ಬೆಂಗಳೂರಿನಲ್ಲಿ ಇಂದು ಒಂದೇ ದಿನ 9,221 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 13,08,540 ಕ್ಕೆ ಏರಿಕೆಯಾಗಿದೆ. 13,08,540 ಸೋಂಕಿತರ ಪೈಕಿ 12,43,155 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,424 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 48,960 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 7, ಬಳ್ಳಾರಿ 93, ಬೆಳಗಾವಿ 129, ಬೆಂಗಳೂರು ಗ್ರಾಮಾಂತರ 143, ಬೆಂಗಳೂರು ನಗರ 9,221, ಬೀದರ್ 37, ಚಾಮರಾಜನಗರ 40, ಚಿಕ್ಕಬಳ್ಳಾಪುರ 53, ಚಿಕ್ಕಮಗಳೂರು 43, ಚಿತ್ರದುರ್ಗ 27, ದಕ್ಷಿಣ ಕನ್ನಡ 176, ದಾವಣಗೆರೆ 22, ಧಾರವಾಡ 144, ಗದಗ 16, ಹಾಸನ 171, ಹಾವೇರಿ 0, ಕಲಬುರಗಿ 88, ಕೊಡಗು 23, ಕೋಲಾರ 65, ಕೊಪ್ಪಳ 7, ಮಂಡ್ಯ 306, ಮೈಸೂರು 309, ರಾಯಚೂರು 4, ರಾಮನಗರ 8, ಶಿವಮೊಗ್ಗ 75, ತುಮಕೂರು 139, ಉಡುಪಿ 219, ಉತ್ತರ ಕನ್ನಡ 100, ವಿಜಯಪುರ 28, ಯಾದಗಿರಿ ಜಿಲ್ಲೆಯಲ್ಲಿ 5 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 10/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/cHyerH8FAc @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/RBwFn7GY13
— K’taka Health Dept (@DHFWKA) January 10, 2022
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದಾರೆ. ರಾಮನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ಕೊವಿಡ್ನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.
ಇದನ್ನೂ ಓದಿ: Basavaraj Bommai: ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್
ಇದನ್ನೂ ಓದಿ: ಆರೋಗ್ಯ ಸಚಿವರ ಬಾಮೈದನಿಂದಲೇ ಕೊರೊನಾ ನಿಯಮ ಉಲ್ಲಂಘನೆ; 500 ಮಹಿಳೆಯರನ್ನು ಸೇರಿಸಿ ಓಂಶಕ್ತಿ ಯಾತ್ರೆ ಆಯೋಜನೆ