ಬೆಂಗಳೂರಿನಲ್ಲಿ ಇಂದು ಒಂದೇ ದಿನ 9,020 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,99,319 ಕ್ಕೆ ಏರಿಕೆಯಾಗಿದೆ. 12,99,319 ಸೋಂಕಿತರ ಪೈಕಿ 12,42,326 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,422 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 40,570 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 10, ಬಳ್ಳಾರಿ 107, ಬೆಳಗಾವಿ 105, ಬೆಂಗಳೂರು ಗ್ರಾಮಾಂತರ 98, ಬೆಂಗಳೂರು ನಗರ 9,020, ಬೀದರ್ 20, ಚಾಮರಾಜನಗರ 26, ಚಿಕ್ಕಬಳ್ಳಾಪುರ 44, ಚಿಕ್ಕಮಗಳೂರು 78, ಚಿತ್ರದುರ್ಗ 24, ದಕ್ಷಿಣ ಕನ್ನಡ 298, ದಾವಣಗೆರೆ 30, ಧಾರವಾಡ 147, ಗದಗ 7, ಹಾಸನ 182, ಹಾವೇರಿ 8, ಕಲಬುರಗಿ 98, ಕೊಡಗು 29, ಕೋಲಾರ 83, ಕೊಪ್ಪಳ 19, ಮಂಡ್ಯ 261, ಮೈಸೂರು 398, ರಾಯಚೂರು 7, ರಾಮನಗರ 20, ಶಿವಮೊಗ್ಗ 198, ತುಮಕೂರು 190, ಉಡುಪಿ 340, ಉತ್ತರ ಕನ್ನಡ 94, ವಿಜಯಪುರ 49, ಯಾದಗಿರಿ ಜಿಲ್ಲೆಯಲ್ಲಿ 10 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 09/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/1FpG83YiMt @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/feorxaau1E
— K’taka Health Dept (@DHFWKA) January 9, 2022
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದಾರೆ. ಬಳ್ಳಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊವಿಡ್ನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.
ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಿಟಿ ರೌಂಡ್ಸ್
ಇಂದು ಸಿಟಿಯನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿದ್ದೇನೆ. ಸರ್ಕಾರದ ವಿಕೇಂಡ್ ಕರ್ಫ್ಯೂಗೆ ಜನರು ಬೆಂಬಲ ನೀಡಿದ್ದಾರೆ. ಮುಂದಿನ ದಿನಗಳಲ್ಲೂ ಜನರ ಸಹಕಾರ ಇದೇ ರೀತಿ ಇರಲಿ. ಕರ್ಫ್ಯೂ ವೇಳೆ ಪೊಲೀಸ್ ಸಿಬ್ಬಂದಿಯ ಕಾರ್ಯ ಶ್ಲಾಘನೀಯ. ಮುಂದಿನ ದಿನಗಳಲ್ಲೂ ವೀಕೆಂಡ್ ಕರ್ಫ್ಯೂ ಬಗ್ಗೆ ಚಿಂತನೆ ಇದೆ. ತಜ್ಞರ ವರದಿಯನ್ನು ಆಧರಿಸಿದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಬೆಂಗಳೂರಲ್ಲಿ ಸಿಟಿ ರೌಂಡ್ಸ್ ಬಳಿಕ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.
ವೀಕೆಂಡ್ ಕರ್ಫ್ಯೂ ಹಿನ್ನೆಲೆ ಗೃಹ ಸಚಿವರಿಂದ ಸಿಟಿ ರೌಂಡ್ಸ್ ಹಾಕಲಾಗಿದೆ. ಸಚಿವ ಆರಗ ಜ್ಞಾನೇಂದ್ರ ಬೆಂಗಳೂರಿನಲ್ಲಿ ಭದ್ರತೆ ಪರಿಶೀಲಿಸಿದ್ದಾರೆ. ಎಂ.ಜಿ. ರಸ್ತೆ ಸಿಗ್ನಲ್, ಟ್ರಿನಿಟಿ ಸರ್ಕಲ್, ಕಮಾಂಡ್ ಆಸ್ಪತ್ರೆ, ಮಣಿಪಾಲ್ ಆಸ್ಪತ್ರೆ ಹಾಗೂ ಹೆಚ್ಎಎಲ್ ಏರ್ಪೋರ್ಟ್, ಹಲಸೂರು ಲೇಕ್, ಶಿವಾಜಿನಗರದಲ್ಲಿ ಸಚಿವರು ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು: NITK ಕಾಲೇಜಿನಲ್ಲಿ 60 ವಿದ್ಯಾರ್ಥಿಗಳಿಗೆ ಕೊರೊನಾ
ಮಂಗಳೂರಿನಲ್ಲಿ ಸರ್ಕಾರಿ ಶಿಕ್ಷಣ ಸಂಸ್ಥೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸುರತ್ಕಲ್ನ NITK ಕಾಲೇಜಿನಲ್ಲಿ 60 ವಿದ್ಯಾರ್ಥಿಗಳಿಗೆ ಕೊರೊನಾ ದೃಢವಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಂಡುಬಂದಿದೆ. ಕಾಲೇಜಿನ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ಟೆಸ್ಟ್ ಮಾಡಿತ್ತು. ಕೊರೊನಾ ಸೋಂಕಿತ 60 ವಿದ್ಯಾರ್ಥಿಗಳಿಗೆ ಕ್ವಾರಂಟೈನ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇಂದು 42 ಪೊಲೀಸರಿಗೆ ಕೊರೊನಾ ದೃಢ
ಬೆಂಗಳೂರಿನಲ್ಲಿ ಇಂದು 42 ಪೊಲೀಸರಿಗೆ ಕೊರೊನಾ ದೃಢವಾಗಿದೆ. ಬೆಂಗಳೂರಲ್ಲಿ ಈವರೆಗೆ 111 ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದೆ. 111 ಪೊಲೀಸ್ ಸಿಬ್ಬಂದಿ ಪೈಕಿ 6 ಸಿಬ್ಬಂದಿ ಗುಣಮುಖ ಆಗಿದ್ದಾರೆ.
ತುಮಕೂರು ಜಿಲ್ಲೆಯ ಪೊಲೀಸರಿಗೆ ಕೊರೊನಾ ದೃಢವಾಗಿದೆ. ಒಟ್ಟು 15 ಜನ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಆಗಿದೆ. ಎಲ್ಲರೂ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಸಿಬ್ಬಂದಿಯ ಕುಟುಂಬಸ್ಥರ ಕೊವಿಡ್ ಪರೀಕ್ಷೆ ಮಾಡಿಸಲಾಗಿದೆ. ತುಮಕೂರು ಎಸ್ಪಿ ರಾಹುಲ್ ಕುಮಾರ್ ಮಾಹಿತಿ ನೀಡಿದ್ದಾರೆ.
ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರಗೆ ಕೊರೊನಾ
ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜನವರಿ 7ರಂದು ದೆಹಲಿಯಿಂದ ವಾಪಸಾಗಿದ್ದ ಸಂಸದರಿಗೆ ಕೊರೊನಾ ಖಚಿತವಾಗಿದೆ. ಬಾದಾಮಿ ನಿವಾಸದಲ್ಲಿ ಸಂಸದರಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ.
ಇದನ್ನೂ ಓದಿ: ಶಿವಮೊಗ್ಗ, ಮಂಡ್ಯದಲ್ಲಿ ಕೊರೊನಾ ಹೆಚ್ಚಳ; ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದ ರೇಣುಕಾಚಾರ್ಯ
ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಕೊರೊನಾ! ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.10.21ಕ್ಕೆ ಏರಿಕೆ