Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 14,473 ಜನರಿಗೆ ಕೊರೊನಾ ದೃಢ; 5 ಮಂದಿ ಸಾವು

| Updated By: ganapathi bhat

Updated on: Jan 11, 2022 | 8:07 PM

ಬೆಂಗಳೂರಿನಲ್ಲಿ ಇಂದು ಒಂದೇ ದಿನ 10,800 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 13,19,340 ಕ್ಕೆ ಏರಿಕೆಯಾಗಿದೆ. 13,19,340 ಸೋಂಕಿತರ ಪೈಕಿ 12,43,995 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 14,473 ಜನರಿಗೆ ಕೊರೊನಾ ದೃಢ; 5 ಮಂದಿ ಸಾವು
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜನವರಿ 11) ಹೊಸದಾಗಿ 14,473 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,78,129 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,66,461 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,379 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 73,260 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 10,800 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 13,19,340 ಕ್ಕೆ ಏರಿಕೆಯಾಗಿದೆ. 13,19,340 ಸೋಂಕಿತರ ಪೈಕಿ 12,43,995 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,427 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 58,917 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 9, ಬಳ್ಳಾರಿ 101, ಬೆಳಗಾವಿ 79, ಬೆಂಗಳೂರು ಗ್ರಾಮಾಂತರ 160, ಬೆಂಗಳೂರು ನಗರ 10,800, ಬೀದರ್ 43, ಚಾಮರಾಜನಗರ 86, ಚಿಕ್ಕಬಳ್ಳಾಪುರ 91, ಚಿಕ್ಕಮಗಳೂರು 41, ಚಿತ್ರದುರ್ಗ 47, ದಕ್ಷಿಣ ಕನ್ನಡ 583, ದಾವಣಗೆರೆ 56, ಧಾರವಾಡ 178, ಗದಗ 21, ಹಾಸನ 121, ಹಾವೇರಿ 8, ಕಲಬುರಗಿ 109, ಕೊಡಗು 29, ಕೋಲಾರ 139, ಕೊಪ್ಪಳ 2, ಮಂಡ್ಯ 263, ಮೈಸೂರು 562, ರಾಯಚೂರು 29, ರಾಮನಗರ 59, ಶಿವಮೊಗ್ಗ 136, ತುಮಕೂರು 332, ಉಡುಪಿ 250, ಉತ್ತರ ಕನ್ನಡ 106, ವಿಜಯಪುರ 20, ಯಾದಗಿರಿ ಜಿಲ್ಲೆಯಲ್ಲಿ 13 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದಾರೆ. ಕೋಲಾರ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊವಿಡ್​ನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ ಸೋಂಕು ಹಿನ್ನೆಲೆ; ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಇದನ್ನೂ ಓದಿ: ಕರ್ನಾಟಕದಲ್ಲಿ ಕೊವಿಡ್ ಮಾರ್ಗಸೂಚಿ ವಿಸ್ತರಣೆ ಮಾಡಿ ಆದೇಶ; ಜನವರಿ ‌ಅಂತ್ಯದವರೆಗೆ ಕಠಿಣ ನಿಯಮ

Published On - 8:05 pm, Tue, 11 January 22