Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 315 ಜನರಿಗೆ ಕೊರೊನಾ ದೃಢ; 2 ಮಂದಿ ಸಾವು
ಬೆಂಗಳೂರಿನಲ್ಲಿ ಇಂದು ಒಂದೇ ದಿನ 152 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,56,136 ಕ್ಕೆ ಏರಿಕೆಯಾಗಿದೆ. 12,56,136 ಸೋಂಕಿತರ ಪೈಕಿ 12,34,519 ಜನರು ಗುಣಮುಖರಾಗಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 28) ಹೊಸದಾಗಿ 315 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,95,600 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,50,542 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,198 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6,831 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 152 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,56,136 ಕ್ಕೆ ಏರಿಕೆಯಾಗಿದೆ. 12,56,136 ಸೋಂಕಿತರ ಪೈಕಿ 12,34,519 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,329 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,287 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 152, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 0, ಚಿತ್ರದುರ್ಗ 1, ದಕ್ಷಿಣ ಕನ್ನಡ 19, ದಾವಣಗೆರೆ 2, ಧಾರವಾಡ 49, ಗದಗ 0, ಹಾಸನ 9, ಹಾವೇರಿ 0, ಕಲಬುರಗಿ 2, ಕೊಡಗು 8, ಕೋಲಾರ 0, ಕೊಪ್ಪಳ 0, ಮಂಡ್ಯ 1, ಮೈಸೂರು 26, ರಾಯಚೂರು 0, ರಾಮನಗರ 0, ಶಿವಮೊಗ್ಗ 10, ತುಮಕೂರು 11, ಉಡುಪಿ 10, ಉತ್ತರ ಕನ್ನಡ 8, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 28/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/bX59wyLqpY
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/Pr1GkKRPyL
— K’taka Health Dept (@DHFWKA) November 28, 2021
ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.
ದಾವಣಗೆರೆ ಒಂದೇ ದಿನ 26 ಸಾವಿರ ಜನರಿಗೆ ಲಸಿಕೆ ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗುವ ಆತಂಕ ಉಂಟಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಂದು ಒಂದೇ ದಿನ 26 ಸಾವಿರ ಜನರಿಗೆ ಲಸಿಕೆ ನೀಡಲಾಗಿದೆ. ಸಿಬ್ಬಂದಿ ಮನೆಮನೆಗೆ ತೆರಳಿ ಕೊವಿಡ್ ಲಸಿಕೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಭಾನುವಾರ ಇಬ್ಬರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ದಾವಣಗೆರೆ ಹಾಗೂ ಹೊನ್ನಾಳಿಯ ತಲಾ ಒಬ್ಬರಿಗೆ ಸೋಂಕು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 14 ಜನ ಸಕ್ರಿಯ ಸೋಂಕಿತರು ಇದ್ದಾರೆ. ಸಕ್ರಿಯ ಸೋಂಕಿತರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಹೊಸ ತಳಿಯ ಕೊರೊನಾ ಆತಂಕ ಹಿನ್ನೆಲೆ; ಆರೋಗ್ಯ ಇಲಾಖೆ, ತಾಂತ್ರಿಕ ಸಲಹಾ ಸಮಿತಿ ಜೊತೆ ಸಚಿವ ಸುಧಾಕರ್ ಸಭೆ