Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 31,198 ಜನರಿಗೆ ಕೊರೊನಾ ದೃಢ; 50 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 15,199 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 16,81,674 ಕ್ಕೆ ಏರಿಕೆಯಾಗಿದೆ. 16,81,674 ಸೋಂಕಿತರ ಪೈಕಿ 15,04,941 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 31,198 ಜನರಿಗೆ ಕೊರೊನಾ ದೃಢ; 50 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Jan 28, 2022 | 8:36 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜನವರಿ 28) ಹೊಸದಾಗಿ 31,198 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 37,23,694 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 33,96,093 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 50 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,804 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 2,88,767 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 15,199 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 16,81,674 ಕ್ಕೆ ಏರಿಕೆಯಾಗಿದೆ. 16,81,674 ಸೋಂಕಿತರ ಪೈಕಿ 15,04,941 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 8 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,554 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 1,60,178 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ

ಬಾಗಲಕೋಟೆ 187, ಬಳ್ಳಾರಿ 709, ಬೆಳಗಾವಿ 725, ಬೆಂಗಳೂರು ಗ್ರಾಮಾಂತರ 558, ಬೆಂಗಳೂರು ನಗರ 15,199, ಬೀದರ್ 194, ಚಾಮರಾಜನಗರ 618, ಚಿಕ್ಕಬಳ್ಳಾಪುರ 427, ಚಿಕ್ಕಮಗಳೂರು 283, ಚಿತ್ರದುರ್ಗ 192, ದಕ್ಷಿಣ ಕನ್ನಡ 516, ದಾವಣಗೆರೆ 186, ಧಾರವಾಡ 1,500, ಗದಗ 171, ಹಾಸನ 1,037, ಹಾವೇರಿ 179, ಕಲಬುರಗಿ 406, ಕೊಡಗು 371, ಕೋಲಾರ 452, ಕೊಪ್ಪಳ 227, ಮಂಡ್ಯ 963, ಮೈಸೂರು 1,877, ರಾಯಚೂರು 225, ರಾಮನಗರ 262, ಶಿವಮೊಗ್ಗ 509, ತುಮಕೂರು 1,315, ಉಡುಪಿ 818, ಉತ್ತರ ಕನ್ನಡ 760, ವಿಜಯಪುರ 125, ಯಾದಗಿರಿ ಜಿಲ್ಲೆಯಲ್ಲಿ 207 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ

ಬೆಂಗಳೂರು ನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 8 ಮಂದಿ ಸಾವನ್ನಪ್ಪಿದ್ದಾರೆ. ಹಾಸನ 5, ದಕ್ಷಿಣ ಕನ್ನಡ, ತುಮಕೂರು 4, ಬೆಳಗಾವಿ, ಶಿವಮೊಗ್ಗ 3, ಹಾವೇರಿ, ರಾಮನಗರ 2, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಗದಗ, ಕಲಬುರಗಿ, ಕೊಡಗು, ಕೋಲಾರ, ಕೊಪ್ಪಳ, ಉತ್ತರ ಕನ್ನಡ ಜಿಲ್ಲೆಯಲ್ಲಿ 1 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಕಡಿಮೆಯಾದ ಕೊರೊನಾ ಪ್ರಕರಣಗಳು; ಇಂದು 2,51,209 ಹೊಸ ಪ್ರಕರಣ ಪತ್ತೆ, 627 ಜನರು ಸೋಂಕಿನಿಂದ ನಿಧನ

ಇದನ್ನೂ ಓದಿ: ಭಾರತ್ ಬಯೋಟೆಕ್​ನ ನೇಸಲ್ ಕೊವಿಡ್ ಬೂಸ್ಟರ್​ ಪ್ರಯೋಗಕ್ಕೆ ಅನುಮತಿ

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ