮೊಗ್ಗ 22, ತುಮಕೂರು 43, ಉಡುಪಿ 88, ಉತ್ತರ ಕನ್ನಡ 17, ವಿಜಯಪುರ 14, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 05/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/nzE1hmWZSl @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/KBtGf2gycs
— K’taka Health Dept (@DHFWKA) January 5, 2022
ಕೊರೊನಾದಿಂದ ಮೃತಪಟ್ಟವರ ವಿವರ, ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊವಿಡ್ ಬೆಡ್ ನಿರ್ವಹಣೆಗೆ ಅಧಿಕಾರಿ ನೇಮಕ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ. ಬಿಬಿಎಂಪಿ ವ್ಯಾಪ್ತಿಯ ಕೊವಿಡ್ ಆಸ್ಪತ್ರೆಗಳಲ್ಲಿ ಬೆಡ್ ನಿರ್ವಹಣೆಗೆ ಐಎಫ್‌ಎಸ್ ಅಧಿಕಾರಿ ಕುಮಾರ್ ಪುಷ್ಕರ್ ನೇತೃತ್ವದ ಮೂವರು ಅಧಿಕಾರಿಗಳ ತಂಡ ನೇಮಕ ಮಾಡಲಾಗಿದೆ. ಐಎಫ್‌ಎಸ್ ಅಧಿಕಾರಿ ಬಿಶ್ವಜಿತ್ ಮಿಶ್ರಾ ಹಾಗೂ ಗಣಿ ಇಲಾಖೆ ಉಪ ನಿರ್ದೇಶಕ ಹರೀಶ್‌ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.
ಇದನ್ನೂ ಓದಿ: ಎಷ್ಟೆಲ್ಲ ಒಳ್ಳೆಯದಾಗುತ್ತಿದೆ ಎನ್ನುತ್ತ ಬರೋಬ್ಬರಿ 11 ಡೋಸ್ ಕೊರೊನಾ ಲಸಿಕೆ ಪಡೆದ 84ರ ವೃದ್ಧ !-ತನಿಖೆಗೆ ಆದೇಶ
ಇದನ್ನೂ ಓದಿ: ಕೊರೊನಾ ಎಲ್ಲರಿಗೂ ಒಂದೇ ಅಲ್ವಾ: ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆ ಸಿದ್ಧತೆ ಬಗ್ಗೆ ಬೊಮ್ಮಾಯಿ ಪ್ರತಿಕ್ರಿಯೆ
Published On - 6:18 pm, Wed, 5 January 22